ಡಿ.24 ಕ್ಕೆ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ 85 ರ ಸಂಭ್ರಮ.

ಕುಂದಾಪುರ: ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡ, ಮಾಜಿ ಶಾಸಕ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿರುವ ಬಿ.ಅಪ್ಪಣ್ಣ ಹೆಗ್ಡೆಯವರಿಗೆ ೮೫ ವರ್ಷಗಳು ತುಂಬುತ್ತಿದ್ದು, ಇದರ ಅಂಗವಾಗಿ ಡಿ.೨೪ ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿರುವ ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಪ್ರಶಸ್ತಿ ಪ್ರದಾನ ಹಾಗೂ ಅಶಕ್ತರಿಗೆ ದತ್ತಿನಿಧಿ ವಿತರಣೆ ಮಾಡಲಾಗುವುದು ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ರಾಮಕಿಶನ್ ಹೆಗ್ಡೆ ಶುಕ್ರವಾರ ಬಸ್ರೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. […]

ತರಾತುರಿಯಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಕಾಯಿದೆ: ಪ್ರಶಸ್ತಿ ಹಿಂದಿರುಗಿಸಲು ಬನ್ನಾಡಿ ನಿರ್ಧಾರ

ಕುಂದಾಪುರ: ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಾಮಾನಗಳು ಹಾಗೂ ಕೇಂದ್ರ ಸರ್ಕಾರವು ತರಾತುರಿಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸಿಎಎ ಹಾಗೂ ಎನ್‌ಆರ್‌ಸಿ ಕಾಯಿದೆ ವಿರೋಧಿಸಿ ತಮಗೆ ಬಂದಿರುವ ನಾಟಕ ಅಕಾಡೆಮಿ ಪ್ರಶಸ್ತಿ ಹಿಂತಿರುಗಿಸಲು ನಿರ್ಧರಿಸುವುದಾಗಿ ಹಿರಿಯ ರಂಗಕರ್ಮಿ ಪ್ರೊ.ವಸಂತ ಬನ್ನಾಡಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು udupi xpress ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ ಹಾಗೂ ಕಲ್ಬುರ್ಗಿಯವರ ಹತ್ಯೆಯಾದ ಸಂದರ್ಭದಲ್ಲಿ ಪ್ರಶಸ್ತಿ ಹಿಂತಿರುಗಿಸುವ ಕೂಗು ಬಂದಾಗಲು ಸಹನೆಯಿಂದ ಕಾದಿದ್ದೆ. ಇದೀಗ ದೇಶದಲ್ಲಿ ಹೆಚ್ಚಾಗುತ್ತಿರುವ ಪ್ರಜಾಸತ್ತಾತ್ಮಕ […]

ಗಂಗೊಳ್ಳಿ: ಮಂಗಳೂರು ಪೊಲೀಸ್ ಗೋಲಿಬಾರ್ ಘಟನೆ ಖಂಡಿಸಿ ಮುಸ್ಲಿಂ ವರ್ತಕರಿಂದ ಬಂದ್

ಕುಂದಾಪುರ: ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆ ಖಂಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಗಂಗೊಳ್ಳಿಯಲ್ಲಿ ಮುಸ್ಲಿಂ ವರ್ತಕರು ಬಂದ್ ಆಚರಿಸಿದರು. ತಮ್ಮ ದೈನಂದಿನ ವ್ಯವಹಾರವನ್ನು ಶುಕ್ರವಾರ ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿದ ಮುಸ್ಲಿಂ ವರ್ತಕರು, ಶಾಂತಿಯುತವಾಗಿ ಬಂದ್ ಆಚರಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮುಸ್ಲಿಮರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿದರೆ, ಮುಸ್ಲಿಮರ ಆಟೋ ರಿಕ್ಷಾ, ಕಾರು ಮತ್ತಿತರ ವಾಹನವನ್ನು ಸ್ಥಗಿತಗೊಳಿಸಿದ್ದಾರೆ. ಅಲ್ಲದೆ ಮುಸ್ಲಿಂ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗೆ ಅವಕಾಶ […]

ಉಡುಪಿ: ಕ್ರಿಸ್‍ಮಸ್, ಹೊಸ ವರ್ಷಾಚರಣೆ ಹಿನ್ನೆಲೆ: ಪರವಾನಿಗೆ ಇಲ್ಲದೇ ಮದ್ಯ/ ಬಿಯರ್ ಸರಬರಾಜು ಸಾಧ್ಯವಿಲ್ಲ

ಉಡುಪಿ : ಕರ್ನಾಟಕ ಅಬಕಾರಿ ಕಾಯಿದೆ 1965 ರ ನಿಯಮ 15ಎ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ನಿರ್ಬಂಧಿಸಲಾಗಿದ್ದು, ರಾಜ್ಯ ಅಬಕಾರಿ ಇಲಾಖೆಯಿಂದ ಪರವಾನಗಿ ಪಡೆಯದೇ ಹಾಲ್‍ಗಳಲ್ಲಿ, ಹೋಟೆಲ್‍ಗಳಲ್ಲಿ, ಗೆಸ್ಟ್‍ಹೌಸ್‍ಗಳಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು ಮತ್ತು ಮದ್ಯಪಾನಕ್ಕೆ ಅನುವು ಮಾಡಿಕೊಡುವುದು ಅಬಕಾರಿ ಕಾಯಿದೆಯಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ರೀತಿ ಮದ್ಯಪಾನ ಮಾಡಿದಲ್ಲಿ ಅಥವಾ ಮದ್ಯಪಾನ ಮಾಡಲು ಅವಕಾಶ ನೀಡಿದಲ್ಲಿ ಸದರಿ ಕಾರ್ಯಕ್ರಮದ ಆಯೋಜಕರು/ ಕಟ್ಟಡ/ ಹಾಲ್ ಮಾಲೀಕರನ್ನು ಸಹ ಶಿಕ್ಷೆಗೆ ಒಳಪಡಿಸಲು […]

ಆರೋಗ್ಯ ಗಂಭೀರವಾಗಿದ್ದರೂ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ: ಡಾ.ಸುಧಾ ವಿದ್ಯಾ ಸಾಗರ್

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ‌ಸ್ಥಿತಿ ಗಂಭೀರವಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡದ ನೇತೃತ್ವ ವಹಿಸಿರುವ ಡಾ.ಸುಧಾ ವಿದ್ಯಾ ಸಾಗರ್ ತಿಳಿಸಿದ್ದಾರೆ. ಈ ಕುರಿತು  ಶುಕ್ರವಾರ ಸಾಯಂಕಾಲ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ವೈದ್ಯರ ತಂಡ ಶ್ರೀಗಳ ಆರೋಗ್ಯ, ಚಿಕಿತ್ಸೆ ಸಂಬಂಧಿಸಿ ಮಾಹಿತಿ ನೀಡಿದರು. ಶ್ರೀಗಳಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ: ಶ್ರೀಗಳಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ‌. ಆರೋಗ್ಯದ ಬಗ್ಗೆ ನಿಖರ‌ ಮಾಹಿತಿ ಒಂದೆರಡು ದಿನಗಳಲ್ಲಿ ತಿಳಿಸಲಾಗುವುದು. ಬೆಳಗ್ಗೆಗಿಂತ ಇಂದು‌ […]