ಕುಂದಾಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ..!

ಉಡುಪಿ: ಕುಂದಾಪುರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾಂದ್ ಘೋಷಣೆ ಕೂಗಿದ್ದಾನೆ. ಸ್ಥಳೀಯನಾದ ರಾಘವೇಂದ್ರ ಘೋಷಣೆ ಕೂಗಿದಾತ. ಆತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ. ಮೇಲ್ನೋಟಕ್ಕೆ ಅಸ್ವಸ್ಥನಂತೆ ಕಾಣುತ್ತಿದ್ದು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ರಾಘವೇಂದ್ರ ಪಾಕಿಸ್ತಾನ ಪರ ಜಿಂದಾಬಾದ್ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಆಗಿದೆ.