ಆಕ್ಷೇಪಾರ್ಹ ಬರಹ ಪ್ರಕಟಿಸಿದ ಆರೋಪ: ಸೌದಿಯಲ್ಲಿ ಹರೀಶ್ ಬಂಗೇರ ಬಂಧನ ಬಿಡುಗಡೆಗೆ ನೆರವು ಕೋರಿ ಕುಟುಂಬಸ್ಥರು ಎಸ್ಪಿಗೆ ಮನವಿ

ಉಡುಪಿ: ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ ಆರೋಪದ ಮೇಲೆ ಸೌದಿಅರೆಬೀಯಾದಲ್ಲಿ ಬಂಧನಕ್ಕೊಳಗಾಗಿರುವ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಅವರನ್ನು ಬಿಡುಗಡೆಗೊಳಿಸಲು ನೆರವು ಕೋರಿ ಕುಟುಂಬಸ್ಥರು ಎಸ್ಪಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು. ನನ್ನ ಪತಿ ಯಾವುದೇ ತಪ್ಪು ಮಾಡಿಲ್ಲ. ಕೆಲ ಕಿಡಿಗೇಡಿಗಳು ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಪತಿಯನ್ನು ಸಮಸ್ಯೆಗೆ ಸಿಲುಕಿದ್ದಾರೆ. ಅವರ ಬಿಡುಗಡೆಗೆ ಸರ್ಕಾರ ಕೂಡಲೇ ನೆರವು ನೀಡಬೇಕು ಎಂದು ಹರೀಶ್‌ ಬಂಗೇರ ಅವರ ಪತ್ನಿ ಸುಮನಾ ಮನವಿ ಮಾಡಿದರು. ಹರೀಶ್‌ ಅವರು […]

ಉಡುಪಿ:ಶ್ರೀಕೃಷ್ಣ ಮಠಕ್ಕೆ ಮಾಜಿ ಸಚಿವೆ ಉಮಾಭಾರತಿ ಭೇಟಿ

ಉಡುಪಿ:  ಶ್ರೀಕೃಷ್ಣ ಮಠಕ್ಕೆ,ಕೇಂದ್ರ ಸರ್ಕಾರದ ಮಾಜಿ ಸಚಿವೆ ಉಮಾಭಾರತಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಗಳವರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್,ಪೇಜಾವರ ಶ್ರೀಪಾದರ ಕಾರ್ಯದರ್ಶಿ ಡಿ.ಪಿ.ಅನಂತ್,ಕ.ಸಾ.ಪ ಜಿಲ್ಲಾಧ್ಯಕ್ಷ  ಪ್ರದೀಪಕುಮಾರ್ ಕಲ್ಕೂರ  ಮೊದಲಾದವರು ಉಪಸ್ಥಿತರಿದ್ದರು.

ಜನವರಿಯಿಂದ ಆನ್‍ಲೈನ್‍ನಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಆರಂಭ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಸಾರ್ವಜನಿಕರು ಜನವರಿ ತಿಂಗಳಿನಿಂದ ಆಯ್ದ ಇಲಾಖೆಗಳಲ್ಲಿ ಆನ್‍ಲೈನ್ ಮೂಲಕ ಸಹ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಆನ್‍ಲೈನ್ ಮೂಲಕವೇ ಹಣ ಪಾವತಿಸಿ, ಆನ್‍ಲೈನ್ ಮೂಲಕವೇ ತಮಗೆ ಬೇಕಾದ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಆನ್‍ಲೈನ್ ಮೂಲಕ ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಆನ್‍ಲೈನ್‍ನಲ್ಲಿ ಮಾಹಿತಿ ಹಕ್ಕು ವ್ಯವಸ್ಥೆಯನ್ನು ಜಾರಿಗೆ […]

ಜಪ್ಪಿನಮೊಗರು ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ 

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ವಾರ್ಡಿನ ತಂದೊಳಿಗೆ ನಾಗಬನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಜಪ್ಪಿನಮೊಗರು ವಾರ್ಡಿನ ತಂದೊಳಿಗೆ ನಾಗಬನಕ್ಕೆ ತೆರಳುವ ರಸ್ತೆ ಅಭಿವೃದ್ಧಿಪಡಿಸಬೇಕೆಂದು ಈ ಪರಿಸರದ ಸಾರ್ವಜನಿಕರು ನನ್ನಲ್ಲಿ ಕೋರಿದ್ದರು. ಸ್ಥಳೀಯರ ಬೇಡಿಕೆಯ ಅನ್ವಯ ಈ ರಸ್ತೆ ಕಾಮಗಾರಿಗೆ 8 ಲಕ್ಷ ರೂಪಾಯಿ ಬಿಡುಗಡೆಗೊಳಿಸಿದ್ದು, ಶೀಘ್ರವೇ ಕಾಮಗಾರಿ ನಡೆಯಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಎಲ್ಲಾ ವಾರ್ಡುಗಳ […]

ಸೌದಿ ಅರೇಬಿಯಾದಲ್ಲಿ ಹರೀಶ್ ಬಂಗೇರ ಬಂಧನ: ಬಿಡುಗಡೆಗೆ ಸಹಾಯ ಕೋರಿ‌ ಎಸ್ ಪಿಗೆ ಮನವಿ

ಉಡುಪಿ: ಆಕ್ಷೇಪಾರ್ಹ ಬರಹದ ಹಿನ್ನೆಲೆಯಲ್ಲಿ ಸೌದಿಅರೆಬೀಯಾದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎನ್ನಲಾದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡುವಂತೆ ಕೋರಿ ಕುಟುಂಬಸ್ಥರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಸಲ್ಲಿಸಿದರು. ಹರೀಶ್‌ ಬಂಗೇರ ಅವರ ಪತ್ನಿ ಸುಮನ ಎಂ. ಮಾತನಾಡಿ, ಪತಿ ಹರೀಶ್‌ ಯಾವುದೇ ತಪ್ಪು ಮಾಡಿಲ್ಲ. ಅವರ ಫೇಸ್‌ಬುಕ್‌ ಖಾತೆಯನ್ನು ಕಿಡಿಗೇಡಿಗಳು ತಿರುಚಿದ್ದಾರೆ. ಇದರಿಂದ ಅವರು ಸಮಸ್ಯೆಗೆ ಸಿಲುಕಿಕೊಂಡಿದ್ದು, ಅವರ ಬಿಡುಗಡೆಗೆ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು […]