“ಶ್ರೀಮನ್ನಾರಾಯಣ” ಚಿತ್ರ ತಂಡ ಉಡುಪಿ ಕಲ್ಪನ ಚಿತ್ರಮಂದಿರಕ್ಕೆ ಭೇಟಿ
ಉಡುಪಿ: ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಅವನೇ ಶ್ರೀಮನ್ನಾರಾಯಣ ಚಿತ್ರತಂಡ ನಗರದ ಕಲ್ಪನ ಚಿತ್ರಮಂದಿರಕ್ಕೆ ಸೋಮವಾರ ಭೇಟಿ ನೀಡಿತು. ಈ ವೇಳೆ ಮಾಧ್ಯಮದವರ ಜತೆಗೆ ಮಾತನಾಡಿದ ನಟ ರಕ್ಷಿತ್ ಶೆಟ್ಟಿ, ಚಿತ್ರವು ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಲಯಾಳಂ, ತಮಿಳು ಹಾಗೂ ತೆಲುಗು ವರ್ಷನ್ಗೆ ಉತ್ತಮ ಪ್ರಶಂಸೆ ದೊರಕಿದೆ ಎಂದರು. ಚಿತ್ರದ ಹಿಂದಿ ವರ್ಷನ್ ಬಿಡುಗಡೆಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುತ್ತದೆ. ಹಿಂದಿಯಲ್ಲಿ ಬಿಡುಗಡೆಗೆ ಬೇಡಿಕೆ ಹೆಚ್ಚಿದ್ದು, […]
679 ಫಲಾನುಭವಿಗಳಿಗೂ ಮನೆ ನಿರ್ಮಿಸಿ ಕೊಡಬೇಕು: ಪ್ರಮೋದ್ ಮಧ್ವರಾಜ್
ಉಡುಪಿ: ನನ್ನ ಅವಧಿಯಲ್ಲಿ ನಗರ ಆಶ್ರಯ ಸಮಿತಿ ಸಭೆಯಲ್ಲಿ ಆಯ್ಕೆಗೊಂಡ ಎಲ್ಲ ಅರ್ಹ 679 ಫಲಾನುಭವಿಗಳಿಗೆ ಪ್ರಸ್ತುತ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗುವ ವಸತಿ ಸಮುಚ್ಚಯದಲ್ಲಿ ಮನೆ ನಿರ್ಮಿಸಿಕೊಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದಂತಹ ಸಂದರ್ಭದಲ್ಲಿ ಸರಳೇಬೆಟ್ಟು, ಸಣ್ಣಕ್ಕಿಬೆಟ್ಟುವಿನಲ್ಲಿ 11 ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ, ನನ್ನ ಅಧ್ಯಕ್ಷತೆಯಲ್ಲಿ ಒಟ್ಟು 679 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಆಯ್ಕೆಯಾದ […]
ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ, ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ: ಸಹಕಾರಿ ಕ್ಷೇತ್ರ ರಾಜಕೀಯ ರಹಿತವಾಗಿರಲಿ: ಡಾ.ಎಂ.ಎನ್.ಆರ್
ಉಡುಪಿ: ಗ್ರಾಮೀಣ ಭಾಗದ ರೈತರ ಏಳಿಗೆಗೆ ಸಹಕಾರಿ ಕ್ಷೇತ್ರಗಳು ಆದ್ಯತೆ ನೀಡುತ್ತಿದ್ದು, ಇಲ್ಲಿ ರಾಜಕೀಯ ಮಾಡಿದರೆ ಸಹಕಾರಿ ಕ್ಷೇತ್ರ ಬೆಳೆಯಲ್ಲ. ರೈತಾಪಿ ವರ್ಗದ ಪ್ರಗತಿ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಹಕಾರಿ ಹಾಗೂ ಕೃಷಿಕರ ಆಸಕ್ತಿಯುಳ್ಳ ವ್ಯಕ್ತಿಗಳು ಬರಬೇಕೆಂದು ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಹಾಗೂ ಎಸ್ಸಿಡಿಸಿಸಿ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅವರು ಪರ್ಕಳ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಪ್ರಯುಕ್ತ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ ಹಾಗೂ ಸಮಾರೋಪ […]
ಸಿನಿಮಾ ದೊಡ್ಡ ಉದ್ಯಮವಾಗಿ ಬೆಳೆದಿದೆ: ಡಾ.ಎಂ.ಜಿ.ವಿಜಯ
ಉಡುಪಿ: ಮನೋರಂಜನೆಗಾಗಿ ಆರಂಭವಾದ ಸಿನಿಮಾ ಇಂದು ದೊಡ್ಡ ಉದ್ಯಮವಾಗಿ ಬೆಳೆದಿದೆ ಎಂದು ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ವಿಜಯ ಹೇಳಿದರು. ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಪುಣೆಯ ಫಿಲ್ಮ್, ವಿಡಿಯೋ ಟೆಕ್ನಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ 9 ದಿನಗಳ ಚಲನಚಿತ್ರ ತಯಾರಿಕಾ ಕಾರ್ಯಾಗಾರಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಯಾವುದೇ ವಿದ್ಯೆ ಸುಲಭವಾಗಿ ಒಲಿಯಲ್ಲ, ಅದರಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಾಗ ಮಾತ್ರ ಅದು ನಮಗೆ ಒಲಿಯುತ್ತದೆ. ಅಭಿನಯ ಎಂಬುವುದು […]
ಪೌರತ್ವ ಕಾಯ್ದೆಯನ್ನು ಸ್ವಾತಂತ್ರ್ಯ ಬಂದಾಗಲೇ ಜಾರಿಗೊಳಿಸಬೇಕಿತ್ತು: ಬಸವರಾಜ ಬೊಮ್ಮಾಯಿ
ಉಡುಪಿ: ಪೌರತ್ವ ಕಾಯ್ದೆಯನ್ನು ಭಾರತಕ್ಕೆ ಸ್ವಾತಂತ್ರ್ಯ ಬಂದ ಕೂಡಲೇ ಜಾರಿಗೊಳಿಸಬೇಕಿತ್ತು. ಆದರೆ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಅದು ಅನುಷ್ಠಾನಗೊಂಡಿರಲಿಲ್ಲ. 70 ವರ್ಷದ ಬಳಿಕ ಮೋದಿಯವರು ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ನಗರ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಣಿಪಾಲದ ಟೈಗರ್ ಸರ್ಕಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮಹಾತ್ಮಗಾಂಧಿ ಧರ್ಮ, ನೆಹರು ಕರ್ತವ್ಯ ಹಾಗೂ ಇಂದಿರಾಗಾಂಧಿಯವರು […]