ಪೇಜಾವರ ಶ್ರೀ ಅನಾರೋಗ್ಯ ಹಿನ್ನೆಲೆ ಗಣ್ಯರಿಂದ ಶ್ರೀಗಳ ಆರೋಗ್ಯ ವಿಚಾರಣೆ

ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ಸಮಸ್ಯೆಯಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಸ್ವಾಮೀಜಿಗಳು, ಮುಖಂಡರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಭೇಟಿ ಮಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಠಕ್ಕೆ […]

ಉಡುಪಿ: ಪೇಜಾವರ ಶ್ರೀಪಾದರಿಗಾಗಿ ದೇಶಾದ್ಯಂತ ವಿವಿಧ ಮಠಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ: ಪೇಜಾವರ ಶ್ರೀಪಾದರ ಆರೋಗ್ಯದಲ್ಲಿ ಶೀಘ್ರ ಸುಧಾರಣೆ ಕಾಣಲೆಂದು ವಿವಿಧ ಮಠ, ವಿದ್ಯಾಪೀಠ, ದೇಗುಲ ಹಾಗೂ ಸಂಘ ಸಂಸ್ಥೆಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾ ಪೀಠ ಸೇರಿದಂತೆ ದೇಶಾದ್ಯಂತ ಇರುವ ಶ್ರೀಮಠದ 80ಕ್ಕೂ ಅಧಿಕ ಶಾಖೆಗಳಲ್ಲಿ ಶ್ರೀಗಳು ಗುಣಮುಖರಾಗಲಿ ಎಂದು ಅಭಿಮಾನಿಗಳು, ಶಿಷ್ಯರು, ಹಿತೈಷಿಗಳು ವಿಶೇಷ ಜಪ ಹವನ ಭಜನೆ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀಗಳ ಅನಾರೋಗ್ಯದ ವಿಷಯ ತಿಳಿದ ಯೋಗಗುರು ಬಾಬಾ ರಾಮ್‌ದೇವ್‌ ಶ್ರೀಗಳ ಆರೋಗ್ಯ ಶೀಘ್ರ ಸುಧಾರಿಸಲೆಂದು ಪ್ರಾರ್ಥಿಸಿ ಹರಿದ್ವಾರದ […]

ಪೇಜಾವರ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಪಸರಿಸುವವರ ವಿರುದ್ಧ ಕ್ರಮ, ಎಸ್ಪಿ ಎಚ್ಚರಿಕೆ

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳನ್ನು ಪಸರಿಸಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ನಿಶಾ ಜೇಮ್ಸ್‌ ಎಚ್ಚರಿಕೆ ನೀಡಿದ್ದಾರೆ. ಪೇಜಾವರ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಕೆಎಂಸಿಯ ವೈದ್ಯರು ನೀಡುವ ಮಾಹಿತಿಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಬೇಕು. ಕಿಡಿಗೇಡಿಗಳು ಪಸರಿಸುವ […]

ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ನಿಷೇಧಾಜ್ಞೆ ಮುಂದೂವರಿಕೆ

ಉಡುಪಿ: ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪ್ರಧಾನಿ:ನಾಳೆ ಅಮಿತ್ ಶಾ ಉಡುಪಿ ಭೇಟಿ ಸಾಧ್ಯತೆ

ಉಡುಪಿ: ಪೇಜಾವರ ಶ್ರೀ ಆರೋಗ್ಯ ವಿಚಾರಿಸಿ  ಪ್ರಧಾನಿ ಮೋದಿ  ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ದೂರವಾಣಿ ಕರೆ ಮಾಡಿದ್ದಾರೆ. ಶ್ರೀಗಳು ಶೀಘ್ರ ಗುಣಮುಖರಾಗುತ್ತಾರೆ ಎನ್ನುವ ಭರವಸೆಯನ್ನು ಆಪ್ತ ಕಾರ್ಯದರ್ಶಿ ನೀಡಿದ್ದಾರೆ. ನಾಳೆ ಸಂಜೆ ಮುಖ್ಯ ಮಂತ್ರಿ ಬಿಎಸ್.ಯಡಿಯೂರಪ್ಪ ಹಾಗೂ ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿ‌ ಭೇಟಿ  ನೀಡುವ ಸಾಧ್ಯತೆ ಇದೆ  ಎನ್ನಲಾಗಿದೆ.