ಮಂಗಳೂರು: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ನಗರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ನಡುವೆ ಶುಕ್ರವಾರದಂದು ಮಸೀದಿಗಳಲ್ಲಿ ಪ್ರಾರ್ಥನೆ ನಡೆಯುತ್ತದೆ. ಹೀಗೆ ಎಲ್ಲಾ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶುಕ್ರವಾರದಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.
ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ: ರಘುಪತಿ ಭಟ್
ಉಡುಪಿ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಸೂಕ್ತ ಮಾರ್ಗದರ್ಶನ ನೀಡಿ ಮಾತನಾಡಿದರು. ಯಾವುದೇ ಪಕ್ಷಭೇದವಿಲ್ಲದೆ ಕ್ಷೇತ್ರದ ಭಕ್ತನಾಗಿ ತನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡಲು ಸಿದ್ಧ ಎಂದರು. ಕ್ಷೇತ್ರದ ಅಭಿವೃದ್ಧಿಯಲ್ಲಿ ಸರ್ವರೂ ಭಾಗಿಗಳಾಗಿ, ಆದಷ್ಟು ಬೇಗ ಜೀರ್ಣೋದ್ದಾರಗೊಲ್ಲುವಂತಾಗಲಿ ಎಂದು ಶುಭ ಹಾರೈಸಿದರು. ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, […]
ಮೂಡುಬಿದಿರೆ:: ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕಿಸ್ಮಸ್ ಸಂಭ್ರಮ:
ಮೂಡುಬಿದಿರೆ: ಕ್ರಿಸ್ತನ ಜನನ ಮತ್ತು ಜೀವನ ಶೋಷಿತರ ಉದ್ಧಾರಕ್ಕಾಗಿ. ಪ್ರಾಮಾಣಿಕತೆ ಮತ್ತು ಬಡ ಜನರ ಕಷ್ಟದಲ್ಲಿ ಗುರುತಿಸಿಕೊಳ್ಳುವುದೆ ನಿಜವಾದ ಆಚರಣೆ ಎಂದು ಮಂಗಳೂರಿನ ಧರ್ಮಗುರುಗಳಾದ ವಂದನೀಯ ಎಫ್. ಎಕ್ಸ್. ಗೋಮ್ಸ್ ಹೇಳಿದರು. ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ೨೦೧೯ ಸಾಲಿನ ಆಳ್ವಾಸ್ ಕ್ರಿಸ್ಮಸ್ ಆಚರಣೆಯ ಪ್ರಾರ್ಥನ ಕೂಟದಲ್ಲಿ ಬೈಬಲ್ ವಾಚನ ಹಾಗೂ ಸಂದೇಶವನ್ನು ನೀಡಿದರು. ಪ್ರೀತಿಸುವ, ಹಂಚುವ, ಕ್ಷಮಿಸುವ ಮತ್ತು ನಗುವ ಪ್ರತಿ ದಿನವೂ ಹಬ್ಬವಿದ್ದಂತೆ. ಮದರ್ ತೆರೆಸಾ ಮತ್ತು ಮಹಾತ್ಮಾ ಗಾಂಧಿಯಂತ ವ್ಯಕ್ತಿತ್ವಗಳು ಹುಟ್ಟಿಕೊಂಡಾಗ […]
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸ್ವರ ಕಂಠೀರವ ಕಾರ್ಯಕ್ರಮ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ,ಮಧುರ ತರಂಗ ಮಂಗಳೂರು ಇವರು ಆಯೋಜಿಸಿರುವ ಜೂನಿಯರ್ ರಾಜಕುಮಾರ್ ಜಗದೀಶ್ ಶಿವಪುರ ಇವರ ಸಂಗೀತ ಕ್ಷೇತ್ರದ ಐದು ದಶಕಗಳ ಸಾಧನೆಯ ಸುವರ್ಣಮಹೋತ್ಸವ “ಸ್ವರ ಕಂಠೀರವ” ಕಾರ್ಯಕ್ರಮವನ್ನು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಠದ ದಿವಾನರಾದ ಶಿಬರೂರು ವೇದವ್ಯಾಸ ತಂತ್ರಿ,ಜಗದೀಶ್ ಶಿವಪುರ ಮೊದಲಾದವರು ಉಪಸ್ಥಿತರಿದ್ದರು.
ಡಿ.22: ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಕಾರ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಆಚರಣೆಯ ಕುರಿತು ಪೂರ್ವಭಾವಿ ಸಮಾಲೋಚನೆಯ ಸಭೆಯನ್ನು ಡಿ. 22: ರಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳದ ಎಸ್.ವಿ.ಟಿ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಅಪರಾಹ್ನ 3.30 ಕ್ಕೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಕೊಂಕಣಿ ಸಾಹಿತ್ಯಕ್ಕೆ ಸಂಬಂಧಪಟ್ಟ ಮಿತ್ರರು ಆಗಮಿಸುವಂತೆ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ| ಕೆ. ಜಗದೀಶ್ ಪೈ ತಿಳಿಸಿದ್ದಾರೆ.