ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿಕ್ಕಟ್ಟು ನಿರ್ವಹಣೆ ಹಾಗೂ ಆರೋಗ್ಯ ಜೀವನ ಶೈಲಿ ಮಾಹಿತಿ ಕಾರ್ಯಾಗಾರ
ಕುಂದಾಪುರ, ಮಾ.4 : ಆಧುನಿಕ ಜೀವನ ಶೈಲಿ, ಒತ್ತಡದ ಬದುಕು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಯುವ ಜನತೆ ಒತ್ತಡದ ಬದುಕಿನಿಂದ ಮುಕ್ತಿ ಪಡೆಯಲು ಪರಿಹಾರ ಮಾರ್ಗಗಳನ್ನು ಸೂಕ್ತ ಸಮಯದಲ್ಲಿ ಕಂಡುಕೊಳ್ಳಬೇಕು ಎಂದು ಬೆಂಗಳೂರು ನಿಮಾನ್ಸ್ ಆಸ್ಪತ್ರೆಯ ಸಂಪರ್ಕಾಧಿಕಾರಿ ದಿವಾಕರ್ ಹೇಳಿದರು. ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ನಿಮಾನ್ಸ್ ಆಸ್ಪತ್ರೆ ಬೆಂಗಳೂರು, ಜನ-ಆರೋಗ್ಯ ಕೇಂದ್ರ, ಯುವ ಸ್ಪಂದನ ಕೇಂದ್ರ ಉಡುಪಿ, ಜೇಸಿಐ ಕುಂದಾಪುರ ಸಿಟಿ ಆಯೋಜಿಸಿದ ಬಿಕ್ಕಟ್ಟು ನಿರ್ವಹಣೆ […]
ಶಿಕ್ಷ ಪ್ರಭಾ ಸಂಸ್ಥೆ: ಮ್ಯಾಟ್ ಪರೀಕ್ಷೆಯಲ್ಲಿ ಸಾಧನೆ
ಕುಂದಾಪುರ: ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ವಿದ್ಯಾರ್ಥಿನಿ ಕೀರ್ತನ ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಷನ್ಸ್ ನಡೆಸಿದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯು ಪ್ರಕಟಿಸಿದೆ.
ರಾಜ್ಯ ಬಜೆಟ್ : ಕೃಷಿ, ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಪೂರಕ
ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ : ಕುಯಿಲಾಡಿ ಸಿಎಂ ಯಡಿಯೂರಪ್ಪನವರು ಗುರುವಾರ ಮಂಡಿಸಿದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದ್ದು, ಎಲ್ಲ ವಲಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಗ್ರಾಮೀಣ ಸುಮಾರ್ಗ ಯೋಜನೆ, ಬಂದರುಗಳ ಅಭಿವೃದ್ಧಿ, ಯುವ ಸಬಲೀಕರಣಕ್ಕೆ ಹೊಸ ಯೋಜನೆ ಮತ್ತು ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗೆ ಅನುಕೂಲ ಮಾಡಿಕೊಡಲಾಗಿದೆ. ಕೃಷಿ ಸಾಲದ ಬಡ್ಡಿ ಮನ್ನಾ, ನೇಕಾರರ ಸಾಲದ ಬಡ್ಡಿ ಮನ್ನಾ ಮತ್ತು ರಾಜೀವ ಗಾಂಧಿ ವಸತಿ ಯೋಜನೆಗೆ […]
ಮಾ.7: ಮೋದಿಕೇರ್ ವತಿಯಿಂದ ಆಜಾದಿ ಫೆಸ್ಟ್ ಮಹಿಳಾ ಸಬಲೀಕರಣ
ಉಡುಪಿ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮೋದಿಕೇರ್ ವತಿಯಿಂದ ಆಜಾದಿ ಫೆಸ್ಟ್ ಮಹಿಳಾ ಸಬಲೀಕರಣ ಸಂಭ್ರಮ ಮಾ.7ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ. ಕಳೆದ 25 ವರ್ಷಗಳಿಂದ ನೇರ ಮಾರುಕಟ್ಟೆ ವ್ಯವಸ್ಥೆಯಡಿ ಮೋದಿಕೇರ್ ಸ್ವದೇಶಿ ಉತ್ಪನ್ನಗಳನ್ನು ಪೂರೈಸುತ್ತಿದ್ದು, ಗ್ರಾಹಕರಿಗೆ ಆರೋಗ್ಯಕರ ಬದುಕು ನೀಡಿದೆ. ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡಲು ನೆರವಾಗಿದೆ ಎಂದು ಸಂಸ್ಥೆಯ ಕ್ರೌನ್ ಡೈಮಂಡ್ ನಿರ್ದೇಶಕ ಉದಯ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಸ್ಥೆಯ ಕ್ರೌನ್ ಡೈಮಂಡ್ ನಿರ್ದೇಶಕ ರಾಘವೇಂದ್ರ ಶೆಟ್ಟಿ, ಹಿರಿಯ ಸೂಪರ್ […]
ರಾಜ್ಯದ ಶ್ರೇಷ್ಠ ಬಜೆಟ್: ಶಾಸಕ ಡಿ. ವೇದವ್ಯಾಸ ಕಾಮತ್
ಮಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಕೃಷಿಕರಿಗೆ, ಜನಸಾಮಾನ್ಯರಿಗೆ, ಮೀನುಗಾರರಿಗೆ, ಮಹಿಳಾ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಆರೋಗ್ಯ ಕ್ಷೇತ್ರಕ್ಕೆ, ಪ್ರವಾಸೋದ್ಯಮ ಮತ್ತು ವಿವಿಧ ನಿಗಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿ ಸರ್ವಜನ ಸುಖ ಮತ್ತು ಸರ್ವಜನ ಹಿತವಾಗಿರುವ ಬಜೆಟ್ ಮಂಡಿಸಿರುವ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ವಶ್ರೇಷ್ಠ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳಾ ಮೀನುಗಾರರ ಸಬಲೀಕರಣಕ್ಕಾಗಿ 1.5 ಕೋಟಿ ರೂ. ಅನುದಾನದಲ್ಲಿ ಮರ್ತ್ಯ ವಿಕಾಸ ಯೋಜನೆ, […]