ತುಳು ಭಾಷೆಗೆ ರಾಜ್ಯದ ಸ್ಥಾನಮಾನ ದೊರಕದಿರುವುದು ಬೇಸರದ ಸಂಗತಿ: ಶೇಷಶಯನ

ಉಡುಪಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಗೆ ರಾಜ್ಯದ ಸ್ಥಾನಮಾನ ದೊರಕದಿರುವುದು ಬೇಸರದ ಸಂಗತಿ. ಪ್ರತ್ಯೇಕ ಮಾನ್ಯತೆ ಸಿಕ್ಕಿದರೆ ತುಳು ಭಾಷೆಯ ಅಭಿವೃದ್ಧಿ ಹಾಗೂ ಸಾಹಿತ್ಯ, ಕಲೆ, ಪರಂಪರೆಯ ಬೆಳವಣಿಗೆಗೆ ಸಹಕಾರಿ ಆಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದರು. ತುಳುಕೂಟ ಉಡುಪಿ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಉಡುಪಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತುಳು […]

ಜ. 26ಕ್ಕೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘದಿಂದ ಪ್ರತಿಭಟನೆ

ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಜ. 26ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಚ್‌. ಅಣ್ಣಪ್ಪ ಸ್ವಾಮಿ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನ ಮಂತ್ರಿ ಭಾರತೀಯ ಜನಔಷಧ ಕೇಂದ್ರದಲ್ಲಿ ಎಲ್ಲ ರೀತಿಯ ಔಷಧಿಗಳು ದೊರೆಯಬೇಕು. ಜನ ಔಷಧ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಇಎಸ್‌ಐ, ಪಿಎ-, ಉದ್ಯೋಗ, ವೇತನ, ಆರೋಗ್ಯ, ವಾಸ್ತವ್ಯ ಭದ್ರತೆ ಒದಗಿಸಬೇಕು […]

ಡಿ.30ಕ್ಕೆ ಬಿಜೆಪಿ ಸಂಕಲ್ಪ ಸಮಾವೇಶ ಹಾಗೂ ನಗರ ಬಿಜೆಪಿಯ ನಿಯೋಜಿತ ಅಧ್ಯಕ್ಷ ಮಹೇಶ್‌ ಠಾಕೂರ್‌ ಪದಗ್ರಹಣ ಸಮಾರಂಭ

ಉಡುಪಿ: ಬಿಜೆಪಿ ಉಡುಪಿ ನಗರ ಘಟಕದ ವತಿಯಿಂದ ಇದೇ 30ರಂದು ಸಂಜೆ 5ಗಂಟೆಗೆ ಉಡುಪಿ ಕಿದಿಯೂರು ಹೋಟೆಲ್‌ನ ಶೇಷಯನ ಸಭಾಂಗಣದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಹಾಗೂ ಉಡುಪಿ ನಗರ ಬಿಜೆಪಿಯ ನಿಯೋಜಿತ ಅಧ್ಯಕ್ಷ ಮಹೇಶ್‌ ಠಾಕೂರ್‌ ಅವರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಉಡುಪಿ ನಗರ ಬಿಜೆಪಿಯ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ನಗರ ವ್ಯಾಪ್ತಿಯಡಿ ಬರುವ 132 ಬಿಜೆಪಿ ಮತಗಟ್ಟೆ ಸಮಿತಿಯ ಅಧ್ಯಕ್ಷರ ಪದಗ್ರಹಣ ಹಾಗೂ ಪ್ರಮಾಣಪತ್ರ […]

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ತೀರಾ ಗಂಭೀರ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಅವರು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ. ಅವರ ದೇಹ ಸ್ಥಿತಿ ನಿನ್ನೆಗಿಂತ ಮತ್ತಷ್ಟು ಕ್ಷೀಣವಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಆಳ್ವಾಸ್‌ನಲ್ಲಿ ಜ.1 -6 ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ:

ಮೂಡುಬಿದಿರೆ: ಜನವರಿ 1 ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೦ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್ ಅನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ ೪೦೦ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 5೦೦೦ ಅಥ್ಲೀಟ್‌ಗಳು ಹಾಗೂ 2೦೦೦ ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕ್ರೀಡಾಕೂಟದ […]