ಜನಜಾಗೃತಿ ಸಮಾವೇಶ ಯಶಸ್ವಿ: ವೇದವ್ಯಾಸ ಕಾಮತ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಜನ ಜಾಗೃತಿ ಸಮಾವೇಶವು ಯಶಸ್ವಿಯಾಗಿದೆ. ಕಾರ್ಯಕ್ರಮ ಘೋಷಣೆಯಾಗಿ ಕೇವಲ 6 ದಿನಗಳಲ್ಲಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು ಸುಲಭದ ಮಾತಲ್ಲ. ಆದರೆ ದೇವ ದುರ್ಲಭ ಕಾರ್ಯಕರ್ತರಿದ್ದರೆ ಎಲ್ಲವೂ ಸಾಧ್ಯ ಎನ್ನುವುದನ್ನು ಇಂದಿನ ಕಾರ್ಯಕ್ರಮದಲ್ಲಿ ತೋರಿಸಿಕೊಟ್ಟಿದ್ದೀರಿ. ಜನ ಸಂಘದ ಕಾಲದಿಂದಲೂ ಭಾರತೀಯ ಜನತಾ ಪಾರ್ಟಿಯ ಯಶಸ್ವಿಗೆ ಶಕ್ತಿಯಾಗಿ ನಿಂತವರು ಕಾರ್ಯಕರ್ತರು. ಪಕ್ಷ ಸಂಧಿಗ್ದತೆಯಲ್ಲಿದ್ದಾಗ ಸಮಸ್ಯೆಗೆ ತಡೆಗೋಡೆಯಂತೆ ನಿಂತು ಪಕ್ಷದ ಹಿತ ಕಾಯ್ದಿದ್ದೀರಿ. ಪಕ್ಷದ ಸೂಚನೆಯನ್ನು ಕಟಿಬದ್ಧರಾಗಿ ಅನುಷ್ಠಾನಗೊಳಿಸುವ ಕಾರ್ಯಕರ್ತರನ್ನು ಪಡೆದಿರುವುದು ನಮ್ಮ […]

ಮಂಗಳೂರು: ನಾಪತ್ತೆಯಾದ ಮೀನುಗಾರರಿಗೆ  ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ

ಉಡುಪಿ: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿ, ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಇವರ ನೇತೃತ್ವದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರ ಮೀನುಗಾರರ ನಿಯೋಗವು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಗೆ ಮನವಿ ಸಲ್ಲಿಸಿತು. ಮಂಗಳೂರಿನಲ್ಲಿ ನಡೆದ ಸಿಎಎ ಸಮರ್ಥನಾ ಸಮಾವೇಶದಲ್ಲಿ […]

ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿಗಾಗಿ ಬೃಹತ್ ಸಮಾವೇಶ: ಲಕ್ಷಕ್ಕೂ ಅಧಿಕ ಮಂದಿ ಭಾಗಿ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬೃಹತ್ ಜನಜಾಗೃತಿ ಸಮಾವೇಶ ಮಂಗಳೂರಿನ ಕೂಳೂರಿನಲ್ಲಿ ಸೋಮವಾರ ಸಂಜೆ ನಡೆಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅವರು ಸಮಾವೇಶದಲ್ಲಿ ಭಾಗವಹಿಸಿ, ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಪ್ರಧಾನ ಭಾಷಣ ಮಾಡಿದರು. ಪೌರತ್ವ ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಸೇರಿ ಅಲ್ಪಸಂಖ್ಯಾತರಿಗೆ ತೊಂದರೆ ಇಲ್ಲ. ಯಾವುದೇ ತೊಂದರೆ ಆಗದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರಿಗೆ ರಕ್ಷಣೆ ನೀಡುತ್ತದೆ ಎಂದು ಅವರು ಅಭಯ ನೀಡಿದರು. ಕಾರ್ಯಕರ್ತರು ಜಾಗೃತಿ ಮೂಡಿಸಿ: ಬಿಜೆಪಿ ಕಾರ್ಯಕರ್ತರು […]

ಫೆ.‌ 1: ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಲೋಕಾರ್ಪಣೆ

ಉಡುಪಿ: ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಯೋಗಬನದಲ್ಲಿ ಉದ್ಘಾಟನೆಯಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ವಿವೇಕ ಉಡುಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಡಿವೈನ್ ಪಾರ್ಕ್ನ ಪಾವನ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಎಚ್.ಆರ್.ನಾಗೇಂದ್ರ ಅವರು ಉದ್ಘಾಟಿಸಲಿದ್ದಾರೆ’ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸಚಿವರಾದ ಕೋಟ […]

ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಇನ್ನಿಲ್ಲ

ಮಂಗಳೂರು: ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರು ಸೋಮವಾರ ನಿಧನ ಹೊಂದಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾದರು. ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿದ್ದ ಅಮರನಾಥ ಶೆಟ್ಟಿ ಅವರು, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು. ಜನತಾ ಪರಿವಾರದ ಸರ್ಕಾರಗಳಲ್ಲಿ ಸಚಿವರಾಗಿದ್ದ ಅವರು ಕರಾವಳಿ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಪ್ರವಾಸೋದ್ಯಮ, […]