ಉದ್ಯಾವರ: ಫಿಶ್ ಮಿಲ್ ಆರಂಭಿಸಲು ಅನುಮತಿ ನೀಡಿಲ್ಲ- ಜಿಪಂ ಅಧ್ಯಕ್ಷ ದಿನಕರ ಬಾಬು ಸ್ಪಷ್ಟನೆ

ಉಡುಪಿ: ಉದ್ಯಾವರ ಭಾಗದಲ್ಲಿ ಫಿಶ್ ಮಿಲ್ ಆರಂಭಿಸಲು ನನ್ನ ವಿರೋಧ ವಿದೆ. ಈವರೆಗೆ ಯಾವುದೇ ಫಿಶ್ ಮಿಲ್ ಆರಂಭಿಸಲು ಅನುಮತಿ ನೀಡಿಲ್ಲ ಎಂದು ಜಿಪಂ ಅಧ್ಯಕ್ಷ ದಿನಕರ ಬಾಬು ಸ್ಪಷ್ಟ ಪಡಿಸಿದ್ದಾರೆ. ಈ ಹಿಂದೆ ಉದ್ಯಾವರದಲ್ಲಿ ನಡೆದ ಫಿಶ್ ಮಿಲ್ ಹೋರಾಟದಲ್ಲಿ ನಾನೂ ಕೂಡ ಭಾಗಿಯಾಗಿದ್ದೆ. ಪ್ರಸ್ತುತ ಯಾವುದೇ ಫಿಶ್ ಮಿಲ್ ಗೆ ಪರವಾನಗಿ ನೀಡಿಲ್ಲ, ಕೆಲವೊಂದು ವರ್ಗದವರ ಬೇಡಿಕೆಗೆ ಸ್ಪಂದಿಸಿ ಫಿಶ್ ಮಿಲ್ ಹೊರತುಪಡಿಸಿ ಕೈಗಾರಿಕಾ ವಲಯಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ನಾನು ಅಧಿಕಾರದಲ್ಲಿ  ಇರುವವರೆಗೂ […]

ಕೊರೋನಾ: ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೊರೋನಾ ರೋಗ ತಪಾಸಣೆ ಮತ್ತು ರೋಗಿಗಳ ನಿರ್ವಹಣೆ ಕುರಿತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋರೋನಾ ರೋಗ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ, ವಿಮಾನ ನಿಲ್ದಾಣ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಆರೋಗ್ಯದ ಗೊಂದಲದ ಬಗ್ಗೆ ಪ್ರಸ್ತಾಪಿಸಿದ ಅವರು, ಜ್ವರ ಪೀಡಿತರು ಸಂಶಯಾಸ್ಪದವಾಗಿ ಕಂಡುಬಂದರೆ, ಅವರನ್ನು ವಿಮಾನ ನಿಲ್ದಾಣದಲ್ಲಿಯೇ […]

ಮಕ್ಕಳಿಗೆ ಅತಿಯಾದ ಸ್ವಾತಂತ್ರ್ಯ ಸರಿಯಲ್ಲ: ಶ್ಯಾಮಲಾ ‌ಕುಂದರ್

ಉಡುಪಿ: ಮಕ್ಕಳಿಗೆ ಅತಿಯಾದ ಸ್ವಾತಂತ್ರ್ಯ ನೀಡಿದ ಪರಿಣಾಮ ಇಂದು ಲಿವಿಂಗ್‌ ರಿಲೇಷನ್ಶಫ್‌, ವಿಚ್ಛೇಧನದಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದರು. ಉಡುಪಿ ತಾಲ್ಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಹಾಗೂ ಉಡುಪಿ ಬಂಟರ ಸಂಘದ ಸಹಯೋಗದಲ್ಲಿ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದೇ ಮನೆಯಲ್ಲಿ ವಾಸವಾಗಿದ್ದರೂ ಮೊಬೈಲ್‌ ಮೂಲಕ ಸಂಪರ್ಕಿಸುವ ಸ್ಥಿತಿ ನಿರ್ಮಾಣ […]

ಮಣಿಪಾಲ: ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ನೂತನ ಶಾಖೆ ಉದ್ಘಾಟನೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ನೂತನ 10ನೇ ಹವಾನಿಯಂತ್ರಿತ ಶಾಖೆ ಮಣಿಪಾಲ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಸೋಮವಾರ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ, ಸಮಾಜದೊಂದಿಗೆ ಸಂಸ್ಥೆ ಬೆಳೆಯಬೇಕು. ಸಂಸ್ಥೆಯ ಮೂಲಕ ಸಮಾಜ ಬೆಳೆಯಬೇಕು. ಈ ರೀತಿಯ ಪರಸ್ಪರ ಕೊಡುಕೊಳ್ಳುವಿಕೆಯೊಂದಿಗೆ ಸಮಾಜ ಹಾಗೂ ಸಂಸ್ಥೆ ಮುನ್ನಡೆಯಬೇಕು. ಸಾಮಾಜಿಕ ಬದುಕಿನಲ್ಲಿ ಆರ್ಥಿಕ ವ್ಯವಸ್ಥೆಯ ಸ್ಥಾನ ಏನೆಂಬುವುದನ್ನು ನಾವು ತಿಳಿದುಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬಡಗಬೆಟ್ಟು ಸೊಸೈಟಿ ನಿರಂತರವಾಗಿ ಶ್ರೇಯಸ್ಸಿನ […]

ಮಣಿಪಾಲ ಸಿಂಡಿಕೇಟ್ ಸರ್ಕಲ್: ಇಂದ್ರಾಳಿ ರಸ್ತೆಯ ನಡುವೆ ಯುಟರ್ನ್ ಗೆ ಆಗ್ರಹ: ನಾಳೆ ಡಿಸಿಗೆ ಮನವಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಇಂದ್ರಾಳಿ ರಸ್ತೆಯ ನಡುವೆ ಯುಟರ್ನ್ ಗೆ ಆಗ್ರಹಿಸಿ ಮಣಿಪಾಲ ಜೈ ಭಾರತ್ ಅಸೋಸಿಯೇಶನ್ ನೇತೃತ್ವದಲ್ಲಿ ಸಾರ್ವಜನಿಕರು ನಾಳೆ (ಮಾ. 10) ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಿದ್ದಾರೆ. ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಇಂದ್ರಾಳಿ ರಸ್ತೆಯ ನಡುವೆ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಯು ಟರ್ನ್ ನೀಡದಿರುವುದರಿಂದ ಲಕ್ಷ್ಮೀಂದ್ರನಗರ ನಿವಾಸಿ ಗಳಿಗೆ, ವ್ಯಾಪಾರಿಗಳು ಹಾಗೂ ರಿಕ್ಷಾ ಚಾಲಕರಿಗೆ ತೊಂದರೆ ಆಗುತ್ತಿದೆ. […]