ಅಕ್ರಮ ಮರಳು ದಾಸ್ತಾನು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಸಿಆರ್‍ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿಯು ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ, ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ, ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿತರಣೆಯಾಗದೇ, ಅನಧಿಕೃತವಾಗಿ ದಾಸ್ತಾನು ಮಾಡಿರುವ ಸಾಧ್ಯತೆಯಿದ್ದು, ಹೀಗೆ ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕ್ರಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. […]
ಫೆ.8 ರಿಂದ ಜಿಲ್ಲೆಯಲ್ಲಿ ಕೃಷಿ ಸಾಲ ಅಭಿಯಾನ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಕೃಷಿ ಉದ್ದೇಶಕ್ಕಾಗಿ ರೈತರಿಗೆ ಕೃಷಿ ಸಾಲ ನೀಡಲು ಫೆಬ್ರವರಿ 8 ರಿಂದ 24 ರ ವರೆಗೆ ಕೃಷಿ ಸಾಲ ಅಭಿಯಾನವನ್ನು ಜಿಲ್ಲೆಯ ಎಲ್ಲಾ ಸರಕಾರಿ, ಗ್ರಾಮೀಣ, ಜಿಲ್ಲಾ ಸಹಕಾರಿ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ನೀಡುತ್ತಿದ್ದು, ದೇಶದಾದ್ಯಂತ 9.22 ಕೋಟಿ […]
ಕೋಟ ಜೋಡಿ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದಿದ್ದ ಜಿ.ಪಂ ಸದಸ್ಯ ಬಾರಿಕೆರೆ ಮತ್ತೆ ಜೈಲಿಗೆ

ಕುಂದಾಪುರ: ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಕೋಟ ಜೋಡಿ ಕೊಲೆ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪ ಮೇಲೆ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಆರೋಪಿ ರಾಘವೇಂದ್ರ ಕಾಂಚನ್ ಬಾರಿಕೆರೆ ಮತ್ತೆ ಜೈಲು ಸೇರಿದ್ದಾನೆ. ಈ ಹಿಂದೆ ಆರೋಪಿ ರಾಘವೇಂದ್ರ ಕಾಂಚನ್ ಪಡೆದ ಜಾಮೀನು ಸರ್ವೋಚ್ಚ ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಆದೇಶವಾಗಿ ಹದಿನೈದು ದಿನ ಕಳೆದರೂ ಪೊಲೀಸರು ಆತನನ್ನು ಬಂಧಿಸಿರಲಿಲ್ಲ. ಈ ಬಗ್ಗೆ ಮೃತರ ಮನೆಯವರು ಹೋರಾಟದ ಎಚ್ಚರಿಕೆ ನೀಡಿದ್ದರು. ಶುಕ್ರವಾರ ಕುಂದಾಪುರ ವಿಚಾರಣೆಗಾಗಿ ಜೋಡಿ […]