ಮಂಗಳೂರು: ನಗರ ದಕ್ಷಿಣ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ

ಮಂಗಳೂರು: ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿಯ ನೂತನ ಮಂಡಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಬಿಜೆಪಿ ಕಚೇರಿಯಲ್ಲಿ ಜರಗಿತು. ಮಂಗಳೂರು ನಗರ ದಕ್ಷಿಣ ಮಂಡಲದ ಅದ್ಯಕ್ಷರಾಗಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ನೂತನ ಅದ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ಭಾರತದ ಮೂಲೆ ಮೂಲೆಗಳಲ್ಲಿ ತನ್ನ ವಿಚಾರಧಾರೆಯ ಮೂಲಕ ಬಲಗೊಂಡಿದೆ. ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ರಾಷ್ಟ್ರೀಯವಾದವನ್ನು ಉಸಿರಾಡುವ ರಾಷ್ಟ್ರೀಯವಾದಿ ಪಕ್ಷವಾಗಿ ಜನ ಮನ್ನಣೆ […]

ಏಕಕಾಲದಲ್ಲಿ ಒಂಭತ್ತು ಗುಳಿಗ ದೈವಗಳಿಗೆ ಗಗ್ಗರ ಸೇವೆ: ವೇಣೂರಿನ ಬರ್ಕಜೆಯಲ್ಲಿ ವಿಶೇಷ ಸೇವೆ

ಮಂಗಳೂರು: ತುಳುನಾಡಿನಲ್ಲಿ ದೈವರಾಧನೆಗೆ ತನ್ನದೇ ಆದ ಮಹತ್ವವಿದೆ. ಹೀಗಾಗಿ ಪ್ರತಿ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವಗಳ ನೇಮೋತ್ಸವ, ಕೋಲೊತ್ಸವ ಸೇವೆಗಳು ನಡೆಯುತ್ತದೆ. ಇದೀಗ ತುಳುನಾಡಲ್ಲಿ ವಿಶೇಷ  ದೈವರಾಧನೆಯೊಂದು ನಡೆಯಿತು. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿರುವ ಬರ್ಕಜೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಏಕಕಾಲದಲ್ಲೇ 9 ಗುಳಿಗನಿಗೆ ಗಗ್ಗರ ಸೇವೆ ನಡೆಯಿತು. ಇದೊಂದು ವಿಶೇಷ ಕಾರ್ಯಕ್ರಮವಾಗಿತ್ತು. ಬೆಳ್ತಂಗಡಿ ತಾಲೂಕಿನ ಬರ್ಕಜೆ  ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ಧೂತನಾಗಿ ಗುಳಿಗ ನೆಲೆಸಿರುವುದು. ಇಲ್ಲಿ ನಡೆಯುವ ವಾರ್ಷಿಕ […]

ಆಳ್ವಾಸ್ ಕಂಪ್ಯೂಟರ್ ಸೈನ್ಸ್ ವಿಭಾಗ:ಬಿ.ಸಿ.ಎ ಪೆಸ್ಟ್ ”ಇಗ್‌ನಿಟ್ರಾ ಉದ್ಘಾಟನೆ

ಮೂಡುಬಿದಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನ ಬಹಳಷ್ಟು ವೇಗವಾಗಿ ಬೆಳವಣಿಗೆ ಯಾಗುತ್ತಿದೆ. ಆದ್ದರಿಂದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳು ಇದಕ್ಕೆ ಹೊಂದಿಕೊಳ್ಳಬೇಕು ಎಂದು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಕೊಠಾರಿ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಆಯೋಜಿಸಲಾದ ಬಿ.ಸಿ.ಎ ಪೆಸ್ಟ್ ”ಇಗ್‌ನಿಟ್ರಾ ೨ಕೆ೨೦’ಯನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನಗಳು ಹೆಚ್ಚುತ್ತಿರುವುದರಿಂದ ಉದ್ಯೋಗದ ಅವಕಾಶ ಬೇಕಾದಷ್ಟಿದೆ, ಆದರೆ ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಬೇಕು. […]

ಕೊರೊನಾ ಎಫೆಕ್ಟ್: ಮಂಗಳೂರು ಯುವಕನ ಮದುವೆ‌ ಮುಂದೂಡಿಕೆ

ಮಂಗಳೂರು: ಕೊರೊನಾ ವೈರಸ್ ಎಫೆಕ್ಟ್ ನಿಂದಾಗಿ ಮಂಗಳೂರಿನ ಯುವಕನೋರ್ವನ ಮದುವೆ ಮುಂದೂಡಿಕೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಫೆ.‌10ರ ಸೋಮವಾರದಂದು ಮಂಗಳೂರಿನ ಬೆಂದೂರ್‌ವೆಲ್‌ನ ಸಂತ ಸೆಬಾಸ್ಟಿಯನ್ ಚರ್ಚ್ ನ ಪ್ಲಾಟಿನಂ ಜುಬಿಲಿ ಆಡಿಟೋರಿಯಂನಲ್ಲಿ ಮಂಗಳೂರಿನ ಕುಂಪಲದ ಗೌರವ್ ಎಂಬುವವರ ವಿವಾಹ ನಡೆಯಬೇಕಿತ್ತು. ವರ ಗೌರವ್, ಹಾಂಕಾಂಗ್, ಸಿಂಗಾಪುರ ಹಾಗೂ ಥೈವಾನ್ ನಡುವೆ ಸಂಚರಿಸೋ ಪ್ರವಾಸಿ ಹಡಗಿನ ಸಿಬ್ಬಂದಿ. ಫೆಬ್ರವರಿ 4ರಂದು ಮನೆಗೆ ಬರುವುದಾಗಿ ಹೇಳಿದ್ದರು, ಹೀಗಾಗಿ ಮದುವೆಗಾಗಿ ಎಲ್ಲಾ ಸಿದ್ದತೆಗಳು ನಡೆದಿದ್ದು, ಈ ಮಧ್ಯೆ ಹಾಂಕಾಂಗ್ ನಲ್ಲಿ […]

ಫೆ. 9: ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ 15 ರ ಸಂಭ್ರಮ, ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬ್ರಹ್ಮಾವರ: ಜಿ.ಎಂ. ವಿದ್ಯಾನಿಕೆತನ್ ಪಬ್ಲಿಕ್ ಸ್ಕೂಲ್ ನ 15ರ ಸಂಭ್ರಮ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ, ಶಂಕುಸ್ಥಾಪನಾ ಸಮಾರಂಭ ಫೆ. 9ರಂದು ಬೆಳ್ಳಿಗೆ 9.30ಕ್ಕೆ ಜರಗಲಿದೆ. ಅತಿಥಿಗಳಾಗಿ ಉಡುಪಿ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್, ಯುಸಿಸಿಐ ಅಧ್ಯಕ್ಷ ಶ್ರೀ ಕೃಷ್ಣ ರಾವ್ ಕೊಡಂಚ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹಾರಾಡಿ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ಬ್ರಹ್ಮಾವರ […]