ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು: ಕರಾವಳಿಯ ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದಾಗಿರುವ ಬೋಳಾರ ಹಳೇಕೋಟೆ ಮಾರಿಯಮ್ಮ ಮಹಿಷಮರ್ಧಿನಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಅವರು ಸುಮಾರು 800 ವರ್ಷಗಳ ಇತಿಹಾಸವಿರುವ ಬೋಳಾರ ಹಳೇಕೋಟೆ ಮಾರಿಯಮ್ಮ ಮಹಿಷ ಮರ್ಧಿನಿ ದೇವಸ್ಥಾನವು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪೌರಾಣಿಕ ಇತಿಹಾಸಗಳ ಕುರುಹುಗಳನ್ನು ಉಳಿಸಿಕೊಂಡಿರುವ ದೇವಾಲಯಗಳಲ್ಲಿ ಒಂದಾಗಿದೆ. ನಗರದ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಯ ಕುರಿತು ವಿಶೇಷ ಕಾಳಜಿ ವಹಿಸಿರುವ ನಮ್ಮ ಸರಕಾರ […]

ಕೊರೊನಾ ವೈರಸ್ ಕುರಿತು ಸುಳ್ಳು ವದಂತಿಗಳನ್ನು ನಂಬಬೇಡಿ – ಡಾ. ಸುಧೀರ್ ಚಂದ್ರ ಸೂಡ

ಉಡುಪಿ : ಕೊರೊನಾ ವೈರಸ್‍ನಿಂದ ಹರಡುವ ರೋಗದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಸಾರ್ವಜನಿಕರು ಈ ವದಂತಿಗಳನ್ನು ನಂಬದಂತೆ ಹಾಗೂ ಗಾಬರಿಪಡುವ ಮತ್ತು ಯಾವುದೇ ಆತಂಕಗೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಡಿಹೆಚ್‍ಓ ಡಾ. ಸುಧೀರ್‍ಚಂದ್ರ ಸೂಡ ತಿಳಿಸಿದರು. ಅವರು ಗುರುವಾರ ಡಿಎಚ್‍ಓ ಕಚೇರಿಯಲ್ಲಿ ನಡೆದ , ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಕುರಿತ ಕೈಗೊಂಡಿರುವ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಗಳವಾರ ಇಸ್ರೇಲ್‍ನಿಂದ ಉಡುಪಿಗೆ […]

ಮಾರುಕಟ್ಟೆಗೆ ಬರಲು ರೆಡಿಯಾಗಿದೆ ಕಲ್ಪರಸ: ಇದು ಎಳನೀರಿಗಿಂತ ಮೂರು ಪಟ್ಟು ಆರೋಗ್ಯದಾಯಕ!

ಉಡುಪಿ: ತೆಂಗಿನ ಹೊಂಬಾಳೆ (ಕೊಂಬು)ನಿಂದ ಶೋಧಿಸಿದ ‘ಕಲ್ಪರಸ’ ಎಂಬ ಆರೋಗ್ಯ ವರ್ಧಕ ಪಾನೀಯವನ್ನು ಉಡುಪಿ ಕಲ್ಪರಸ ತೆಂಗು ಮತ್ತು ಸರ್ವ ಸಾಂಬಾರ ಉತ್ಪಾದಕರ ಕಂಪೆನಿ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಇದು ಎಳೆನೀರಿಗಿಂತ ಮೂರು ಪಟ್ಟು ಆರೋಗ್ಯದಾಯಕವಾಗಿದ್ದು, ಅಧ್ಯಯನದಿಂದ ದೃಢಪಟ್ಟಿದೆ. ಸಂಸ್ಥೆಯು ಭಾರತೀಯ ಕಿಸಾನ್‌ ಸಂಘ ಹಾಗೂ ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ಮಾರ್ಗದರ್ಶನದಲ್ಲಿ ಈ ಯೋಜನೆಯನ್ನು ರೂಪಿಸಿದೆ. ಕಲ್ಪರಸ ತೆಗೆಯುವ ವಿಧಾನ: ನೀರಾ ತೆಗೆಯುವ ಮಾದರಿಯಲ್ಲಿಯೇ ಈ ಕಲ್ಪರಸವನ್ನು ತೆಗೆಯಲಾಗುತ್ತದೆ. ನೀರಾವನ್ನು ತೆರೆದ ಮಡಿಕೆ […]

ಅಂಬಲಪಾಡಿ: ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಉಡುಪಿ: ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ, ಸಂಸ್ಕಾರದ ಜತೆಗೆ ಸಾತ್ವಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡಲ್ಲಿ, ರೋಗಗಳಿಂದ ದೂರವಿರಲು ಸಾಧ್ಯವಿದೆ ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು. ಯಕ್ಷಗಾನ ಕಲಾರಂಗದ ವತಿಯಿಂದ ಅಂಬಲಪಾಡಿ ದೇಗುಲದ ಭವಾನಿ ಮಂಟಪದಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನಕೊಡಬೇಕು. ಮಕ್ಕಳು ಋಣಾತ್ಮಕ ವಿಷಯಗಳಿಂದ […]

ಮ್ಯಾಟ್ ಪರೀಕ್ಷೆಯಲ್ಲಿ ಶಿಕ್ಷ ಪ್ರಭಾ ಅಕಾಡೆಮಿ ವಿದ್ಯಾರ್ಥಿಗಳ ವಿಶೇಷ ಸಾಧನೆ

ಕುಂದಾಪುರ : ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ನಡೆಸಿದ ಮ್ಯಾಟ್ ಪರೀಕ್ಷೆಯಲ್ಲಿ ಇಲ್ಲಿನ ಶಿಕ್ಷ ಪ್ರಭಾ ಅಕಾಡೆಮಿ ವಿದ್ಯಾರ್ಥಿಗಳಾದ ರಕ್ಷಿತ್ ಮತ್ತು ರಿತೇಶ್ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮ್ಯಾಟ್ ಪಿ.ಜಿ.ಸಿ.ಇ.ಟಿ ತೇರ್ಪಡೆ ಹೊಂದಿದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಬ್ಯಾಂಕುಗಳ ಸಹಯೊಗದೊಂದಿಗೆ ಶೈಕ್ಷಣಿಕ ಸಾಲ ಸೌಲಭ್ಯ ಕೂಡ ಒದಗಿಸಲಾಗುತ್ತಿದೆ. ಪರೀಕ್ಷೆಗೆ ಮಾರ್ಗದರ್ಶನ ಶಿಕ್ಷ ಪ್ರಭಾ  ಸಂಸ್ಥೆಯಲ್ಲಿ ಸಿಎ, ಸಿಎಸ್, ಸಿಎಂಎ ಜತೆಗೆ ಬ್ಯಾಂಕಿಂಗ್ ಮತ್ತು ಎಂಬಿಎ ಪ್ರವೇಶ ಪರೀಕ್ಷೆಗೂ ರಾಜ್ಯದ ನಾನಾ ಭಾಗಗಳ ಉತ್ತಮ ಶಿಕ್ಷಕರ ಸೇವೆ ವಿದ್ಯಾರ್ಥಿಗಳಿಗೆ […]