ಹಿರಿಯಡಕ: ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ
ಉಡುಪಿ, ಫೆ. 20: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇದರ ಆಶ್ರಯದಲ್ಲಿ ಅಮೋಘ(ರಿ.), ಹಿರಿಯಡಕ ಇವರ ಸಹಯೋಗದೊಂದಿಗೆ ಗುರುವಾರ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ಇವರು ತುಳುನಾಡಿನ ಸಂಸ್ಕೃತಿಯ ಶ್ರೇಷ್ಠ ಮೌಲ್ಯಗಳನ್ನು ಸಾರುವ ಸಿರಿಕಥಾನಕದ ಮಹತ್ವದ ಕುರಿತು ಮಾತನಾಡುತ್ತಾ ‘ಮಾತೃಭಾಷೆ ಮತ್ತು ಸಂಸ್ಕೃತಿಯ ಅರಿವಿನ ಔಚಿತ್ಯ’ದ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಅಮೋಘ (ರಿ.) ಹಿರಿಯಡಕ ಇದರ […]
ವಂಡ್ಸೆ ಮಾತೃಭೂಮಿ ಯುವ ಸಂಘಟನೆ ವಾರ್ಷಿಕೋತ್ಸವ
ಕುಂದಾಪುರ; ಗ್ರಾಮೀಣ ಭಾಗದಲ್ಲಿ ಯುವ ಜನತೆಯ ಒಗ್ಗೂಡುವಿಕೆ ಗ್ರಾಮದ ಬೆಳವಣಿಗೆಯಲ್ಲಿ ಪೂರಕವಾಗುತ್ತದೆ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಯುವ ಜನತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮದ ಪ್ರಗತಿಯ ಬಗ್ಗೆ ಚಿಂತನೆ ನಡೆಸಬೇಕು. ಸೇವಾ ಕಾರ್ಯಗಳ ಮೂಲಕ ಸಮಾಜಮುಖಿಯಾಗಿರಬೇಕು. ಆ ಹಿನ್ನೆಲೆಯಲ್ಲಿ ಆತ್ರಾಡಿಯ ಈ ಸಂಘಟನೆ ಸೇವೆಯ ಮಾರ್ಗದಲ್ಲಿ ಸಾಗುತ್ತಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ವಂಡ್ಸೆ ಆತ್ರಾಡಿಯ ಶ್ರೀ ಬ್ರಹ್ಮಲಿಂಗೇಶ್ವರ ದೇವಾಸ್ಥಾನ ವಠಾರದಲ್ಲಿ ನಡೆದ ಮಾತೃಭೂಮಿ ಯುವ ಸಂಘಟನೆ ಆತ್ರಾಡಿ ಇದರ […]
ಉಸೇನ್ ಬೋಲ್ಟ್ಗಿಂತ ಸ್ಪೀಡಾಗಿ ಓಡಿದ ತುಳುನಾಡಿನ ಕಂಬಳವೀರನ ಸಿನೆಮಾ!
ಮಂಗಳೂರು: ತುಳುನಾಡಿನ ಕಂಬಳ ವೀರ ಶ್ರೀನಿವಾಸ ಗೌಡರ ಸುದ್ದಿ ವೈರಲ್ ಆಗ್ತಿದ್ದಂತೆ ಕಂಬಳ ಕ್ರೀಡೆ ಸಿನಿಮಾ ಒಂದನ್ನು ಮಾಡಲು ಮುಂದಾಗಿದ್ದಾರೆ. ಈಗಾಗಲೇ ಕರಾವಳಿ ಭಾಗದ ನಿರ್ಮಾಪಕರೊಬ್ಬರು ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಲಾಗಿದ್ದು, ಕಂಬಳ ಕ್ರೀಡೆ ವಿಶ್ವಮಟ್ಟದಲ್ಲಿ ಹೆಸರು ಪಡೆದ ಘಟನೆ ಬಗ್ಗೆ ಕನ್ನಡ ಸಿನಿಮಾ ನಿರ್ಮಾಣವಾಗಲಿದೆ. ಈ ಚಿತ್ರದ ಬಜೆಟ್ ಸುಮಾರು 2.5 ಕೋಟಿ ರೂ. ವೆಚ್ಚ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಾಪಕ ಲೊಕೇಶ್ ಶೆಟ್ಟಿ ಅವರು ಕಂಬಳ ಸಿನೆಮಾದ […]
ಫೆ.22: ಲಯನ್ಸ್ ಪ್ರಾಂತೀಯ ಸಮ್ಮೇಳನ ಸ್ವಾತಿಮುತ್ತು
ಉಡುಪಿ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರಾಂತ್ಯ 4 ಜಿಲ್ಲೆ 317 ‘ಸಿ’ಯ ಕಾನ್ಫೋರೆನ್ಸ್ ಕಮಿಟಿ ಅಂಡ್ ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಇದರ ಆಶ್ರಯದಲ್ಲಿ ಫೆ. 22ರಂದು ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಪ್ರಾಂತೀಯ ಸಮ್ಮೇಳನ ‘ಸ್ವಾತಿಮುತ್ತು’ ಆಯೋಜಿಸಲಾಗಿದೆ ಎಂದು ಕಾನ್ಫೋರೆನ್ಸ್ ಕಮಿಟಿಯ ಮುಖ್ಯಸ್ಥ ಸತೀಶ್ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮ್ಮೇಳನದ ಅಂಗವಾಗಿ ಹೊಲಿಗೆ ಯಂತ್ರಗಳ ವಿತರಣೆ, ಸೋಲಾರ್, ವಾಟರ್ ಪ್ಯೂರಿಫಾಯರ್, ಆರ್ಥಿಕ ನೆರವು ನೀಡುವ ಕಾರ್ಯಕ್ರಮ ಸೇರಿದಂತೆ 1ಲಕ್ಷಕ್ಕೂ ಹೆಚ್ಚಿನ ಸೇವಾಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. […]
ಬೆಂಗಳೂರಿನಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ: ಅಮೂಲ್ಯ ಪೊಲೀಸ್ ವಶಕ್ಕೆ
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ ಅಮೂಲ್ಯ ಎಂಬಾಕೆಯನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಭೆಯಲ್ಲಿ ಮಾತನಾಡಲು ಆರಂಭಿಸಿದ ಅಮೂಲ್ಯ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾಳೆ. ಈ ವೇಳೆ ಅಸದುದ್ದೀನ್ ಒವೈಸಿ ಹಾಗೂ ಸಂಘಟಕರು ಅಮೂಲ್ಯ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡರು. ನಂತರ ಆಕೆಯನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ್ದಾರೆ.