ಡಿ. 29 ರಿಂದ ಮಲ್ಪೆ ಬೀಚ್ ಉತ್ಸವ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ  ಮಂಡಳಿಗಳು ಉಡುಪಿ ಇವರ ಸಹಯೋಗದಲ್ಲಿ ಡಿಸೆಂಬರ್ 29 ರಿಂದ 31 ರ ವರೆಗೆ ಮಲ್ಪೆ ಬೀಚ್‍ನಲ್ಲಿ, ಮಲ್ಪೆ ಬೀಚ್ ಉತ್ಸವ- 2019 ನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಶುಕ್ರವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆದ […]

ಉಡುಪಿ ಜಿಲ್ಲೆಯಲ್ಲಿ 180 ಕೋಟಿ ರೂ. ವೆಚ್ಚದ ಕಾಮಗಾರಿ: ಸಚಿವ ಮಾಧುಸ್ವಾಮಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 180 ಕೋಟಿ ರೂ. ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅವರು ಶುಕ್ರವಾರ, ಉಡುಪಿಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕರಾವಳಿ ಭಾಗದಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ಅಂರ್ತಜಲದ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಪಶ್ವಿಮವಾಹಿನಿ ಯೋಜನೆಯಡಿಯಲ್ಲಿ ಹೆಚ್ಚಿನ […]

ಉಡುಪಿ:ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಬಳಿ ಕೊಠಡಿ ಉದ್ಘಾಟನೆ

ಉಡುಪಿ:  ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಹತ್ತಿರ ನಿರ್ಮಿಸಿರುವ ನೂತನ ಕೊಠಡಿಯನ್ನು ಪರ್ಯಾಯ ಪಲಿಮಾರು  ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ  ಕರ್ನಾಟಕದ ಕಾನೂನು,ಸಂಸದೀಯ ವ್ಯವಹಾರ,ಸಣ್ಣ ನೀರಾವರಿ ಖಾತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸ್ವಾಮಿಜಿಯವರ  ಆಪ್ತಕಾರ್ಯದರ್ಶಿ ಗಿರೀಶ್ ಉಪಾಧ್ಯಾಯ,ವಿದ್ವಾಂಸರಾದ ಕೊರ್ಲಳ್ಳಿ ವೆಂಕಟೇಶ ಆಚಾರ್ಯ,ಮಠದ  ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು

ವಿಹಿಂಪ ವಿಶ್ವಸ್ಥ ಮಂಡಳಿ: ಪ್ರಬಂಧ ಸಮಿತಿಯ ಸಂಯುಕ್ತ ಬೈಠಕ್ ಗೆ ಚಾಲನೆ

ಮಂಗಳೂರು: ಮಂಗಳೂರಿನ ಸಂಘನಿಕೇತದಲ್ಲಿ ನಡೆಯುವ ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ವಿಶ್ವಸ್ಥ ಮಂಡಳಿ ಮತ್ತು ಪ್ರಬಂಧ ಸಮಿತಿಯ ಸಂಯುಕ್ತ ಬೈಠಕನ್ನು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ ಕೋಕ್ಜೆ ಪ್ರಧಾನ ಭಾಷಣ ಮಾಡಿದರು‌‌. ಐದು ದಿನಗಳ ಕಾಲ ನಡೆಯಲಿರುವ ‌ಈ ಅಂತಾರಾಷ್ಟ್ರೀಯ ಬೈಠಕ್ ನಲ್ಲಿ ದೇಶ ವಿದೇಶಗಳ ಸುಮಾರು 350ಕ್ಕೂ ಅಧಿಕ‌ […]

ಮಂಗಳೂರು: 30 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ 

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ಪಶ್ಚಿಮ ವಾರ್ಡ್ ಹಾಗೂ ಕದ್ರಿ ಉತ್ತರ ವಾರ್ಡಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸಾರ್ವಜನಿಕರು ಗುದ್ದಲಿಪೂಜೆ ನೆರವೇರಿಸಿದರು. ದೇರೆಬೈಲ್ ಪಶ್ಚಿಮ ವಾರ್ಡಿನ ಸುಂಕದಕಟ್ಟೆಯಲ್ಲಿ ತಡೆಗೋಡೆ ದುರಸ್ತಿ 5 ಲಕ್ಷ ರೂ, ಸುಂಕದಕಟ್ಟೆಯ ಬಳಿ ತಡೆಗೋಡೆ ನಿರ್ಮಾಣಕ್ಕೆ 5 ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಸಾರ್ವಜನಿಕರ ಮುಖೇನ ಗುದ್ದಲಿಪೂಜೆ ನೆರವೇರಿಸಿದ್ದೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಹಾಗೂ ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆ ಬಳಿ 20 ಲಕ್ಷ […]