ಜ. 27ಕ್ಕೆ ಸಿಎಎ ಬೆಂಬಲಿಸಿ ‘ಮಂಗಳೂರು ಚಲೋ’ – ಸಿಎಎ ಪೌರತ್ವ ಕಿತ್ತುಕೊಳ್ಳುವ ಕಾಯ್ದೆಯಲ್ಲ: ಮಟ್ಟಾರು

ಉಡುಪಿ: ಸಿಎಎ ಪೌರತ್ವ ಕೊಡುವ ಕಾಯ್ದೆ, ಪೌರತ್ವ ಕಿತ್ತುಕೊಳ್ಳುವ ಕಾಯ್ದೆಯಲ್ಲ. ಆದರೆ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಯ ಬಗ್ಗೆ ಕೆಲವೊಂದು ಸಂಘಟನೆಗಳು ಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸ ಮಾಡುತ್ತಿದೆ. ದೇಶದಿಂದ ಓಡಿಸುತ್ತಾರೆ. ಪೌರತ್ವ ಕಿತ್ತುಕೊಳ್ಳುತ್ತಾರೆ ಎಂಬಂತಹ ವದಂತಿಗಳನ್ನು ಹರಡಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ದೂರಿದರು. ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ರಾಜಸ್ತಾನದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌  ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಉಲ್ಲೇಖಿಸಲಾಗಿತ್ತು. ಅಲ್ಲದೆ, ಕಾಂಗ್ರೆಸ್‌ […]

ಬೆಳಪುವಿನಲ್ಲಿ ಅಕ್ರಮ ವಲಸಿಗರು?: ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತನಿಖೆಗೆ ಆಗ್ರಹ

ಉಡುಪಿ: ಕಾಪು ಸಮೀಪದ ಬೆಳಪು ಎಂಬಲ್ಲಿ ಅಕ್ರಮ ವಲಸಿಗರು ನೆಲೆಸಿರುವುದು ಬೆಳಕಿಗೆ ಬಂದಿದ್ದು, ಅಲ್ಲಿನ ನಿವಾಸಿಗಳಿಗೂ ಅವರ ಪರಿಚಯವಿಲ್ಲ. ಈ ಬಗ್ಗೆ ಅಲ್ಲಿನ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ತಪಾಸಣೆ ನಡೆಸುವ ಅಗತ್ಯವಿದೆ. ಒಂದು ವೇಳೆ ಅಕ್ರಮವಾಗಿ ನೆಲೆಸಿರುವುದು ಕಂಡು ಬಂದರೆ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು […]

ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ  ಮೆರವಣಿಗೆಯಲ್ಲಿ ಗಮನ ಸೆಳೆದ ಟ್ಯಾಬ್ಲೋ ದೃಶ್ಯಗಳು

ಬ್ರಹ್ಮಾವರ: ಬಾರ್ಕೂರು ಕಚ್ಚೂರು ಶ್ರೀ ಮಾಲ್ತಿದೇವಿ ದೇಗುಲ ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರದ ಬ್ರಹ್ಮಕಲಶೋತ್ಸವ, ನೂತನ ರಥ ಸಮರ್ಪಣೆ, ರಥೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಉಡುಪಿ ಜೋಡುಕಟ್ಟೆಯಿಂದ ಬೃಹತ್  ಹಸಿರು ಹೊರೆಕಾಣಿಕೆ ಮೆರವಣಿಗೆ ಶುಕ್ರವಾರದಂದು ನಡೆಯಿತು. ಹೊರೆಕಾಣಿಕೆ  ಮೆರವಣಿಗೆ ಸಂದರ್ಭದಲ್ಲಿ ಗಮನ ಸೆಳೆದ ಟ್ಯಾಬ್ಲೋ ದೃಶ್ಯಗಳು. ಚಿತ್ರ: ಅಭಿಜಿತ್ ಪಾಂಡೇಶ್ವರ್