ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪೇಜಾವರ ಶ್ರೀ

ಉಡುಪಿ: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದು, ಹಾಗಾಗಿ ಆರೋಗ್ಯವೂ ನಿಧಾನವಾಗಿ ಚೇತರಿಸಿಕೊಳ್ಳುತ್ತದೆ ಎಂದು ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ. ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿ ವದಂತಿ, ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಶ್ರೀಗಳ ಭಕ್ತರು, ಅಭಿಮಾನಿಗಳು ಆತಂಕಕ್ಕೆ ಒಳಾಗುವ ಅಗತ್ಯವಿಲ್ಲ. ಡಾ. ಸುಧಾ ವಿದ್ಯಾಸಾಗರ ಅವರ ನೇತೃತ್ವದ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದ್ದು, ವಿಶೇಷ ಕಾಳಜಿ ಹಾಗೂ ಮುತ್ತುವರ್ಜಿಯಿಂದ  ಶ್ರೀಗಳಿಗೆ ಚಿಕಿತ್ಸೆ […]

ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪುತ್ತಿಗೆ ಶ್ರೀಪಾದರು

ಉಡುಪಿ: ತೀವ್ರ ಅನಾರೋಗ್ಯದ ಹಿನ್ನೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳನ್ನು ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಭೇಟಿ ಮಾಡಿ, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿತ್ತು. ಚಿಕಿತ್ಸೆಯ ಬಳಿಕ ಸ್ಥಿರವಾಗಿದೆ ಎಂದು ಪುತ್ತಿಗೆ ಶ್ರೀ ತಿಳಿಸಿದ್ದಾರೆ.

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮುಂಜಾನೆ 5 ಗಂಟೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶ್ರೀಗಳ ಈಗಿನ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದಾರೆ. ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಪೇಜಾವರ ಶ್ರೀ ಅಸ್ವಸ್ಥ: ಸಚಿವ ಕೋಟ‌ ಭೇಟಿ

ಅಸ್ವಸ್ಥತೆ ಯಿಂದ ಮಣಿಪಾಲ ಆಸ್ಪತ್ರೆ ತೀವ್ರ ನಿಗಾದಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರನ್ನು  ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಿಗ್ಗೆ ಸಂದರ್ಶಿಸಿದರು. ಆಸ್ಪತ್ರೆಯ ನಿಗಾ ವಿಭಾಗಕ್ಕೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಸಮಾಲೋಚಿಸಿ ಶ್ರೀ ಗಳ ಆರೋಗ್ಯದ ಮಾಹಿತಿ ಪಡೆದರು.

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ತೀವ್ರಗೊಂಡ ಪ್ರತಿಭಟನೆ

ದೆಹಲಿ: ದೇಶಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಮಧ್ಯಾಹ್ನವಾಗುತ್ತಿದ್ದಂತೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಮಹಾರಾಷ್ಟ್ರ, ದೆಹಲಿ, ಗುಜರಾಜ್, ಅಸ್ಸಾಂ, ಉತ್ತರ ಪ್ರದೇಶ , ಕರ್ನಾಟಕದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಆಕ್ರೋಶದ ಜ್ವಾಲೆ ಹೊತ್ತಿ ಉರಿದಿದೆ. ದೆಹಲಿಯಂತೂ ಪ್ರತಿಭಟನೆ ಕಾವಿಗೆ ಅಕ್ಷರಶಃ ತತ್ತರಿಸಿ ಹೋಗಿದೆ. ಉತ್ತರ ಪ್ರದೇಶದ ನಾನಾ ಕಡೆಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ತೀವ್ರಗೊಂಡಿದ್ದು, ಪೊಲೀಸ್ ಠಾಣೆಗೆ ಬೆಂಕಿ, ರಾಜ್ಯ ಸಾರಿಗೆ ಸಂಸ್ಥೆಯ […]