ಕೃಷಿಗೆ ಇನ್ನೂ ಭವಿಷ್ಯವಿದೆ: ಆದರೆ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿದ್ದಾರೆ: ಸಾಮಗ
ಉಡುಪಿ: ರೈತರು ದೇಶದ ಸ್ವಾಭಿಮಾನದ ಸಂಕೇತ. ಭಾರತದಲ್ಲಿ ಶೇ. 58ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಕೃಷಿಗೆ ಇನ್ನೂ ಉತ್ತಮ ಭವಿಷ್ಯವಿದೆ. ಆದರೆ ಇಂದಿನ ಯುವಜನಾಂಗ ಮಾತ್ರ ಕೃಷಿಯಿಂದ ದೂರ ಸರಿಯುತ್ತಿದೆ ಎಂದು ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಜನರಲ್ ಮ್ಯಾನೇಜರ್ ಬಿ. ಗೋಪಾಲಕೃಷ್ಣ ಸಾಮಗ ಹೇಳಿದರು. ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಭಾನುವಾರ ನಡೆದ 24ನೇ ‘ರೈತ ಸಮಾವೇಶ–2020’ಅನ್ನು ಉದ್ಘಾಟಿಸಿ ಮಾತನಾಡಿದರು. ಭಾರತವು ಜಾತಿಕ ಕೃಷಿ ಮಾರುಕಟ್ಟೆಯಲ್ಲಿ […]
ಏ.26: “ಸಪ್ತಪದಿ” ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಫೆ.22: ರಾಜ್ಯಾದ್ಯಂತ ಏಪ್ರಿಲ್ 26 ರಂದು ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಂಬಂದಪಟ್ಟ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ವ್ಯವಸ್ಥಿತ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಭಾನುವಾರ, ಉಡುಪಿಯ ಪುರ ಭವನದಲ್ಲಿ , ಜಿಲ್ಲಾಡಳಿತ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಸಹಯೋಗದಲ್ಲಿ ನಡೆದ , ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ […]
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಂಗಳೂರಿನ ಆನಂದ ಗುರೂಜಿ ಭೇಟಿ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಂಗಳೂರಿನ ಆನಂದ ಗುರೂಜಿಯವರು ಭೇಟಿ ನೀಡಿ, ದೇವರ ದರ್ಶನ ಮಾಡಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.