ಯೆಸ್ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರಿಗೆ ಯಾವುದೇ ಭಯ ಬೇಡ: ನಿರ್ಮಲಾ ಸೀತಾರಾಮನ್

ನವದೆಹಲಿ: ಯೆಸ್ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರಿಗೆ ಯಾವುದೇ ಭಯ ಬೇಡ, ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯೆಸ್ ಬ್ಯಾಂಕ್ ಠೇವಣಿದಾರರಲ್ಲಿ ಧೈರ್ಯ ತುಂಬಿದ್ದಾರೆ. ಸುದ್ದಿಗೋಷ್ಠಿ ಮಾತನಾಡಿದ ಅವರು, ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಲಾಗುವುದು. ಆರ್‌ಬಿಐ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಸ್‍.ಬಿ.ಐ 5,೦೦೦ ಕೋಟಿ ರೂ. ಯೆಸ್ ಬ್ಯಾಂಕ್‍ ನಲ್ಲಿ ಹೂಡಿಕೆ ಮಾಡಲಿದ್ದು, ಅಲ್ಲಿ ಇರುವ ಬ್ಯಾಂಕ್ ಉದ್ಯೋಗಿಗಳು ಒಂದು ವರ್ಷ ಯಾವುದೇ ಭಯ ಪಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು. […]

ಮಹಿಳೆಯರ ಮೇಲಿನ ಹಿಂಸೆ ಮತ್ತು ದೌರ್ಜನ್ಯ ತಡೆಯಲು ಸರ್ಕಾರ ವಿಫಲ: ಸಿಐಟಿಯು ಟೀಕೆ

ಉಡುಪಿ: ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಮಹಿಳೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿಐಟಿಯು ಉಡುಪಿ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಉಡುಪಿಯ ಪ್ರಧಾನ ಅಂಚೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರ ಮೇಲಿನ ಹಿಂಸೆ ಮತ್ತು ದೌರ್ಜನ್ಯ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ರಕ್ಷಣೆ ಕೊಡುವ ಬದಲು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ […]

ಪತ್ರಕರ್ತರ ಸಮ್ಮೇಳನಕ್ಕೆ ತರಕಾರಿ ಕೊಡುಗೆ ನೀಡಿದ ಕುತ್ಲೂರು ಶಾಲಾ ಮಕ್ಕಳು 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  ಸಂಘದ ವತಿಯಿಂದ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಹಾಗೂ ಮುಖ್ಯ ಶಿಕ್ಷಕರು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಪತ್ರಕರ್ತರ ಸಮ್ಮೇಳನದ ಊಟೋಪಚಾರಕ್ಕೆ  ಶಾಲೆಯಲ್ಲಿ ಬೆಳೆದ ತರಕಾರಿಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯಲ್ಲಿ ಬೆಳೆಸಲಾದ ಸೌತೆಕಾಯಿ, ಅಲಸಂಡೆ, ಬದನೆ ಸೇರಿದಂತೆ ವಿವಿಧ ಬಗೆಯ ತರಕಾರಿಗಳನ್ನು  ಶಾಲೆಯ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಸಾವಯವ ರೀತಿಯಲ್ಲಿ ಬೆಳೆಸಿದ, […]

ಮಾ.7: ಯುವ ಮೆರಿಡಿಯನ್ ಅಮ್ಯೂಸ್ ಮೆಂಟ್ ಪಾರ್ಕ್ ಲೋಕಾರ್ಪಣೆ

ಕೋಟೇಶ್ವರ: ಯುವ ಮೆರಿಡಿಯನ್ ಗ್ರೂಪ್ ನ ಆಧುನಿಕ ಅಮ್ಯೂಸ್ ಮೆಂಟ್ ಪಾರ್ಕ್ ಅನ್ನು ಮಾ.7ರಂದು ಕೋಟೇಶ್ವರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಮಾ.7 ರಂದು ಸಂಜೆ 4:30 ರಿಂದ ನಡೆಯುವ ಸಮಾರಂಭದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ದೀಪಿಕಾದಾಸ್, ವಾಸುಕಿ ವೈಭವ್, ಭೂಮಿ ಶೆಟ್ಟಿ, ಅನೀಶ್ ಶೆಟ್ಟಿ, ಭಾಗವಹಿಸಲಿದ್ದು, ಗಣೇಶ್ ಕುದ್ರೋಳಿ ಅವರಿಂದ ಜಾದೂ ಪ್ರದರ್ಶನ ಜರಗಲಿದೆ. ಗಮನಸೆಳೆಯುವ ಆತಿಥ್ಯ: ಯುವ ಮೆರಿಡಿಯನ್ ಗ್ರೂಪ್ ಈಗಾಗಲೇ ಪ್ರವಾಸಿಗರಿಗೆ ಅದ್ಬುತ ಸೇವೆ ನೀಡುತ್ತಿದ್ದು ವಿದೇಶದ ಪ್ರವಾಸಿಗರನ್ನೂ ಸೆಳೆಯುತ್ತಿದೆ.ಯುವ ಮೇರಿಡಿಯನ್ ಬೇ ರೆಸಾರ್ಟ್ […]

ಮೇಲ್‍ಗಂಗೊಳ್ಳಿಯ ಸರಕಾರಿ ಶಾಲೆಯಲ್ಲಿ ತಾಯಂದಿರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ

ಗಂಗೊಳ್ಳಿ : ಮೇಲ್‍ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ತಾಯಂದಿರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯ ಮುಖ್ಯಶಿಕ್ಷಕಿ ಚಂದ್ರಕಲಾ ಮಾತನಾಡಿ ಭಾರತೀಯ ಪರಂಪರೆಯಲ್ಲಿ ತಾಯಿ-ಮಗುವಿನ ಸಂಬಂಧ ಶ್ರೇಷ್ಠವಾದುದು. ಇದು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ಕೆ., ಗೌರವ […]