ಹೆಮ್ಮಾಡಿ ಪ್ರೀಮಿಯರ್ ಲೀಗ್-2020 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಕುಂದಾಪುರ: ಕ್ರೀಡೆಗೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿಯಿದೆ. ಹೆಮ್ಮಾಡಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಇಲ್ಲಿನ ಯುವಕರು ಇದನ್ನು ನಿರೂಪಿಸಿದ್ದಾರೆ. ಇಲ್ಲಿ ನಡೆಯುವ ಶಾರದೋತ್ಸವ, ಗಣೇಶೋತ್ಸವ, ಜಾತ್ರ ಮಹೋತ್ಸವಗಳಲ್ಲಿ ಯುವಕರೆಲ್ಲರೂ ಒಟ್ಟಾಗಿ ಪಾಲ್ಗೊಳ್ಳುವ ಮೂಲಕ ಕಾರ್‍ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಬಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶನಿವಾರ ಹೆಮ್ಮಾಡಿಯ ಸರಕಾರಿ ಹಿ.ಪ್ರಾ. ಶಾಲೆಯ ಮೈದಾನದಲ್ಲಿ ಎರಡು ದಿನಗಳ ನಡೆದ ಹೆಮ್ಮಾಡಿ ಪ್ರೀಮಿಯರ್ ಲೀಗ್ -೨೦೨೦ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ […]

ಆಳ್ವಾಸ್ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ಗೆ ವರ್ಣರಂಜಿತ ತೆರೆ

ಮೂಡಬಿದಿರೆ: ಕ್ರೀಡಾ ವಿಜೇತರಿಗೆ ಪ್ರೋತ್ಸಾಹ ಧನ ನೀಡಿ ಉತ್ತೇಜಿಸುವಂತಹ ಮಹಾತ್‌ಕಾರ್ಯ ಆಳ್ವಾಸ್ ವಿದ್ಯಾಸಂಸ್ಥೆ ಮಾಡುತ್ತಿರುವುದು ವಿಶೇಷ ಹಾಗೂ ಸ್ತುತ್ಯರ್ಹ ಎಂದು ಮಾಜಿ ಒಲಿಂಪಿಕ್ ಕ್ರೀಡಾಪಟು ಪಿ.ಟಿ.ಉಷಾ ಹೇಳಿದರು. ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿರ್ವಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ೮೦ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಆಳ್ವಾಸ್ ಸಂಸ್ಥೆಯು ಸಮಯ ಪ್ರಜ್ಞೆ ಮತ್ತು ಶಿಸ್ತಿಗೆ ಹೆಚ್ಚು […]

ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಪರ್ಯಾಯ ಸರ್ವಜ್ಞ ಪೀಠವೇರಲಿದ್ದಾರೆ:ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ

ಪಡುಬಿದ್ರಿ: ಈ ಭಾರಿಯ ಪರ್ಯಾಯದಲ್ಲಿ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಪರ್ಯಾಯ ಸರ್ವಜ್ಞ ಪೀಠ ವೇರಲಿದ್ದಾರೆ ಎಂದು ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಗಳು ಹೇಳಿದರು. ಸೋಮವಾರ ಅದಮಾರು ಮೂಲ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಗುರುಗಳು ಹಾಕಿಕೊಟ್ಟ ಕ್ರಮದಂತೆ ಈ ಬಾರಿಯ ಪರ್ಯಾಯ ಪೀಠವನ್ನು ಕಿರಿಯ ಶ್ರೀಗಳು ಏರಲಿದ್ದಾರೆ. ವಿಶ್ವಪ್ರಿಯ ತೀರ್ಥರು, ೧೯೫೬-೫೮, ೧೯೭೨-೭೪ರಲ್ಲಿ ವಿಭುದೇಶ ತೀರ್ಥರು ಪರ್ಯಾಯ ನಡೆಸಿ ನಮ್ಮನ್ನು ೧೯೮೮-೯೦ರಲ್ಲಿ ಪರ್ಯಾಯ ಪೀಠವೇರಲು ಅವಕಾಶ […]

ಫೆ.1, 2ರಂದು ಮಲ್ಪೆ ಬೀಚ್ ಉತ್ಸವ

ಉಡುಪಿ  : ಮುಂದೂಡಲ್ಪಟ್ಟಿದ್ದ ಮಲ್ಪೆ ಬೀಚ್ ಉತ್ಸವವು ಫೆಬ್ರವರಿ 1 ಮತ್ತು 2 ರಂದು ನಡೆಯಲಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಲನಾ ಇಲಾಖೆ ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ವತಿಯಿಂದ ಬೀಚ್ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ವಿವಿಧ ಆಟೋಟ ಸ್ವರ್ಧೆ, ಸಾಂಸ್ಕøತಿಕ ಕಾರ್ಯಕ್ರಮಗಳು, […]

ಮುಸ್ಲಿಮರು ರಾಷ್ಟ್ರ‌-ಹಿಂದೂ ವಿರೋಧಿ ಕೆಲಸ ನಿಲ್ಲಿಸಲಿ, ಅನಂತರವೇ ಒಟ್ಟಾಗೋಣ: ಅಚ್ಯುತ ಕಲ್ಮಾಡಿ

ಉಡುಪಿ: ಮುಸ್ಲಿಮರು ರಾಷ್ಟ್ರ ವಿರೋಧಿ ಹಾಗೂ ಹಿಂದೂ ವಿರೋಧಿ ಕೆಲಸಗಳನ್ನು ಮಾಡುವುದನ್ನು ಮೊದಲು ನಿಲ್ಲಿಸಬೇಕು. ಆ ನಂತರ ನಮ್ಮನ್ನು ಅವರೊಂದಿಗೆ ಸೇರಿಸಿಕೊಳ್ಳುತ್ತೇವೆ ಎಂದು ವಿಎಚ್‌ಪಿ ಮುಖಂಡ ಅಚ್ಯುತ ಅಮೀನ್‌ ಕಲ್ಮಾಡಿ ಗದರಿದ್ದಾರೆ. ಉಡುಪಿಯಲ್ಲಿ ಜ. 11ರಂದು ಆಯೋಜಿಸಲು ಉದ್ದೇಶಿಸಿರುವ ಬಿಲ್ಲವ ಮತ್ತು ಮುಸ್ಲಿಮ್‌ ಸ್ನೇಹ ಸಮಾವೇಶವದ ಕುರಿತು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಮಾವೇಶವನ್ನು ರದ್ದುಗೊಳಿಸಬೇಕು ಅಥವಾ ಸಮಾವೇಶದಿಂದ ಬಿಲ್ಲವ ಎಂಬ ಪದವನ್ನು ತೆಗೆಯಬೇಕು. ಇಲ್ಲದಿದ್ದರೆ ಜ. 9ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಎಲ್ಲ […]