ಕ್ರಿಮಿನಾಶಕ ಸೇವಿಸಿದ್ದ ರೈತ ಗುಂಡು ನಾಯ್ಕ್ ಮೃತ

ಉಡುಪಿ: ಪೆರ್ಡೂರು ಮೂಡುಜೆಡ್ಡು ಎಂಬಲ್ಲಿ ಫೆ. 28ರಂದು ಬೆಳೆಗೆ ಹಾಕುವ ಕೀಟನಾಶಕ ಸೇವಿಸಿದ್ದ  ರೈತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು‌ ಮಧ್ಯಾಹ್ನ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮೂಡುಜೆಡ್ಡು ನಿವಾಸಿ ಗುಂಡು ನಾಯ್ಕ್ (58) ಎಂದು ಗುರುತಿಸಲಾಗಿದೆ. ರೈತ ಗುಂಡು ನಾಯ್ಕ್ ಕೃಷಿ ಬೆಳೆಗಾಗಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದರು. ಇದೇ ಕೊರಗಿನಿಂದ ಫೆ. 28ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದರು. ಇದರಿಂದ ಅಸ್ವಸ್ಥರಾಗಿದ್ದ ಗುಂಡುರನ್ನು ಮನೆಯವರು ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆ […]

ಶ್ರೀ ಲಕ್ಷ್ಮೀಜನಾರ್ಧನ ಯಕ್ಷಗಾನ ಕಲಾ ಸಂಘ ದೊಂಡೇರಂಗಡಿಯ ವಾರ್ಷಿಕೋತ್ಸವ

ಕಾರ್ಕಳ: ನಮ್ಮ ಸಂಸ್ಕೃತಿಯು ಬಹಳ ಪ್ರಾಚೀನ ಹಾಗೂ ಬೆಲೆ ಬಾಳುವಂಥದ್ದು,ಈ ಆಧುನಿಕ ಕಾಲದಲ್ಲಿ 12ವರುಷಗಳಿಂದ ಜನಪದ ಕಲೆಗಳ ವಿಶಿಷ್ಟ ಕಲೆಯಾದಂತಹ  ಯಕ್ಷಗಾನದ ಸೇವೆ ಮಾಡುತ್ತಿರುವ ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ಧನ ಯಕ್ಷಗಾನ ಕಲಾ ಸಂಘದ ಕಾರ್ಯ ಶ್ಲಾಘನೀಯ ಎಂದು ಉದ್ಯಮಿ ಸಂತೋಷ ಪೂಜಾರಿ ಹೇಳಿದರು. ಇವರು ಶ್ರೀ ಲಕ್ಷ್ಮೀಜನಾರ್ಧನ ಯಕ್ಷಗಾನ ಕಲಾ ಸಂಘ ದೊಂಡೇರಂಗಡಿಯ 12ನೇ ವರ್ಷದ ವಾರ್ಷಿಕೋತ್ಸವದ ಸಭಾಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಮಾತನಾಡಿ ಮಕ್ಕಳಲ್ಲಿ ವಿವಿಧ ಪ್ರತಿಭೆಗಳು ಅಡಗಿರುತ್ತವೆ. […]

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ

ಉಡುಪಿ ಮಾ2: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ನಡೆಯುವ, ಉಡುಪಿ ಜಿಲ್ಲಾ 14 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ […]

ಸೇನಾ ನೇಮಕಾತಿ: ಜಿಲ್ಲೆಯ ಯುವಕರಿಗೆ ಉಚಿತ ತರಬೇತಿ

ಉಡುಪಿ ಮಾ2: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ನಡೆಯಲಿರುವ ಸೇನಾ ನೇಮಕಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಮಾರ್ಚ್ 15 ರಿಂದ 31 ರವರೆಗೆ ಉಚಿತ […]

ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ: ಅಪರ ಜಿಲ್ಲಾಧಿಕಾರಿ

ಉಡುಪಿ ಮಾ.2: ಭಾರತೀಯ ಸೇನೆಗೆ ಸೇರಲು ಇಚ್ಚಿಸುವ ಉತ್ಸಾಹಿ, ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ಸೇನಾ ನೇಮಕಾತಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ರ್ಯಾಲಿಯಲ್ಲಿ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ […]