ರಾಜ್ಯದಲ್ಲಿ ನಾಲ್ವರಿಗೆ ಕೊರೋನಾ ಸೋಂಕು, ಸರ್ಕಾರದಿಂದ ಸಕಲ ಮುನ್ನೆಚ್ಚರಿಕೆ ಕ್ರಮ: ಸಿ.ಎಂ

ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ […]
ಮಾ.31: ಬಿಎಸ್-4 ವಾಹನ ನೋಂದಣಿಗೆ ಕೊನೆಯ ದಿನಾಂಕ

ಉಡುಪಿ ಮಾ.10: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಲು ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-6 (ಬಿಎಸ್-6) ವಾಹನಗಳನ್ನು ಮಾತ್ರ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯ ಹಾಗೂ ಸಾರಿಗೆ ಆಯುಕ್ತರ ಆದೇಶದನ್ವಯ ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-4 (ಬಿಎಸ್-4) ಮಾಪನದ ವಾಹನ ಮಾರಾಟ ಹಾಗೂ ನೋಂದಣಿ ಮಾಡುವಂತಿಲ್ಲ. ಬಿಎಸ್-4 ಮಾಪನದ ವಾಹನಗಳನ್ನು ಖರೀದಿಸಿ, ಇದುವರೆಗೂ ನೋಂದಣಿ ಮಾಡಿಸಿಕೊಳ್ಳದೇ ಇರುವವರು, ವಾಹನಗಳ ದಾಖಲೆಗಳನ್ನು ಸಲ್ಲಿಸಿ ಮಾರ್ಚ್ 31 ರ ಒಳಗಾಗಿ ನೋಂದಣಿ […]
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ 2668 ವಿದ್ಯಾರ್ಥಿಗಳು: ಜಿಲ್ಲಾಧಿಕಾರಿ

ಉಡುಪಿ ಮಾ.10: ಮಾರ್ಚ್ 29 ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 2668 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿ.ಇ.ಟಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಾಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರ ಅರ್ಹತಾ ಪರೀಕ್ಷೆಯ ಅಧಿವೇಶನ 1 ರ ಪರೀಕ್ಷೆಗೆ 858 ವಿದ್ಯಾರ್ಥಿಗಳು ಮತ್ತು ಅಧಿವೇಶನ 2 ರ ಪರೀಕ್ಷೆಗೆ 1810 ವಿದ್ಯಾರ್ಥಿಗಳು, ಒಟ್ಟು 2668 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, […]
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ14,034 ವಿದ್ಯಾರ್ಥಿಗಳು: ಜಿಲ್ಲಾಧಿಕಾರಿ

ಉಡುಪಿ ಮಾ.10: ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13,028 ರೆಗ್ಯೂಲರ್, 484 ರೆಗ್ಯೂಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 14,034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ […]