ಖಾದರ್ ಗೆ ಬೆದರಿಕೆಯೊಡ್ಡಿದವರ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿ: ಕಾಂಗ್ರೆಸ್ ಆಗ್ರಹ
ಮಂಗಳೂರು: ಸಿಎಎ ಪರ ರ್ಯಾಲಿಯಲ್ಲಿ ಭಾಗವಹಿಸಿದ ಯುವಕರು ಮಾಜಿ ಸಚಿವ ಖಾದರ್ ಅವರಿಗೆ ಜೀವ ಬೆದರಿಕೆಯೊಡ್ಡುವ ಘೋಷಣೆ ಹಾಕಿದ್ದು, ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಸುಮೋಟೋ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಮಂಗಳೂರು ಪೊಲೀಸ್ ಕಮೀಷನರ್ ಅವರು ಘೋಷಣೆ ಕೂಗಿದವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಎರಡು ವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕಮೀಷನರ್ ಕಚೇರಿ ಮುಂದೆ ಕಾಂಗ್ರೆಸ್ […]
ಉಡುಪಿ: ಜ.30 ರಂದು ಸಿಎಎ, ಎನ್ ಸಿ ಆರ್ ವಿರುದ್ದ ಬೃಹತ್ ಪ್ರತಿಭಟನೆ
ಉಡುಪಿ: ಸಹಬಾಳ್ವೆ ಉಡುಪಿ ವತಿಯಿಂದ ಸಮಾನ ಮನಸ್ಕರ ಸಂಘಟನೆಗಳ ಸಹಯೋಗದಲ್ಲಿ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಇದೇ 30ರಂದು ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶದ ಪೂರ್ವಸಿದ್ಧತೆ ಭರದಿಂದ ಸಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 4 ಗಂಟೆಗೆ ಸಮಾವೇಶ ಆರಂಭವಾಗಲಿದೆ. ಸುಮಾರು 15 ಸಾವಿರಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಭೀಮ್ ಆರ್ಮಿ ಸ್ಥಾಪಕ ಚಂದ್ರಶೇಖರ್ […]
ತಕ್ಷಶಿಲೆ ವಿಶ್ವವಿದ್ಯಾನಿಲಯಗಳ ತಾಯಿ: ಹಿರಿಯ ವಿದ್ವಾಂಸ ಪ್ರೊ. ಕೆ.ಪಿ. ರಾವ್ ಅಭಿಮತ
ಉಡುಪಿ: ತಕ್ಷಶಿಲೆ ಕೇವಲ ವಿಶ್ವವಿದ್ಯಾಲಯ ಮಾತ್ರವಲ್ಲ. ಅದು ವಿಶ್ವವಿದ್ಯಾನಿಲಯ ಹಾಗೂ ಭಾಷೆಗಳ ತಾಯಿ ಎಂದು ಹಿರಿಯ ವಿದ್ವಾಂಸ ಪ್ರೊ. ಕೆ.ಪಿ. ರಾವ್ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ಸಾಧಕರೊಂದಿಗೆ ಸಂವಾದ ಹಾಗೂ ಜಿಲ್ಲಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತಕ್ಷಶಿಲೆ ವಿದ್ಯಾ ಕೇಂದ್ರ ಆಗಿದ್ದರೂ ಅದಕ್ಕೆ ವಿಶ್ವವಿದ್ಯಾನಿಲಯ ಮಾನ್ಯತೆ ಇರಲಿಲ್ಲ. ಆ ಯೋಗ್ಯತೆಯೂ ಅದಕ್ಕೆ ಇಲ್ಲ […]
ಮೆಸ್ಕಾಂ ಸಿಬಂದಿಗೆ ಹಲ್ಲೆ: ಅಮಿರ್ ತುಂಬೆ ವಿರುದ್ದ ದೂರು ದಾಖಲು
ಮಂಗಳೂರು: ವಿದ್ಯುತ್ ಬಿಲ್ ಪಾವತಿ ಮಾಡದೇ ಇದ್ದುದನ್ನು ಕೇಳಲು ಹೋದ ಮೆಸ್ಕಾಂ ಸಿಬಂದಿಗೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಾಜಿ ಸಚಿವ ಯು.ಟಿ ಖಾದರ್ ಆಪ್ತ ಕಾಂಗ್ರೆಸ್ ಮುಖಂಡ ಅಮಿರ್ ಹಸನ್ ತುಂಬೆ ಎಂಬಾತ ಹಲ್ಲೆ ನಡೆಸಿದವನು. ದೇರಳಕಟ್ಟೆ ಬಳಿ ಅಮಿರ್ ತುಂಬೆ ಮನೆಯಿದ್ದು ಬಿಲ್ ಪಾವತಿ ಮಾಡದೇ ಇದ್ದ ವಿಚಾರದಲ್ಲಿ ಲೈನ್ ಮ್ಯಾನ್ ಫ್ಯೂಸ್ ತೆಗೆಯಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಅಮಿರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಮೆಸ್ಕಾಂ ಸಿಬ್ಬಂದಿಗಳಾದ ರಂಗನಾಥ್, ಸಂದೇಶ್ ಕುಮಾರ್ ಹಾಗೂ […]
ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರಿಗೆ ಅದ್ದೂರಿ ಸ್ವಾಗತ
ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಪ್ರತಾಪ್ […]