ಹೆಮ್ಮಾಡಿಯ ಜನಮೆಚ್ಚಿದ ಟೆಲಿಫೋನ್ ಸಾಹುಕಾರ್ ಇನ್ನಿಲ್ಲ

ಕುಂದಾಪುರ: ಹೆಮ್ಮಾಡಿಯ ಪ್ರಸಿದ್ದ ಬೀಡಿ ಉದ್ಯಮಿ ಯು.ನರಸಿಂಹ ಶೇರುಗಾರ್(೭೮) ವಯೋಸಹಜ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಿಧನರಾದರು. ಕುಂದಾಪುರ ಮೀನು ಮಾರುಕಟ್ಟೆ ರಸ್ತೆಯ ನಿವಾಸಿಯಾಗಿರುವ ಯು. ನರಸಿಂಹ ಶೇರುಗಾರ್ ಅವರು, ಆರಂಭದಲ್ಲಿ ಅಂಗಡಿ ಮಾಲೀಕರಾಗಿ ಜೊತೆಗೆ ಚಿಪ್ಪು ಉದ್ಯಮ ನಡೆಸಿದ್ದರು. ಬಳಿಕ ಕುಂದಾಪುರದಲ್ಲೆ ಬೀಡಿ ಉದ್ಯಮ ಆರಂಭಿಸಿ ನಿರಂತರ ಮೂವತ್ತೈದು ವರ್ಷಗಳ ಕಾಲ ತಾಲೂಕಿನ ವಿವಿಧೆಡೆಗಳಲ್ಲಿ ಬೀಡಿ ಬ್ರ್ಯಾಂಚುಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಮಹಿಳೆಯರು, ಯುವತಿಯರಿಗೆ ಉದ್ಯೋಗ ಒದಗಿಸಿದ್ದರು. ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದ ಯು ನರಸಿಂಹ […]

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಇಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ (ಕೋವಿಡ್‌–19) ಪ್ರಕರಣ ಪತ್ತೆಯಾಗಿಲ್ಲ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಾಗರ ತಾಲ್ಲೂಕಿನ ಮಹಿಳೆಯಲ್ಲಿ ಕೊರೊನಾ ರೋಗದ ಸೋಂಕು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದು, ವಯೋಸಹಜ ಇತರೆ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಡಿಎಚ್‌ಒ ಎಚ್ಚರಿಕೆ

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹರಡಬಾರದು. ಇಂತಹ ಸುದ್ದಿಗಳನ್ನು ಹರಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಕೊರೊನ ಶಂಕಿತ ವ್ಯಕ್ತಿಯ ಗುರುತು, ವಿಳಾಸ ಅಥವಾ ಇನ್ನಿತರ ವೈಯಕ್ತಿಕ ಮಾಹಿತಿಯನ್ನು ಸಹ ಮಾದ್ಯಮದಲ್ಲಿ ಬಹಿರಂಗಪಡಿಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಎಚ್ಚರಿಸಿದ್ದಾರೆ.

ಕೊರೊನಾ: ವಿದೇಶದಿಂದ ಬಂದವರು ಸ್ವಯಂ ಘೋಷಣೆ ಮಾಡಿಕೊಳ್ಳಿ: ಡಾ. ಸುಧೀರ್‌ ಚಂದ್ರ ಸೂಡ

ಉಡುಪಿ: ಉಡುಪಿ ಜಿಲ್ಲೆಗೆ ವಿದೇಶದಿಂದ ಬಂದ ವ್ಯಕ್ತಿಗಳು ಆರೋಗ್ಯ ಇಲಾಖೆಯ ಸ್ಥಳೀಯ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರ ಬಳಿ, ತಾವು ವಿದೇಶದಿಂದ ಬಂದಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಕೊರೋನಾ ಮುನ್ನೆಚ್ಚರಿಕೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಫೆಬ್ರವರಿ 25ರ […]

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ ಮಾ.12: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ, ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 […]