ಉಡುಪಿ: ವಿದೇಶದಿಂದ ಬಂದ ಆರು ಮಂದಿಯಲ್ಲಿ ಕೊರೊನಾ ಲಕ್ಷಣ, ಆಸ್ಪತ್ರೆಗೆ ದಾಖಲು
ಉಡುಪಿ: ವಿದೇಶದಿಂದ ಜಿಲ್ಲೆಗೆ ಬಂದ ಆರುಮಂದಿಯಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದು, ಐವರಿಗೆ ಜಿಲ್ಲಾಸ್ಪತ್ರೆ ಹಾಗೂ ಒಬ್ಬರಿಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುಬೈನಿಂದ ಆಗಮಿಸಿದ್ದ ಮೂವರಲ್ಲಿ ಜ್ವರ, ಶೀತ, ಕೆಮ್ಮು, ಕುವೈತ್ ನಿಂದ ಮರಳಿದ್ದ ಮಹಿಳೆಗೆ ಕೆಮ್ಮು ಗಂಟಲು ನೋವು ಮತ್ತು ಕತಾರ್ ನಿಂದ ಮರಳಿದ್ದ ವ್ಯಕ್ತಿಯಲ್ಲಿ ತಲೆನೋವು, ಜ್ವರ ಹಾಗೂ ಕುಂದಾಪುರದ ವ್ಯಕ್ತಿಯಲ್ಲಿ ಶಂಕಿತ ಕೊರೊನಾ ಲಕ್ಷಣ ಕಾಣಿಸಿಕೊಂಡಿತ್ತು. ಐದು ಮಂದಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಮತ್ತು ಕುಂದಾಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಮೀನು ತಿನ್ನುವುದರಿಂದ ಕೊರೊನಾ ಬರೊದಿಲ್ಲ, ವದಂತಿಗೆ ಕಿವಿಗೊಡಬೇಡಿ: ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ
ಉಡುಪಿ: ಕೋವಿಡ್–19 (ಕೊರೊನಾ) ವೈರಸ್‌ನ ಪರಿಣಾಮ ಮೀನುಗಾರಿಕೆಯ ಮೇಲೆ ಅಷ್ಟಾಗಿ ಬೀರಿಲ್ಲ. ಆದರೆ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮೀನಿನಲ್ಲಿ ಕೊರೊನಾ ವೈರಸ್ ಇದೆಯೆಂದು ಅಪಪ್ರಚಾರ ಮಾಡಲಾಗುತ್ತಿದೆ. ವದಂತಿ ಹಬ್ಬಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಲ್ಪೆ ಮಿನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ ಒತ್ತಾಯಿಸಿದ್ದಾರೆ. ಮಲ್ಪೆ ಬಂದರಿನಲ್ಲಿ ಮಂಗಳವಾರ ಪತ್ರಿಕಾ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮಲ್ಪೆ ಬಂದರಿನಲ್ಲಿ ಎಂದಿನಂತೆ ವಹಿವಾಟು ನಡೆಯುತ್ತಿದ್ದು, ಗ್ರಾಹಕರ ಸಂಖ್ಯೆಯಲ್ಲಿಯೂ ಯಾವುದೇ ಕೊರತೆ ಎದುರಾಗಿಲ್ಲ. ಬೇರೆ ಜಿಲ್ಲೆ […]
ಬಳ್ಕೂರಿನ ಎಂಟನೆ ತರಗತಿ ಹುಡುಗ ನೇಣುಬಿಗಿದು ಆತ್ಮಹತ್ಯೆ
ಕುಂದಾಪುರ: ಎಂಟನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹದಿನಾಲ್ಕು ವರ್ಷ ಪ್ರಾಯದ ಬಾಲಕನೋರ್ವ ವಾಸವಾಗಿದ್ದ ಮನೆಯ ಬಚ್ಚಲು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಳವಳಕಾರಿ ಘಟನೆ ಮಂಗಳವಾರ ಇಲ್ಲಿಗೆ ಸಮೀಪದ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರಿನಲ್ಲಿ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರಾದರೂ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಳ್ಕೂರಿನ ನಿವಾಸಿ ಎಂಟನೇ ತರಗತಿ ವಿದ್ಯಾರ್ಥಿ ಚರಣ್(14) (ಹೆಸರು ಬದಲಿಸಲಾಗಿದೆ) ಎಂಬಾತನೇ ಸಾವನ್ನಪ್ಪಿದ ಬಾಲಕ. ಬಳ್ಕೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಉಳಿದ ಮಕ್ಕಳೊಂದಿಗೆ […]
ಮರಳುಗಾರಿಕೆಗೆ ಪರವಾನಿಗೆ ನೀಡಿಕೆ : ಜಿಲ್ಲಾ ಬಿಜೆಪಿ ಸ್ವಾಗತ’
ಉಡುಪಿ:ಮರಳು ದಿಬ್ಬಗಳನ್ನು ತೆರವುಗೊಳಿಸಲು ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ದೊರೆತಿರುವುದು ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಈ ಪ್ರಕಿಯೆಯು ಹಲವಾರು ಎಡರು ತೊಡರುಗಳಿಂದ ಜಿಲ್ಲೆಯಾದ್ಯಂತ ಸ್ಥಗಿತಗೊಂಡಿದ್ದ ಮರಳುಗಾರಿಕೆ ಪುನಶ್ಚೇತನಕ್ಕೆ ವೇಗ ನೀಡಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಏಳು ಸದಸ್ಯರ ಸಮಿತಿ ಸಭೆಯಲ್ಲಿ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸುವರೆ ತಾತ್ಕಾಲಿಕ ಪರವಾನಿಗೆ ನೀಡಲು ತೀರ್ಮಾನ ಕೈಗೊಂಡಿರುವುದು ಉತ್ತಮ ಬೆಳವಣಿಗೆ. ಇದರ ಫಲವಾಗಿ ಸಾರ್ವಜನಿಕರಿಗೆ ಶೀಘ್ರವಾಗಿ ಮರಳು ಲಭ್ಯವಾಗುವ ಸಾಧ್ಯತೆಗಳಿದ್ದು, […]
ಕುಂದಾಪುರ: ಹಿಂದೂ ರುಧ್ರಭೂಮಿ ಜಾಗದಲ್ಲಿ ತ್ಯಾಜ್ಯವಿಲೇವಾರಿ ಘಟಕ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ
ಕುಂದಾಪುರ: ಹಿಂದೂ ರುಧ್ರಭೂಮಿ ಜಾಗದಲ್ಲಿ ತ್ಯಾಜ್ಯವಿಲೇವಾರಿ ಘಟಕ ಆರಂಭಿಸಲು ಮುಂದಾದ ಪಂಚಾಯಿತಿ ವಿರುದ್ದ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಲ್ಲಿನ ಕೊಟೇಶ್ವರ ಗ್ರಾಮಪಂಚಾಯಿತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಪ್ರತೀ ಗ್ರಾ.ಪಂಚಾಯಿತಿಯಲ್ಲೂ ಎಸ್‌ಎಲ್‌ಆರ್‌ಎಂ ಘಟಕ ಸ್ಥಾಪಿಸುವ ಕುರಿತು ಸರ್ಕಾರದ ಆದೇಶದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ಒಣತ್ಯಾಜ್ಯ ವಿಲೇವಾರಿ ಘಟಕವನ್ನು ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಸರ್ಕಾರಿ ಹಿಂದೂ ರುಧ್ರಭೂಮಿ ಸ್ಥಳದಲ್ಲಿ ಪ್ರಾರಂಭಿಸಲು ಕೋಟೇಶ್ವರ ಗ್ರಾಮಪಂಚಾಯಿತಿ ಮುಂದಾಗಿತ್ತು. ಇದಕ್ಕಾಗಿಯೇ ಕಂದಾಯ ಇಲಾಖೆಯ ಅನುಮತಿ ಪಡೆದು ೧೦ಸೆಂಟ್ಸ್ […]