ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ  ಭೇಟಿ

ಉಡುಪಿ:  ಶ್ರೀಕೃಷ್ಣ ಮಠಕ್ಕೆ,ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು  ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ: ಭಕ್ತರು ಆತಂಕ ಪಡಬೇಡಿ

ಉಡುಪಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದ್ದು, ಸ್ವಲ್ಪ ಚೇತರಿಕೆ ಕಂಡು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ತಿಳಿದಿದ್ದಾರೆ. ಶ್ರೀಗಳ ಎದೆಯಲ್ಲಿ ಕಟ್ಟಿದ ಕಫ ನಿಧಾನವಾಗಿ ಕರಗುತ್ತಿದೆ. ಆದರೆ ವಯಸ್ಸಿನ ಕಾರಣಕ್ಕೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಕ್ತರು ಆತಂಕ ಪಡಬೇಕಿಲ್ಲ. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ. ಗಣ್ಯರ ಭೇಟಿ: ಶನಿವಾರ ರಾತ್ರಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಮಾಜಿ […]