ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು:ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ಕಾರ್ಕಳ : ಕ್ರೀಡೆಗಳು ವಿದ್ಯಾರ್ಥಿಗಳನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಬರಿಯ ಓದಿನ ಕಡೆಗೆ ಮಾತ್ರ ಗಮನ ನೀಡದೆ ಕ್ರೀಡೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡು ಸಾಧನೆಗಳನ್ನು ಮಾಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಬೇಕಾದರೆ ಕನಸುಗಳು ಮುಖ್ಯ. ಹಾಗೂ ಅದನ್ನು ಸಾಧಿಸುವ ಗುರಿ ಇರಬೇಕು. ದೃಢ ಪ್ರಯತ್ನದಿಂದ, ಗಟ್ಟಿ ಮನಸ್ಸಿದ್ದರೆ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಶ್ರೀ ಭುವನೇಂದ್ರ ಕಾಲೇಜಿನ ಟ್ರಸ್ಟಿ ಎ. ಚಂದ್ರಶೇಖರ ಹೆಗ್ಡೆ ಹೇಳಿದರು. ಇವರು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದಲ್ಲಿ ನಡೆದ ವಾರ್ಷಿಕ ಕ್ರೀಡಾ […]

ಉಡುಪಿ ಬಡಗಬೆಟ್ಟು ಕ್ರೆಡಿಟ್‌ ಕೋ-–ಆಪರೇಟಿವ್‌ ಸೊಸೈಟಿಯ ಶತಮಾನೋತ್ಸವ

ಉಡುಪಿ:  ಸಹಕಾರಿ ಸಂಘವು ದೇಶದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದೆ ಎಂದು ಮಂಗಳೂರು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಹೇಳಿದರು. ಉಡುಪಿ ಬಡಗಬೆಟ್ಟು ಕ್ರೆಡಿಟ್‌ ಕೋ-–ಆಪರೇಟಿವ್‌ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪದ ಸಮಾರಂಭದ ಪ್ರಯುಕ್ತ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಸಹಕಾರಿಗಳ ಸಮ್ಮಿಲ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಆರ್‌ಬಿಐಯಲ್ಲಿ ಸಹಕಾರಿ ಸಂಘಗಳಿಗೆ ಬ್ಯಾಂಕ್‌ ಮಾನ್ಯತೆ ಕೊಡುವ ಅವಕಾಶವಿದ್ದರೆ, ಮೊತ್ತ ಮೊದಲು ಬಡಗಬೆಟ್ಟು ಸೊಸೈಟಿಗೆ ಅವಕಾಶ ನೀಡಬೇಕು. ಉಡುಪಿ ಸಹಕಾರಿ ಕ್ಷೇತ್ರದ […]

ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆ, ಕಣ್ಣು ಬಿಟ್ಟ ಶ್ರೀಗಳು: ಸಿಎಂ ಯಡಿಯೂರಪ್ಪ

ಉಡುಪಿ: ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಆಗಿದೆ. ಈಗ ಶ್ರೀಗಳು ಕಣ್ಣು ಬಿಡುತ್ತಿದ್ದು, ಸಹಜ ಉಸಿರಾಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮಾಧ್ಯಮಗಳ ಜತೆಗೆ ಮಾತನಾಡಿದರು. ಪೇಜಾವರ ಶ್ರೀಪಾದರು ಶೀಘ್ರ ಗುಣಮುಖರಾಗಿ, ಮತ್ತೆ ಅವರು ಕೃಷ್ಣ ಮಠಕ್ಕೆ ಬಂದು ಕೃಷ್ಣನ ಸೇವೆ ಮಾಡುವಂತಾಗಬೇಕು. ಅದನ್ನು ನೋಡುವ […]

ಬಡಗಬೆಟ್ಟು ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ನಾಳೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ಡಿ. 22ರಂದು ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಮಾರಂಭವನ್ನು ಉದ್ಘಾಟಿಸುವರು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಸಿಎಸ್‌ಐ ಕರ್ನಾಟಕ ಸದರ್ನ್‌ ಡಯಾಸಿಸ್‌ ಕೋಶಾಧಿಕಾರಿ ವಿನ್ಸೆಂಟ್‌ ಪಾಲನ್ನ, ಧರ್ಮಗುರು ಮೊಹಮ್ಮದ್‌ […]

ಡಿ.25 ಕ್ಕೆ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳ 

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಂದು ನಡೆಯಬೇಕಿದ್ದ ಮೂಡುಬಿದಿರೆಯ ಪ್ರತಿಷ್ಠಿತ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವನ್ನು ಡಿಸೆಂಬರ್ 25ಕ್ಕೆ ಮುಂದೂಡಲಾಗಿದೆ.