ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ: ಪ್ರತಿಭಟನಾ ಸ್ಥಳದಲ್ಲಿ 144 ಸೆಕ್ಷನ್ ಜಾರಿ
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಘರ್ಷಣೆ ನಡೆದಿದ್ದು, ಈ ಹಿಂಸಾಚಾರವನ್ನು ತಹಬದಿಗೆ ತರಲು ದೆಹಲಿ ಪೊಲೀಸರು ಕಠಿಣ ಕ್ರಮವನ್ನು ಕೈಗೊಂಡಿದೆ. ಪ್ರತಿಭಟನಾಕಾರರ ಹಿಂಸಾಚಾರ ಹೆಚ್ಚು ನಡೆಯುತ್ತಿರುವ ಈಶಾನ್ಯ ದೆಹಲಿಯ ಭಾಗದಲ್ಲಿ ಕಂಡಲ್ಲಿ ಗುಂಡು ಆದೇಶ ಜಾರಿ ಮಾಡಲಾಗಿದೆ. ರಸ್ತೆಯಲ್ಲಿ ಯಾರೇ ಕಂಡರು ಅವರಿಗೆ ಗುಂಡು ಹೊಡೆಯಲಾಗುವುದು ಎಂದು ಪೊಲೀಸರು ಘೋಷಿಸಿದ್ದಾರೆ. 11 ಬಲಿ, 70 ಮಂದಿಗೆ ಗುಂಡೇಟು: ಈಶಾನ್ಯ ದೆಹಲಿಯ ಚಾಂದ್ ಬಾಗ್, ಭಜನ್ ಪುರ ಮುಂತಾದ […]