ಎಸ್ಸೆಸ್ಸೆಲ್ಸಿ ಪಾಸಾದವರಿಗೆ ರೈಲ್ವೇ ಉದ್ಯೋಗವಕಾಶ: 2792 ಅರ್ಜಿ ಆಹ್ವಾನ

ಬೆಂಗಳೂರು: ಪೂರ್ವ ರೈಲ್ವೆ 2792 ಅಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2020ರ ಫೆ. 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಮಾರ್ಚ್ 13 ರ ಒಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ತತ್ಸಮಾನವನ್ನು ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಗೊಂಡಿರಬೇಕು. 15ರಿಂದ 24 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. […]

ಎಂಡೋಸಲ್ಫಾನ್ ಪೀಡಿತರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಎಂಡೋಸಲ್ಫಾನ್‌ ಪೀಡಿತರ ಹಾಗೂ ಅಂಗವಿಕಲರ ಮಾಸಾಶಾನ ಹೆಚ್ಚಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಂಗವಿಕಲರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಎಂಡೋಸಲ್ಫಾನ್‌ ಪೀಡಿತರಿಗೆ ನೀಡುವ ಮಾಸಾಶಾನವನ್ನು ಕ್ರಮವಾಗಿ 1500 ರೂ. ನಿಂದ 3 ಸಾವಿರ ಹಾಗೂ 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಚಿಸಬೇಕು. ಅಂಗವಿಕಲರಿಗೆ ಅವಶ್ಯವಿರುವ ಸಾಧನ ಸಲಕರಣೆಗಳನ್ನು ಸರಿಯಾದಸಮಯದಲ್ಲಿ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. […]

ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಶಿಲ್ಪಾ ಶೆಟ್ಟಿ

ಮಂಗಳೂರು: ಖ್ಯಾತ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿ ಕಟೀಲು ಶ್ರೀ ದೇವಿಯ ದರ್ಶನ ಪಡೆದರು. ಕ್ಷೇತ್ರಕ್ಕೆ ಬರಬೇಕು ಅಂತ ತುಂಬಾ ಆಸೆ ಇತ್ತು, ಕಟೀಲು ದೇವರ ಅನುಗ್ರಹದಿಂದ ನಾನು ಎಷ್ಟೇಲ್ಲ ಸಾಧನೆ ಮಾಡಲು ಸಾಧ್ಯವಾಯಿತು. ಹಾಗಾಗಿ ಬ್ರಹ್ಮಕಲಶದ ಈ ಸಂದರ್ಭದಲ್ಲಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದು ಮಾತೃ ಭಾಷೆ ತುಳುವಿನಲ್ಲಿ ಮಾತನಾಡಿದರು. ಕಟೀಲು ಕ್ಷೇತ್ರದ ವತಿಯಿಂದ ನಟಿ ಶಿಲ್ಪಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. […]

ಕಟೀಲು ದುರ್ಗಾಪರಮೇಶ್ವರಿ ದೇವಿಗೆ ಸಂಭ್ರಮದ ಬ್ರಹ್ಮಕಲಶೋತ್ಸವ

ಮಂಗಳೂರು: ದುಷ್ಟ ಅರುಣಾಸುರ ದಾಷ್ಟ್ಯತನ ಹೆಚ್ಚಾದಾಗ ಶ್ರೀ ದೇವಿ ದುಂಬಿಯಾಗಿ ಅರುಣಾಸುರನನ್ನು ವಧಿಸಿ ಶ್ರೀ ದೇವಿ ದುರ್ಗಾಪರಮೇಶ್ವರಿಯಾಗಿ ಕಟೀಲು ಕ್ಷೇತ್ರದಲ್ಲಿ ಉದ್ಭವ ಮೂರ್ತಿಯಾಗಿ ನೆಲೆ ನಿಲ್ಲುತ್ತಾಳೆ. ಇಂತಹ ಪುಣ್ಯಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ೧೨ ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ಮನದ ಇಷ್ಟಾರ್ಥ ನೆರವೇರಿಸುವ ಭ್ರಮರಾಂಭಿಕೆ ಬ್ರಹ್ಮಕಲಶೋತ್ಸವ ಅಂಗವಾಗಿ ಜನವರಿ 22ರಿಂದ ಕಟೀಲು ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ನಡೆದಿದ್ದು, ಇಂದು ಬೆಳಗ್ಗೆ 5 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಆರಂಭಗೊಂಡು, 9.37ಕ್ಕೆ ಮೀನ ಲಗ್ನದಲ್ಲಿ […]

ನೆಲ್ಲಿಕಾಯಿಯಿಂದ ಏನೇನ್ ಲಾಭ ಇದೆ ಅಂತ ಗೊತ್ತಾದ್ರೆ ಯಾವಾಗ್ಲೂ ತಿಂತೀರಾ !:ಡಾಕ್ಟರ್ ಹೇಳಿದ್ದಾರೆ ನೋಡಿ ನೆಲ್ಲಿಕಾಯಿ ಟಿಪ್ಸ್

ಪುಟ್ಟದ್ದೊಂದು ನೆಲ್ಲಿಕಾಯಿಯಲ್ಲಿದೆ ಆರೋಗ್ಯದ ಗುಟ್ಟು.ನೆಲ್ಲಿಕಾಯಿಯಲ್ಲಿ ನಮ್ಮ ಆರೋಗ್ಯಕ್ಕೆ ಪೂರಕವಾಗುವಂತಹ ಗುಣಗಳಿವೆ. ನೆಲ್ಲಿಕಾಯಿಯಿಂದ ಏನೇನ್ ಲಾಭ ಇದೆ ಅನ್ನೋದನ್ನು ಕಾರ್ಕಳದ ವೈದ್ಯೆ ಡಾ.ಹರ್ಷಾ ಕಾಮತ್ ಹೇಳಿದ್ದಾರೆ. ಜಸ್ಟ್ ಓದಿ ಫಾಲೋ ಮಾಡಿ. ನಮ್ಮಆರೋಗ್ಯ, ಚೈತನ್ಯವನ್ನು ಹೆಚ್ಚಿಸುವುದರಿಂದ ಹಾಗೂ ಆ್ಯಂಟಿ ಏಜಿಂಗ್ ಗುಣ ಇರುವುದರಿಂದ ಆಯುರ್ವೇದದಲ್ಲಿ ನೆಲ್ಲಿಕಾಯಿಯನ್ನು ಬಳಸುವುದು ಪ್ರಾಚೀನ ಕಾಲದಿಂದಲೂ ನಡೆದು ಬಂದಿದೆ. ಇದೊಂದು ಅದ್ಭುತವಾದ ಮೂಲಿಕೆ. ನಮ್ಮ ಇಡೀ ಶರೀರದ ರಕ್ಷಣೆ  ಮಾಡುತ್ತದೆ. ಇದು ಐದು ರಸಗಳಿಂದ ಕೂಡಿದೆ(ಲವಣರಸವನ್ನು ಬಿಟ್ಟು) ಇದು ತ್ರಿದೋಷಗಳನ್ನುಅಂದರೆ ವಾತ, ಪಿತ್ತ, ಕಫ […]