ಮಾ.15: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ

ಮಂಗಳೂರು: ಆಲ್ ಇಂಡಿಯಾ ಯೋಗ ಸೊಸೈಟಿ ಮತ್ತು ಪತಂಜಲಿ ಯೋಗ ಯುವ ಭಾರತ್ ವತಿಯಿಂದ ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಬರುವ ಮಾ.15ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ ಆಯೋಜಿಸಲಾಗಿದೆ. ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಕಿರಿಯರ ವಿಭಾಗ – 9ರಿಂದ 14 ವರ್ಷ, ಹಿರಿಯರ ವಿಭಾಗ – 15ರಿಂದ 25 ವರ್ಷ. ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 94483 44355, 99800 51727 ಸಂಪರ್ಕಿಸಬಹುದು ಎಂದು ಪ್ರಕಟಣೆ […]
ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಅವಭೃತ ಉತ್ಸವ

ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಬ್ರಹ್ಮರಥೋತ್ಸವದ ಕೊನೆಯ ದಿನವಾದ ಮಂಗಳವಾರ ಸಂಜೆ ಅವಭೃತ ಉತ್ಸವ ವಿಜೃಂಭಣೆಯಿಂದ ಜರಗಿತು. ಮಂಗಳವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ […]
‘ನಂಗ್ ಇಲ್ ಇಪ್ಪುಕ್ ಆತಿಲ್ಲ ಅಮ್ಮ’ ಎಂದು ಕಣ್ಣೀರಿಟ್ಟ ದೇಶವಿರೋಧಿ ಘೋಷಣೆ ಕೂಗಿದ ರಾಘವೇಂದ್ರ: ಜಿಲ್ಲಾ ಸರ್ಜನ್ ನಿಗಾಕ್ಕೆ ಹಸ್ತಾಂತರಿಸಿ ಕೋರ್ಟ್ ಆದೇಶ

ಕುಂದಾಪುರ: ಇಲ್ಲಿನ ಮಿನಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ನ್ಯಾಯಾಂಗ ಬಂಧನದಲ್ಲಿದ್ದ ರಾಘವೇಂದ್ರ ಗಾಣಿಗನನ್ನು ಬುಧವಾರ ಬೆಳಿಗ್ಗೆ ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನನ್ನು ಜಿಲ್ಲಾ ಸರ್ಜನ್ ನಿಗಾಕ್ಕೆ ಹಸ್ತಾಂತರಿಸಿದೆ. ಪಾಕ್ ಪರ ಘೋಷಣೆ ಕೂಗಿದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗನಿಗೆ ಯಾರದ್ದಾದರೂ ಪ್ರೇರಣೆ ಇದೆಯೇ ಎಂಬಿತ್ಯಾದಿ ವಿಚಾರದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯ ಆತನ ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಆರೋಪಿ ರಾಘವೇಂದ್ರ ಗಾಣಿಗನನ್ನು ಮಾರ್ಚ್ […]
ಕೊರೋನಾ ವೈರಸ್ ನಿಯಂತ್ರಣ ಬಗ್ಗೆ ಅಗತ್ಯ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ ಮಾ.4: ಜಿಲ್ಲೆಯಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ , ಜಿಲ್ಲೆಯಲ್ಲಿ ಕರೋನಾ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೋನಾ ವೈರಸ್ ಶಂಕಿತರಿಗೆ ಚಕಿತ್ಸೆ ನೀಡಲು ಅಗತ್ಯವಿರುವ ಎನ್ 95 ಮಾಸ್ಕ್ ಸೇರಿದಂತೆ ಸುರಕ್ಷತಾ ಉಕರಣಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಇನ್ನೂ […]
ಸ್ಕೌಟ್ಸ್-ಗೈಡ್ಸ್ ಗಳಿಗೆ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ

ಉಡುಪಿ ಮಾ.4: 2019-20 ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪತ್ರ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಕಬ್ಸ್-ಬುಲ್ ಬುಲ್, ಸ್ಕೌಟ್ಸ್-ಗೈಡ್ಸ್ ಮತ್ತು ರೋವರ್ಸ್ ರೇಂಜರ್ಸ್ ಸಾಧಕರಿಗೆ, ರಾಜ್ಯಪಾಲ ವಾಜುಬಾಯಿ ರೂಡಬಾಯಿ ವಾಲಾ ರವರು, ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಕಲ್ಯಾಣ್‍ಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ (ಕಬ್), ಬೈಂದೂರು ತಾಲೂಕಿನ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಮೃತಿ (ಬುಲ್ ಬುಲ್), ಬೈಂದೂರು ಚಪ್ಪರಿಕೆ ಸರಕಾರಿ ಹಿರಿಯ […]