ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ‘ಎಕ್ಸ್-ಸಂಗಮ್’ ಹಳೆ ವಿದ್ಯಾರ್ಥಿಗಳ ಸಮ್ಮಿಲನ-ದಶಮಾನೋತ್ಸವದ ಸಂಭ್ರಮಾಚರಣೆ

ಮಂಗಳೂರು:  ಕಠಿಣ ಪರಿಶ್ರಮ ಸಾಧನೆಯ ಮೂಲಮಂತ್ರ.ಇದು ಕೇವಲ ವಿದ್ಯಾರ್ಥಿ ಜೀವನಕ್ಕೆ ಮಾತ್ರ ಸೀಮಿತವಲ್ಲ. ಜೀವನದುದ್ದಕ್ಕೂ ಪ್ರತೀ ಹಂತದಲ್ಲೂ ಅನ್ವಯಿಸುತ್ತದೆ ಪದವಿ ಪೂರ್ವ ಹಂತದ ಈ ಎರಡು ವರ್ಷದ ವಿದ್ಯಾಭ್ಯಾಸ ಬರೀ  ಕಲಿಕೆಯಲ್ಲ ಅದು ನಮ್ಮ ಪೂರ್ಣ ರೂಪ ಬೆಳವಣಿಗೆಗೆ ಸಹಾಯವಾಗಬೇಕು ಎಂಬುದು ಎಕ್ಸಪರ್ಟ್‌ ವಿದ್ಯಾಸಂಸ್ಠೆಯ ಮುಖ್ಯ ಉದ್ದೇಶವಾಗಿದೆ. ಸಾಧನೆಗೆ ಎಂದು ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರಎಲ್ ನಾಯಕ್ ಹೇಳಿದರು. ಅವರು ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜು, ಕೊಡಿಯಲ್ ಬೈಲ್‌ನ ಸಭಾಂಗಣದಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಮಹಾಸಭೆ ಎಕ್ಸ್‌ಸಂಗಮ್’ […]

ಕುಂದಾಪುರದಲ್ಲಿ ಅದ್ಧೂರಿ ಗಣರಾಜ್ಯೋತ್ಸವ: ಮಕ್ಕಳ ಮೊಗದಲ್ಲಿ ತ್ರಿವರ್ಣ ಸಂಭ್ರಮ,ಎಲ್ಲೆಲ್ಲೂ ವೈವಿಧ್ಯತೆ-ಏಕತೆಯ ಸಮಾಗಮ

ಕುಂದಾಪುರ: ರಾಜ್ಯಗಳ ಒಕ್ಕೂಟಗಳನ್ನೊಳಗೊಂಡ ಪ್ರಬಲ ಕೇಂದ್ರವನ್ನು ಹೊಂದಿರುವ ರಾಷ್ಟ್ರ ನಮ್ಮದು. ನಮ್ಮ ದೇಶದಲ್ಲಿ ಮೂರುವರೆ ಸಾವಿರ ಜಾತಿಗಳಿದ್ದರೂ ಎಲ್ಲಾ ಜಾತಿ-ಧರ್ಮಗಳ ಜನರು ಸಮಾನವಾಗಿ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದ್ದು,ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ನಮ್ಮೊಳಗೆ ಐಕ್ಯತೆ, ಒಗ್ಗಟ್ಟನ್ನು ಬೆಳೆಸಬೇಕು. ನಾವೆಲ್ಲರೂ ತಾಯಿ ಭಾರತಾಂಬೆಯ ಮಕ್ಕಳೆಂಬ ಹೆಮ್ಮೆ ಹೆಚ್ಚಿಸಬೇಕು ಎಂದು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ಹೇಳಿದರು. ಅವರು ಕುಂದಾಪುರ ತಾಲೂಕು ಆಡಳಿತ, ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ […]

ಅಬ್ದುಲ್ ಕಲಾಂ ಕಂಡ ಕನಸನ್ನು ಇನ್ನಾದರೂ ನನಸಾಗಿಸೋಣ: ಅಣ್ಣಾಮಲೈ

ಮೂಡುಬಿದಿರೆ: ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ ೨೦೨೦ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು. ಪುತ್ತಿಗೆಯ ವನಜಾಕ್ಷಿ ಕೆ […]

ಕುಂದಾಪುರ: ಸಿ.ಎಸ್.ಫೌಂಡೇಶನ್ ಪರೀಕ್ಷೆಯಲ್ಲಿ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಗೆ ಶೇ.100 ಫಲಿತಾಂಶ

ಕುಂದಾಪುರ: ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ್ ಕ್ಲಿನಿಕ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (SPACE) CA/CS/CMA – Banking ತರಬೇತಿ ಸಂಸ್ಥೆ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ಇಂಡಿಯಾ ಅವರು ಡಿ. 28 ಹಾಗೂ 29 ರಂದು ನಡೆಸಿದ ( CS Foundation) ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದಿದೆ. ಸಂಸ್ಥೆಯ ವಿದ್ಯಾರ್ಥಿನಿಯಾದ ಅರ್ಪಿತಾ (252) ಹಾಗೂ ವೇನಿಷಾ ಶೇರಿನ್ ಲೋಬೋ (256) ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಸಂಸ್ಥೆಯ ಪ್ರಥಮ […]

ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸುವ ಗುರಿ: ಗೃಹ ಸಚಿವ ಬೊಮ್ಮಾಯಿ

ಉಡುಪಿ : ರಾಜ್ಯದ ಆರ್ಥಿಕತೆಗೆ ಪುಷ್ಠಿ ನೀಡುವ ಕರಾವಳಿಯನ್ನು ಪೂರ್ಣ ಪ್ರಮಾಣದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯವಾಗಿಲ್ಲ, ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸಿ, ಆಮದು ರಫ್ತು ಪ್ರಮಾಣವನ್ನು ಹೆಚ್ಚು ಮಾಡುವ ಮೂಲಕ ಹಾಗೂ ಒಳನಾಡು ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃಧ್ದಿಗೊಳಿಸುವ  ಮೂಲಕ, ಪ್ರವಾಸೋದ್ಯವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ದಿಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸಬೇಕಿದೆ ಎಂದು ರಾಜ್ಯದ ಗೃಹ ಮತ್ತು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. […]