ಜ.4-5: ರಂಗಭೂಮಿ ಉಡುಪಿ ಆಶ್ರಯದಲ್ಲಿ ನಾಟಕೋತ್ಸವ-ಪ್ರಶಸ್ತಿ ಪ್ರದಾನ
ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ನಾಟಕೋತ್ಸವ, ರಂಗಭೂಮಿ ಪ್ರಶಸ್ತಿ ಪ್ರದಾನ, ಕಲಾಂಜಲಿ ಸ್ಮರಣಸಂಚಿಕೆ ಬಿಡುಗಡೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜ. 4 ಮತ್ತು 5ರಂದು ನಗರದ ಎಂಜಿಎಂ ಕಾಲೇಜು ನೂತನ ರವೀಂದ್ರ ಮಂಟದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜ. 4ರಂದು ಸಂಜೆ 5.45ಕ್ಕೆ ಮುದ್ದಣ ಮಂಟಪದಲ್ಲಿ ರಂಗಕರ್ಮಿ, ನಟ ಮಂಡ್ಯ ರಮೇಶ್ ಅವರಿಗೆ ರಂಗ ಕಣ್ಮಣಿ ಬಿರುದಿನೊಂದಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. […]