ಹೆಮ್ಮಾಡಿ ಸರ್ವೀಸ್ ರಸ್ತೆ, ಕ್ರಾಸಿಂಗ್ ಬೇಡಿಕೆಗೆ ಶಾಸಕರ ಸ್ಪಂದನೆ

ಕುಂದಾಪುರ : ಜಾಲಾಡಿ – ಸಂತೋಷನಗರ ಮಧ್ಯೆ ಕ್ರಾಸಿಂಗ್ ಹಾಗೂ ಮೂವತ್ತುಮುಡಿ-ಜಾಲಾಡಿ ತನಕ ಎರಡೂ ಕಡೆಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣದ ಕುರಿತಂತೆ ಗ್ರಾಮಸ್ಥರ ಬೇಡಿಕೆಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ. ಭಾನುವಾರ ಗ್ರಾಮಸ್ಥರೆಲ್ಲರೂ ಸೇರಿ ಸಮಾಲೋಚನೆ ಸಭೆ ನಡೆಸಿ ಹೋರಾಟ ಸಮಿತಿ ರಚಿಸಿದ ಬೆನ್ನಲ್ಲೇ ಶಾಸಕರು ಸಮಿತಿಯ ಪದಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ನಿವಾಸಕ್ಕೆ ಕರೆದು ಮಾತುಕತೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ನೆಂಪುವಿನಲ್ಲಿರುವ ಶಾಸಕರ ಮನೆಗೆ ತೆರಳಿದ ಸಮಿತಿಯ ಪದಾಧಿಕಾರಿಗಳು ಹೆದ್ದಾರಿ ಅವೈಜ್ಙಾನಿಕ ಕಾಮಗಾರಿಗಳ […]
ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳ ಸ್ಪಂದನೆಗೆ ಉಚಿತ ಸಹಾಯವಾಣಿ: ಎಸ್.ಸುರೇಶ್ ಕುಮಾರ್

ಉಡುಪಿ: ಶಿಕ್ಷಣ ಇಲಾಖೆಯಲ್ಲಿನ ಕುಂದು ಕೊರತೆ ಮತ್ತು ಸಮಸ್ಯೆಗಳನ್ನು ಆಲಿಸಲು ಮಾರ್ಚ್ 31 ರಂದು 24×7 ಉಚಿತ ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಅವರು ಸೋಮವಾರ, ಉಡುಪಿ ಜಿಲ್ಲೆಯ ಮಣೂರು-ಪಡುಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ಆಗಬೇಕಾಗಿರುವ ಸುಧಾರಣೆಗಳು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಿಕ್ಷಕರು, ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಈ […]
ಹೆಮ್ಮಾಡಿ: ಡಿವೈಡರ್ ತೆರವಿಗಾಗಿ ಪಂಚಾಯತ್‌ಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಕುಂದಾಪುರ: ಹೆಮ್ಮಾಡಿಯ ಮೂವತ್ತುಮುಡಿಯಿಂದ ಜಾಲಾಡಿವರೆಗೆ ಸರ್ವೀಸ್ ರಸ್ತೆ ನಿರ್ಮಿಸಬೇಕು, ಸಂತೋಷನಗರ-ಜಾಲಾಡಿ ಮಧ್ಯದಲ್ಲಿ ಕೂಡಲೇ ಯೂಟರ್ನ್ ನೀಡಬೇಕೆಂದು ಆಗ್ರಹಿಸಿ ಸೋಮವಾರ ಹೆಮ್ಮಾಡಿ ಗ್ರಾಮಸ್ಥರು ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ದಾರಿಗಾಗಿ ಧ್ವನಿ ಹೋರಾಟ ಸಮಿತಿಯ ಪ್ರಮುಖ ಶಶಿಧರ ಹೆಮ್ಮಾಡಿ ಮಾತನಾಡಿ, ಗ್ರಾಮಪಂಚಾಯಿತಿ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐಆರ್‌ಬಿ ಕಂಪೆನಿಯ ಅಧಿಕಾರಿಗಳನ್ನು ಕರೆಸಿ ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ನಡೆಸಲಿ. ಅಧಿಕಾರಿಗಳನ್ನು ಸ್ಥಳಕ್ಕೆ […]