ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಿಬ್ಬಂದಿಗಳು ಇತ್ತೀಚೆಗೆ ವಿಶ್ವಮಹಿಳಾ ದಿನವನ್ನು ಸಂಸ್ಥೆಯಲ್ಲಿ ಆಚರಿಸಿದರು. ಉದ್ಯಾವರದ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಪ್ರೊಫೆಸರ್ ಡಾ.ಚೈತ್ರಾ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ ಎನ್ ಚಿಪ್ಳೂಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲರಾದ ಡಾ.ಐ.ಆರ್ ಮಿತ್ತಂತಾಯ, ಡಾ. ಶ್ರೀನಿವಾಸ ರಾವ್ ಬಿ.ಆರ್, ರಿಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಡುಪಿಯ […]

ಕೊರೂನಾ ವೈರಸ್, ಸರಕಾರದ ನಿರ್ಭಂದಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ ಮಾ.14: ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ವಿಧಿಸಿರುವ ನಿರ್ಬಂಧಗಳನ್ನು, ಸಂಬಂದಪಟ್ಟ ಸಂಸ್ಥೆಗಳು ಮತ್ತು ಸಾರ್ವಜನಿಕರು ಜಿಲ್ಲೆಯಲ್ಲಿ ಕಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಗೆ ವಿದೇಶಗಳಿಂದ ಆಗಮಿಸುವವರು ರೋಗ ಲಕ್ಷಣ ಇಲ್ಲದಿದ್ದರೂ ಸಹ 14 ದಿನಗಳ ಕಾಲ ಮನೆಯಲ್ಲಿಯೇ ಇರುವಂತೆ ತಿಳಿಸಿದ ಅವರು, ಜಾತ್ರೆ ಮುಂತಾದ ಕಾರ್ಯಕ್ರಮದಲ್ಲಿ ಧಾರ್ಮಿಕ ವಿಧಿ ವಿಧಾನ ಮಾತ್ರ […]

ಉಡುಪಿ:ನೂತನ ಪೋಕ್ಸೋ ನ್ಯಾಯಾಲಯ ಉದ್ಘಾಟನೆ

ಉಡುಪಿ: ಪೋಕ್ಸೋ ನ್ಯಾಯಾಲಯ ಒಂದು ಲೆಕ್ಕದಲ್ಲಿ ಸಮಾಜಕ್ಕೆ ಒಳ್ಳೆಯದಾಗಿದ್ದರೆ, ಇನ್ನೊಂದು ಲೆಕ್ಕದಲ್ಲಿ ಅದು ಒಳ್ಳೆಯ ಸಂಕೇತವಲ್ಲ. ಆದರೆ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಹಾಗೂ ಈ ಪಿಡುಗುವಿನ ನಿರ್ಮೂಲನೆಗೆ ಪೋಕ್ಸೋ ನ್ಯಾಯಾಲಯ ಅವಶ್ಯಕ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಎಸ್‌. ಅಬ್ದುಲ್‌ ನಜೀರ್‌ ಹೇಳಿದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಮಹಡಿಯಲ್ಲಿ ಶನಿವಾರ ನೂತನ ಪೋಕ್ಸೋ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಪೋಕ್ಸೋ ಪ್ರಕರಣ ಹೆಚ್ಚಿದರೆ ಅದು ಸಮಾಜಕ್ಕೆ ಒಳ್ಳೆಯ ಸಂದೇಶವಲ್ಲ. ಪೋಕ್ಸೋ ಕೋರ್ಟ್‌ ಅಥವಾ […]

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿಯ ಯುವಕ ಸಾವು

ಉಡುಪಿ: ಬೆಂಗಳೂರಿನ ಜಿಗಣಿಯ ಜೆವಿಕೆ ಕಂಪೆನಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿಯ ಯುವಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ರಾಮಚಂದ್ರ ದೇವಾಡಿಗ (27), ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಕಳೆದ ವರ್ಷ ಆ.20ರಂದು ಬೈಕಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಬೈಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಮಣಿಪಾಲಕ್ಕೆ ಕರೆ ತಂದು ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 3 ತಿಂಗಳ ಕಾಲ ಕೋಮಾದಲ್ಲಿದ್ದ ಅವರು ಚಿಕಿತ್ಸೆಗೆ […]

ಉಡುಪಿ: ರಾಜ್ಯಮಟ್ಟದ ವಕೀಲರ ವಾಲಿಬಾಲ್‌ ಹಾಗೂ ತ್ರೋಬಾಲ್‌ ಟೂರ್ನ್‌ಮೆಂಟ್‌ಗೆ ಚಾಲನೆ

ಉಡುಪಿ: ವಕೀಲರು ಮೈದಾನದಲ್ಲಿ ಮಾತ್ರವಲ್ಲ, ವೃತ್ತಿ ಜೀವನದಲ್ಲಿಯೂ ಕ್ರೀಡಾ ಸ್ಫೂರ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಎಸ್‌. ಅಬ್ದುಲ್‌ ನಜೀರ್‌ ಹೇಳಿದರು. ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಉಡುಪಿ ಕೋರ್ಟ್‌ ಆವರಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ ವಕೀಲರ ವಾಲಿಬಾಲ್‌ ಹಾಗೂ ತ್ರೋಬಾಲ್‌ ಟೂರ್ನ್‌ಮೆಂಟ್‌ಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ವಕೀಲರು ಶುಲ್ಕ ಪಡೆದುಕೊಳ್ಳುವುದು ಸೋಲು–ಗೆಲುವಿಗಾಗಿ ಅಲ್ಲ, ಕಕ್ಷಿದಾರನ ಪರವಾಗಿ ವಾದಮಂಡನೆ ಮಾಡಿದಗೋಸ್ಕರ. ವಕೀಲರು ಜನರಿಗೆ ಉತ್ತಮ ಕಾನೂನು ಸಲಹೆಗಳನ್ನು ನೀಡುವ ಕೆಲಸ ಮಾಡಬೇಕು ಎಂದರು. […]