ಉಡುಪಿ: ಪರಿಷ್ಕೃತ ಆಟೋರಿಕ್ಷಾ ದರ ಏಪ್ರಿಲ್ 1 ರಿಂದ ಪಡೆಯಲು ಸೂಚನೆ: ತಪ್ಪಿದಲ್ಲಿ ಕಾನೂನು ಕ್ರಮ
ಉಡುಪಿ: ಫೆಬ್ರವರಿ 6 ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಏಪ್ರಿಲ್ 1 ರಿಂದ 1.5 ಕಿ.ಮೀಟರ್ವರೆಗೆ ಕನಿಷ್ಟ ದರ ರೂ.30.00, ನಂತರದ ಪ್ರತಿ ಕಿ.ಮೀಟರ್ಗೆ ದರ ರೂ.17.00 ರಂತೆ ದರ ಪರಿಷ್ಕರಿಸಿ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕøತ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಆದೇಶ ಹೊರಡಿಸಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ಕೆಲವು ಆಟೋ ಚಾಲಕರು ಈಗಿನಿಂದಲೇ ಹೊಸ ದರ ಪಡೆಯುತ್ತಿರುವುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ. ಆದುದರಿಮದ ಉಡುಪಿ ಜಿಲ್ಲೆಯ ಎಲ್ಲಾ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನ್-ನಿವೇದಿತಾ
ಬಿಗ್ ಬಾಸ್ ಸೀಸನ್ 5ರ ವಿನ್ನರ್, ಕನ್ನಡ ರಾಪರ್ ಚಂದನ್ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಇಷ್ಟ ಪಟ್ಟ ಹುಡುಗಿ ನಿವೇದಿತಾ ಗೌಡ ಜೊತೆಗೆ ಇಂದು ಚಂದನ್ ಶೆಟ್ಟಿ ಹೊಸ ಜೀವನ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 8.15 ರಿಂದ 9 ಗಂಟೆಯೊಳಗೆ ಇದ್ದ ಶುಭ ಮುಹೂರ್ತದಲ್ಲಿ ನಿವೇದಿತಾ ಗೌಡ ಕೊರಳಿಗೆ ಚಂದನ್ ಶೆಟ್ಟಿ ಮಾಂಗಲ್ಯಧಾರಣೆ ಮಾಡಿದರು. ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಇವತ್ತಿಂದ ಲೈಫ್ ಖಂಡಿತ ಬೇರೆ ತರಹ ಇರುತ್ತದೆ. ಇಷ್ಟು ದಿನ ಮನೆಯಲ್ಲಿ ಒಬ್ಬನೇ […]
ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ: ಎಂ. ಮಹೇಶ್ವರ ರಾವ್
ಉಡುಪಿ, ಫೆ26: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ […]
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ
ಉಡುಪಿ, ಫೆ.26: 2020 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 4 ರಿಂದ 23 ರ ವರೆಗೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಾದ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಬಾಲಕಿಯರು, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರು, ಸಂತ ಮೇರಿ ಪದವಿ ಪೂರ್ವ ಕಾಲೇಜು ಶಿರ್ವ, ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜು […]
ರೆಖ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗಾಯಾಳು ಆಸ್ಪತ್ರೆಗೆ ದಾಖಲು
ಬೆಳ್ತಂಗಡಿ: ಕ್ಷುಲ್ಲಕ ಕಾರಣವೊಂದಕ್ಕೆ ಕ್ರಿಮಿನಲ್ ಹಿನ್ನೆಲೆಯುಳ್ಳ ಇಬ್ಬರು ಸೇರಿ ಅಮಾಯಕ ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಲ ಸಮೀಪ ನಡೆದಿದೆ. ರೆಖ್ಯಾ ಗ್ರಾಮದ ಕೆಳೆಂಜಿನೋಡಿ ನಿವಾಸಿ ಗಿರೀಶ್ ಗೌಡ (25) ಹಲ್ಲೆಗೊಳಗಾದ ಯುವಕ. ಹಲ್ಲೆಗೊಳಗಾದ ಯುವಕನನ್ನು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ರೆಖ್ಯಾ ಗ್ರಾಮದ ಕೆಡಂಬಲ ಸಮೀಪದ ಗುಂಡ್ಯ ಹೊಳೆಯಲ್ಲಿ […]