ಜ.5: ಮೆಲ್ವಿನ್ ಪೆರಿಸ್ ಬಳಗದಿಂದ ಸಂಗೀತ ರಸಮಂಜರಿ

ಉಡುಪಿ: ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ್‌ ಇದರ ಉಡುಪಿ ವಲಯ ಸಮಿತಿಯ ವತಿಯಿಂದ ಜ. 5ರಂದು ಸಂಜೆ 5.30ಕ್ಕೆ ಉಡುಪಿಯ ಸೇಂಟ್‌ ಸಿಸಿಲಿಸ್‌ ಶಾಲಾ ಮೈದಾನಲ್ಲಿ ಕೊಂಕಣಿ ಗಾಯಕ ಮೆಲ್ವಿನ್‌ ಪೆರಿಸ್‌ ಮತ್ತು ಬಳಗದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ವಲಯ ಸಮಿತಿಯ ಅಧ್ಯಕ್ಷ ರೊನಾಲ್ಡ್‌ ಆಲ್ಮೇಡಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಉಡುಪಿ ವಲಯದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ಸಂಗ್ರಹವಾಗುವ ಹಣವನ್ನು […]

ಜ. 4ರಂದು ಜಿಲ್ಲಾ ಕೃಷಿಕ ಸಂಘದ ವತಿಯಿಂದ ಪ್ರತಿಭಟನೆ

ಉಡುಪಿ: ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ, ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯ ವಿರುದ್ಧ ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಜ. 4ರಂದು ಬೆಳಿಗ್ಗೆ 11ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಕಾಡು ಪ್ರಾಣಿಗಳ […]

ಸಮಾಜದ ಏಳಿಗೆಗೆ ಸಾಂಸ್ಕೃತಿಕ ಕಲೆ ಮುಖ್ಯ: ಗೋಪಾಲ ಶೆಟ್ಟಿ

ಉಡುಪಿ: ಸಮಾಜದ ಏಳಿಗೆಗೆ ಸಂಗೀತ, ನೃತ್ಯಗಳಂಥ ಸಾಂಸ್ಕೃತಿಕ ಕಲೆಗಳು ಅತಿ ಮುಖ್ಯ ಎಂದು ಹಿರಿಯ ಲೇಖಕ ಬಿ. ಗೋಪಾಲ ಶೆಟ್ಟಿ ಹೇಳಿದರು. ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ 42ನೇ ವಾದಿರಾಜ ಕನಕದಾಸ ಸಂಗೀತೋತ್ಸವದ ಸಮಾರೋಪ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಎಳವೆಯಲ್ಲಿಯೇ ಗುರುತಿಸಿ ಪ್ರೋತ್ಸಾಹಿಸಬೇಕು. ಈ ರೀತಿಯ ಸಾಂಸ್ಕೃತಿಕ ವಾತಾವರಣ ನಿರ್ಮಿಸುವಲ್ಲಿ ಹಾಗೂ ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಸಂಗೀತೋತ್ಸವ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿದೆ ಎಂದರು. […]

ಮುಗಿಯದ ಪಂಪ್ವೆಲ್ ಕಾಮಗಾರಿ: ಅಧಿಕಾರಿಗಳ ವಿರುದ್ಧ ನಳಿನ್ ಆಕ್ರೋಶ

ಮಂಗಳೂರು: ಮಂಗಳೂರಿನ ಪಂಪ್ ವೆಲ್‌ ಫ್ಲೈಓವರ್ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಪಂಪ್ ವೆಲ್‌ ಫ್ಲೈಓವರ್ ಜನವರಿ ಮೊದಲವಾರ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಕೆಲ ತಿಂಗಳ ಹಿಂದೆ ಹೇಳಿಕೆ ನೀಡಿದ್ದರು, ಆದರೆ ಫ್ಲೈಓವರ್ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರ […]

ಸಾಣೂರು ಯುವಕ ಮಂಡಲ ವಾರ್ಷಿಕೋತ್ಸವ ಸಮಾರಂಭ: ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದರೆ ಸಮಾಜದ ಪ್ರಗತಿ: ವಿಷ್ಣುಮೂರ್ತಿ

ಕಾರ್ಕಳ: ಯುವಕ ಸಂಘಗಳು ಸಾಮಾಜಿಕ ಚಿಂತನೆಯೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ಕೊಟ್ಟಾಗ ಸಮಾಜದ ಪ್ರಗತಿಗೆ ಕಾರಣವಾಗುತ್ತದೆ ಎಂದು ದ.ಕ ಮತ್ತು ಉಡುಪಿ ಜಿಲ್ಲಾ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಶ್ರೀ ವಿಷ್ಣುಮೂರ್ತಿ ಹೇಳಿದರು. ಅವರು ಸಾಣೂರು ಪಟೇಲ್ ದಿ.‌ ಮುದ್ದಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವಕ ಮಂಡಲ ಸಾಣೂರು ಇದರ 66ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.‌‌ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕರಾದ […]