15 ಕೋ.ರೂ. ವೆಚ್ಚದಲ್ಲಿ ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನ 15 ಕೋ.‌ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ದೇವಸ್ಥಾನ ಆಡಳಿತ ಸಮಿತಿ‌ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ದೇವಳದ ‘ಗರ್ಭಗುಡಿ ಹೊರತುಪಡಿಸಿ ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿ ನಿರ್ಮಾಣವಾಗುತ್ತಿದೆ. ನೂತನ ಕೊಡಿಮರ ಸಮರ್ಪಣೆ ಅಂಗವಾಗಿ ಜ.22ರಂದು ಸಂಜೆ 5ಕ್ಕೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ನಗರದ ಜೋಡುಕಟ್ಟೆಯಿಂದ ಜಯದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಸಾಗುವ ಶೋಭಾ‌ಯಾತ್ರೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ, ಪೂರ್ಣಕುಂಭ ಕಲಶದೊಂದಿಗೆ ಚಂಡೆ, […]

ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು: ಸ್ಕೇಟಿಂಗ್ ಪಟು ಅನಾಘಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ‌ ನೆಹರೂ ಮೈದಾನದಲ್ಲಿ‌ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ,ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಅತಿಥಿಗಳು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್,ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಭೋಜೆಗೌಡ, […]

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಾಗು ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಅನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದುಷ್ಟಶಕ್ತಿಗಳು ತಲೆ ಎತ್ತದಂತೆ‌ ಮಾಡುವುದರ ಜೊತೆಗೆ ಸರ್ವಧರ್ಮಗಳನ್ನು ಗೌರವಿಸಿ, ಸಮಾಜದ ಶಾಂತಿಗೆ ಭಂಗ ತರುವ ಚಟುವಟಿಕೆಗಳಿಗೆ ಅವಕಾಶ ಕೊಡದ ಸರ್ವಧರ್ಮೀಯರು ಸಮನ್ವಯದಲ್ಲಿ ಬಾಳಲು ಪ್ರತಿಜ್ಞೆ ಮಾಡೋಣ. ಜಿಲ್ಲೆಯಲ್ಲಿ ಕಳೆದ ಅತಿವೃಷ್ಟಿಯಿಂದ 893 ಕೋ.ರೂ. […]

ಇಂದು ಚಾಯ್ಸ್ ಫರ್ನಿಚರ್ ಮಳಿಗೆ ಉದ್ಘಾಟನೆ 

ಉಡುಪಿ: ಉಡುಪಿ ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ ಬಳಿಯ ಎಕ್ತಾ ಹೈಟ್ಸ್ ನ ನೆಲಮಹಡಿಯಲ್ಲಿ ನೂತನವಾಗಿ ತೆರೆಯಲಾದ ಚಾಯ್ಸ್ ಫರ್ನಿಚರ್ ಮಳಿಗೆಯ ಉದ್ಘಾಟನ ಸಮಾರಂಭವು ಜ. 26ರಂದು ಸಂಜೆ  4ಕ್ಕೆ ನಡೆಯಲಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಸಂತೆಕಟ್ಟೆ ಮೌಂಟ್ ರೋಸರಿ ದೇವಾಲಯದ ಧರ್ಮಗುರು ವ| ಡಾ| ಲೆಸ್ಲಿಡಿ’ಸೋಜಾ, ತೊಟ್ಟಂ ಸಂತ ಅನ್ನಾ ಮಾತೆಯ ದೇವಾಲಯದ ಧರ್ಮಗುರು ವ| ಫಾ| ಫ್ರಾನ್ಸಿಸ್ ಕರ್ನೇಲಿಯೋ ಆಶೀರ್ವಚನ ನೀಡಲಿದ್ದಾರೆ. ಸಂತೆಕಟ್ಟೆ ಮೌಂಟ್ ರೋಸರಿ ದೇವಾಲಯದ ಪಾಲನಾ ಮಂಡಳಿ ಉಪಾಧ್ಯಕ್ಷ […]

ಎನ್ಆರ್ ಸಿ ಮೂಲಕ‌ ದೇಶದ ಮೂಲನಿವಾಸಿಗಳನ್ನು ವಿದೇಶಿಯರನ್ನಾಗಿಸುವ ಹುನ್ನಾರ: ಪ್ರೊ. ವಿಲಾಸ್ ಖಾರಾತ್ ಆರೋಪ

ಉಡುಪಿ: ಬ್ರಾಹ್ಮಣರು ಎನ್‌ಆರ್‌ಸಿ ಕಾಯ್ದೆಯ ಮೂಲಕ ಇಲ್ಲಿನ ಮೂಲ ನಿವಾಸಿಗಳನ್ನು ವಿದೇಶಿಯರನ್ನಾಗಿ ಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ. ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿಯುವ ಜನರ ಮತದಾನದ ಹಕ್ಕನ್ನು ಸಹ ಕಸಿದುಕೊಳ್ಳುತ್ತಾರೆ. ಆದ್ದರಿಂದ ಕೇವಲ ಜೈ ಭೀಮ್‌ ಘೋಷಣೆ ಕೂಗುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಜನರನ್ನು ಜಾಗೃತರನ್ನಾಗಿ ಮಾಡುವ ಅಗತ್ಯವಿದೆ ಎಂದು ಭಾರತೀಯ ಮುಕ್ತಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೊ. ವಿಲಾಸ್‌ ಖಾರಾತ್‌ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ಬೆಂಗಳೂರು ಇದರ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿ […]