ಸಿಕ್ಕ ಅವಕಾಶಗಳನ್ನು ಸದುಪಯೋಗಗೊಳಿಸಿ – ಬಿಷಪ್ ಪೀಟರ್ ಪಾವ್ಲ್ ಸಲ್ಡಾನಾ
ಉಡುಪಿ: ಪ್ರತಿಯೊಬ್ಬರಿಗೂ ಕೂಡ ತನ್ನದೇ ಆದ ಪ್ರತಿಭೆಗಳಿದ್ದು ಅದನ್ನು ಸಮಾಜದ ಒಳಿತಿಗೆ ಉಪಯೋಗಿಸಿದಾಗ ಸಿಗುವ ಪ್ರತಿಫಲ ಅಪರಿಮಿತವಾದದ್ದು ಆದ್ದರಿಂದ ಸಿಕ್ಕ ಅವಕಾಶಗಳನ್ನು ಸದುಪಯೋಗಗೊಳಿಸುವುದರೊಂದಿಗೆ ಪ್ರತಿಭೆಗಳನ್ನು ಸಮಾಜಕ್ಕೆ ತೋರ್ಪಡಿಸುವ ಕೆಲಸ ಕ್ರೈಸ್ತ ಸಮುದಾಯದಿಂದ ನಡೆಯಬೇಕಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿವಂ|ಡಾ| ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು. ಅವರು ಭಾನುವಾರ ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿಚರ್ಚಿನ ಮೈದಾನದಲ್ಲಿ ಆಯೋಜಿಸಿರುವ ಉಡುಪಿ ಧರ್ಮಪ್ರಾಂತ್ಯ […]
ಹಲವಾರು ಕಾರಣಗಳಿಗೆ ಪ್ರಜಾಪ್ರಭುತ್ವದ ಬೇರುಗಳು ದುರ್ಬಲಗೊಳ್ಳುತ್ತಿದೆ:ಡಾ|ಜೆರಾಲ್ಡ್ ಐಸಾಕ್ ಲೋಬೊ
ಉಡುಪಿ : ಹಲವಾರು ಕಾರಣಗಳಿಗೆ ಪ್ರಜಾಪ್ರಭುತ್ವದ ಬೇರುಗಳು ದುರ್ಬಲಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗೂಡುವ ಅಗತ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ ಚರ್ಚಿನ ಮೈದಾನದಲ್ಲಿ ಆಯೋಜಿಸಿರುವ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಚಾರಿತ್ರಿಕ ಸಮ್ಮೇಳನ ಸಮುದಾಯೋತ್ಸವ-2020 ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ದೇಶದಲ್ಲಿ ವಸ್ತುಗಳ ಬೆಲೆ ಏರುತ್ತಿದ್ದು ನಿರುದ್ಯೋಗ […]
ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ: ಕಾರಜೋಳ
ಉಡುಪಿ: ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಹೊರಗಡೆ ಚರ್ಚೆ ಆಗುತ್ತಿದೆ ಅಷ್ಟೇ. ಅಲ್ಲದೆ, ಈ ಸಂಬಂಧ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಅವರು ಉಡುಪಿ ಕೃಷ್ಣಮಠಕ್ಕೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪನವರು ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು. ಉಪ ಚುನಾವಣೆಯಲ್ಲಿ ಗೆದ್ದ […]
ಪ್ರವಾಸೋದ್ಯಮದಲ್ಲಿ ಮಂಗಳೂರನ್ನು ಉತ್ತುಂಗಕ್ಕೇರಿಸುವುದೇ ನಮ್ಮ ಗುರಿ – ಶಾಸಕ ಕಾಮತ್
ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಿನ್ನೆ ಅಧಿಕಾರಿಗಳ ಸಭೆ ನಡೆಯಿತು. ಈ ಕುರಿತು ಪ್ರತಿಕ್ರಯಿಸಿರುವ ಶಾಸಕರು, ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 6 ಕುದ್ರುಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು. ಕಂದಾಯ ಇಲಾಖೆಯಡಿ 3 ಕುದ್ರು ಹಾಗೂ ಬಂದರು ಇಲಾಖೆಯಡಿ 3 ಕುದ್ರುಗಳಿದ್ದು ಇವುಗಳನ್ನು […]
ದ.ಕ.: 1.22ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ 5 ವರ್ಷದೊಳಗಿನ 1,22,856 ಮಕ್ಕಳಿಗೆ ಲಸಿಕೆ ನೀಡಲಾಯಿತು. ಭಾನುವಾರ ನಗರದ ಲೇಡಿಘೋಷನ್ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಕಾದರ್, ಐವನ್ ಡಿಸೋಜ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಲೇಡಿಘೋಷನ್ ಅಧೀಕ್ಷಕಿ ಡಾ. ಸವಿತಾ, ವೆನ್ ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ […]