ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಮಣಿಪಾಲ ಆಸ್ಪತ್ರೆ: ಮಾ.13 : ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ
ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜು ಇದರಇಪ್ಪತ್ತನೇ ವರ್ಷದ ಅಂಗವಾಗಿ ಮುನಿಯಾಲು ಆಯುರ್ವೇದ ಆಸ್ಪತ್ರೆ ಹಾಗೂ ಶ್ರೀ ಅನಂತಪದ್ಮನಾಭ ದೇವಸ್ಥಾನ, ಪೆರ್ಡೂರು ಇವರ ಸಹಯೋಗದೊಂದಿಗೆ ಮಾ. 13 ಪೂರ್ವಾಹ್ನ9.೦೦ ರಿಂದ ಅಪರಾಹ್ನ 1.3೦ರವರೆಗೆ ಎಲ್ಲಾ ತರಹದ ಕಾಯಿಲೆಗಳಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಶ್ರೀ ಅನಂತಪದ್ಮನಾಭ ದೇವಸ್ಥಾನ, ಪೆರ್ಡೂರಿನಲ್ಲಿ ನಡೆಯಲಿರುವುದು.ಹಾಗೂ ಶಿಬಿರವು ಪ್ರತಿ ತಿಂಗಳ ಎರಡನೇ ಶುಕ್ರವಾರದಂದು ಒಂದು ವರ್ಷ ಪರ್ಯಂತ ಕಾಲ ಉಚಿತವಾಗಿ ಚಿಕಿತ್ಸಾ ಶಿಬಿರ ನಡೆಸಲಾಗುವುದು. ಸಾರ್ವಜನಿಕರು, ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ […]
ಆಳ್ವಾಸ್ ನಲ್ಲಿ ವಾರ್ಷಿಕ ಚಿತ್ರಕಲಾ ಪ್ರದರ್ಶನ ”ಆರ್ಟಿಫೈಸ್”
ಮೂಡಬಿದ್ರೆ: ಯಾವ ಶಿಕ್ಷಣ ಸಂಸ್ಥೆ ಕಲೆಯನ್ನು ಪ್ರೋತ್ಸಾಹಿಸುತ್ತದೆಯೋ ಆ ಸಂಸ್ಥೆ ಒಳ್ಳೆಯ ಕಲಾವಿದನನ್ನು ಸೃಷ್ಠಿಸುತ್ತದೆ. ಕಲಾಸಕ್ತ ವಿದ್ಯಾರ್ಥಿಗಳಿಗೆ ಉನ್ನತ ಅವಕಾಶಗಳು ಸಿಕ್ಕಾಗಲೆಲ್ಲ ಅವರಿಗೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ಆಳ್ವಾಸ್ ಕಾಲೇಜಿನ ಮಾನೇಜ್ಮೆಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ವಿಷುವಲ್ ಆಟ್ಸ್ ವಿಭಾಗದ ವತಿಯಿಂದ ಮಾರ್ಚ ೧೧ ರಿಂದ ೧೪ ವರೆಗೆ ನಡೆಯಲಿರುವ ವಾರ್ಷಿಕ ಚಿತ್ರಕಲಾ ಪ್ರದರ್ಶನ ”ಆರ್ಟಿಫೈಸ್”ನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಚಿತ್ರಕಲಾ ಪ್ರದರ್ಶನಗಳು ಮುಂದೊಂದು ದಿನ ಕಲಾತ್ಮಕ ಕಲಾವಿದನ ನಿರ್ಮಾಣಕ್ಕೆ ನಾಂದಿಯಾಗುತ್ತದೆ. ವಿದ್ಯಾರ್ಥಿಗಳು […]
ಡಾ.ಉಷಾಪ್ರಭಾ ಎನ್. ನಾಯಕ್ ಅವರಿಗೆ ಗೌಡ ಸಾರಸ್ವತ ಮಹಿಳಾ ವೃಂದ ಗೌರವ ಪುರಸ್ಕಾರ
ಮಂಗಳೂರು: ವಿಶ್ವಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾಎನ್. ನಾಯಕ್ ಅವರಿಗೆ ಗೌಡ ಸಾರಸ್ವತ ಮಹಿಳಾ ವೃಂದ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಸಮಗ್ರವಾಗಿ ಕೊಡುಗೆ ನೀಡಿರುವುದಕ್ಕಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪುರಸ್ಕಾರ ನೀಡಲಾಯಿತು. ಬೆಂಗಳೂರು ಕಾಶಿ ಮಠದ ಅಧ್ಯಕ್ಷ ಡಾ.ಪಿ.ದಯಾನಂದ ಪೈ, ಗೌಡ ಸಾರಸ್ವತ ಮಹಿಳಾ ವೃಂದದ ಉಪಾಧ್ಯಕ್ಷೆ ಮೋಹಿನಿ ಡಿ. ಪೈ, ಅಧ್ಯಕ್ಷೆ ವಸುಧಾ ಪಿ.ಕಾಮತ್, ಜಿಎಸ್‌ಎಸ್ ಸಮಾಜದ ಅಧ್ಯಕ್ಷ ಜಿ.ಜಿ. ಶೆಣೈ, ಗೌಡ […]
ಮುನಿಯಾಲು ಆಯುರ್ವೇದ ಸಂಸ್ಥೆಯ ಕ್ಯಾನ್ಸರ್ ಔಷಧಿ ಹಾಗೂ ಕ್ಯಾನ್ಸರ್ ಚಿಕಿತ್ಸಾ ಕ್ರಮಕ್ಕೆ ಅಮೇರಿಕಾದ ಪೇಟೆಂಟ್
ಉಡುಪಿ: ಮುನಿಯಾಲು ಆಯುರ್ವೇದ ಸಂಸ್ಥೆಯ ಅಧ್ಯಕ್ಷ ಡಾ.ಎಂ. ವಿಜಯಭಾನು ಶೆಟ್ಟಿಯವರು ಅಭಿವೃದ್ಧಿಪಡಿಸಿದ ಕ್ಯಾನ್ಸರ್ ಔಷಧಿ ಹಾಗೂ ಕ್ಯಾನ್ಸರ್ ಚಿಕಿತ್ಸಾ ಕ್ರಮಕ್ಕೆ ಎರಡು ಪ್ರತ್ಯೇಕ ಪೇಟೆಂಟ್‍ಗಳು ಅಮೆರಿಕಾದ ಡೈರೆಕ್ಟರ್ ಆಫ್ ಪೇಟೆಂಟ್ ಎಂಡ್ ಟ್ರೇಡ್‍ಮಾರ್ಕ್ ಆಫೀಸಿನಿಂದ ದೊರೆತಿದೆ. ಮುಂದಿನ ಇಪ್ಪತ್ತು ವರ್ಷಗಳ ಅವಧಿಗೆ ಸಲ್ಲುವ ಈ ಪೇಟೆಂಟ್ ಆಯುರ್ವೇದ ಇತಿಹಾಸದಲ್ಲಿ ಅಮೆರಿಕಾದಿಂದ ದೊರೆತ ಒಂದು ಅಪರೂಪದ ಮನ್ನಣೆ. ಆರು ನೂರಕ್ಕೂ ಹೆಚ್ಚು ಸಂಖ್ಯೆಯ, ವಿವಿಧ ಹಂತಗಳಲ್ಲಿ ಬಳಲುತ್ತಿದ್ದ ವಿವಿಧ ತರಹದ ಕ್ಯಾನ್ಸರ್ ರೋಗಿಗಳು ಈ ಔಷಧಿ ಮತ್ತು ಚಿಕಿತ್ಸಾ […]
ಮಧ್ಯಪ್ರದೇಶದಲ್ಲಿ ಕ್ಷೀಪ್ರ ರಾಜಕೀಯ ಬೆಳವಣಿಗೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಕ್ಷೀಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಕಮಲ್ ನಾಥ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದೆ. ಈ ನಡುವೆ ಸಿಂಧಿಯಾ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಿದೆ. ಸಿಂಧಿಯಾ ಬೆಂಬಲಿಗರೆಂದು ಎನ್ನಲಾದ 22 ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ತಲುಪಿದೆ. ಶಾಸಕರ ಮನವೊಲಿಕೆ ಕಾರ್ಯ […]