ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ: ಬಸವರಾಜ ಬೊಮ್ಮಾಯಿ
ಉಡುಪಿ: ಜಿಲ್ಲೆಯಲ್ಲಿರುವ ಮರಳು ಸಮಸ್ಯೆ, ಕ್ವಾರಿ ಸಮಸ್ಯೆ ಮತ್ತು ಡೀಮ್ಡ್ ಫಾರೆಸ್ಟ್ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆಯನ್ನು ನಡೆಸಿ ಸರಕಾರದ ವತಿಯಿಂದ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ನಿಗಮ, ವಾಲ್ಮೀಕಿ ನಿಗಮ ಮತ್ತು ದೇವರಾಜ್ ಅರಸು ನಿಗಮದ ವತಿಯಿಂದ ಅನುಮೋದನೆಯಾಗಿರುವ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ […]
ಉಡುಪಿ ಪರ್ಯಾಯ ನಾಡಹಬ್ಬದಂತೆ ವಿಜೃಂಭಣೆಯಿಂದ ನಡೆಯಲಿ: ಬಸವರಾಜ ಬೊಮ್ಮಾಯಿ
ಉಡುಪಿ : ಉಡುಪಿಯ ಪರ್ಯಾಯವನ್ನು ಯಾವುದೇ ಲೋಪದೋಪ ದೋಷವಿಲ್ಲದೇ ನಾಡಹಬ್ಬದಂತೆ ವಿಜೃಂಭಣೆಯಿಂದ ನಡೆಸಬೇಕು ಹಾಗೂ ಉಡುಪಿಯ ಪರ್ಯಾಯದಲ್ಲಿ ಭಾಗಿಯಾಗಲು ಹೊರ ಜಿಲ್ಲೆಯಿಂದ ಸಾಗರೋಪಾದಿಯಲ್ಲಿ ಬರುವ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳವಾರ ಉಡುಪಿಯ ಕೃಷ್ಣ ಮಠದ ಅಥಿತಿ ಗೃಹದಲ್ಲಿ ನಡೆದ ಪರ್ಯಾಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಡುಪಿ […]
ಅಳಪೆ ಶಿವನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು: ಅಳಪೆ ಉತ್ತರ ವಾರ್ಡ್ ಶಿವನಗರ ಕೋರ್ದಬ್ಬು ದೈವಸ್ಥಾನದಿಂದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ.ಡಿ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಕಣ್ಣೂರು ರಾಷ್ಟ್ರೀಯ ಹೆದ್ದಾರಿಯಿಂದ ಪ್ರಾರಂಭಗೊಂಡು ಶಿವನಗರದ ಕೋರ್ದಬ್ಬು ದೈವಸ್ಥಾನವನ್ನು ಸಂಪರ್ಕಿಸುವ ಒಳ ರಸ್ತೆಯನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ 15 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿದೆ. ಆ ಮೂಲಕ ಈ ಪರಿಸರದ ಸಾರ್ವಜನಿಕರ ಬಹು ದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಶಿವನಗರವನ್ನು ಸಂಪರ್ಕಿಸುವ ಸದ್ಯ ಇರುವ […]
ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಸ್ಪೂರ್ತಿ ತುಂಬಿದವರೇ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರ ಬಿಜೆಪಿ ನಾಯಕರು: ಅನ್ಸಾರ್ ಅಹಮದ್
ಉಡುಪಿ: ಇತ್ತೀಚಿನ ದಿನಗಳಲ್ಲಿ ಜನವರಿ 11ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಬಹಳಷ್ಟು ವಿವಾದಕ್ಕೀಡಾಗುತ್ತಿದೆ. ಇದು ರಾಜಕೀಯ ಪ್ರೇರಿತ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಜನವರಿ 11 ರಂದು ನಡೆಯಲಿರುವ ಕಾರ್ಯಕ್ರಮ ಕೇವಲ ಸೌಹಾರ್ದ ಸಾಮರಸ್ಯ ಕ್ಕೋಸ್ಕರ ಹಮ್ಮಿಕೊಳ್ಳಲಾದ ಕಾರ್ಯಕ್ರಮವಾಗಿದ್ದು ಬೇರೆ ಅರ್ಥ ಕಲ್ಪಿಸುವ ಅಗತ್ಯವೇ ಇರುವುದಿಲ್ಲ. ಈ ಕಾರ್ಯಕ್ರಮದ ಬಗ್ಗೆ ಸಂಘಟಕರು ಮೊದಲು ಚರ್ಚೆ ನಡೆಸಿದ್ದು ಕಟಪಾಡಿ ಶಂಕರ ಪೂಜಾರಿ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರ ಬಳಿ ಚರ್ಚೆಯ ಬಳಿಕ ಈ ಇಬ್ಬರು […]