ಕೊರೆನೋ ಭೀತಿ: ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು ಶಾಸಕ ಕಾಮತ್ ಸೂಚನೆ

ಮಂಗಳೂರು: ಜಗತ್ತನ್ನು ಭೀತಿಗೊಳಿಸಿರುವ ಕೊರೆನೋ ವೈರಸ್ ಹರಡದಂತೆ ಎಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಶಾಸಕ ಕಾಮತ್ ಅವರು ಸೂಚಿಸಿದ್ದಾರೆ. ಕೇರಳ ರಾಜ್ಯದಿಂದ ಬರುವ ವಾಹನಗಳನ್ನು ತಲಪಾಡಿ ಗಡಿಭಾಗದಲ್ಲಿ ತಪಾಸಣೆ ನಡೆಸಬೇಕು ಹಾಗೂ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ, ಮಂಗಳೂರಿನಲ್ಲಿರುವ ಖಾಸಗಿ ಹಾಗೂ ಸರಕಾರಿ ಬಸ್ ನಿಲ್ದಾಣದಲ್ಲಿ ಕೂಡ ವಿಶೇಷ ಕಟ್ಟೆಚ್ಚರ ವಹಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ಈ ವರೆಗೂ ಕೊರೆನಾ ವೈರಸ್ ಕುರಿತು ಮಂಗಳೂರಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು […]

ಕೊರೊನಾ ವೈರಸ್ ನಿಯಂತ್ರಣ ಆಗುವವರೆಗೂ ಬಂದ್ ಅನಿವಾರ್ಯ: ಶ್ರೀರಾಮುಲು

ಮಂಗಳೂರು: ಕೊರೊನ ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ನೇತೃತ್ವದಲ್ಲಿ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಇಂದು ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ಆರೋಗ್ಯ ಸಚಿವ ಶ್ರೀರಾಮುಲು‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು‌, ಕೊರೊನಾ ವೈರಸ್ ಬಗ್ಗೆ ಇಡೀ ದೇಶದಲ್ಲಿ ಭಯಾನಕ ವಾತಾವರಣ ಸೃಷ್ಟಿ ಆಗಿದೆ. ಕೇಂದ್ರ ರಾಜ್ಯ ಸರಕಾರ ಸವಾಲಾಗಿ ಸ್ವೀಕರಿಸಿ ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ […]

ಕೊರೊನಾ ಸೋಂಕಿಗೆ ಭಾರತದಲ್ಲಿ ಮೂರನೇ ಬಲಿ: ಮುಂಬೈನಲ್ಲಿ ವೃದ್ಧ ಸಾವು

ಮುಂಬೈ: ಭಾರತದ ಮುಂಬೈನಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದ್ದು, ಮಹಾರಾಷ್ಟ್ರದ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ದುಬೈನಿಂದ ಬಂದಿದ್ದ ಕಲಬುರಗಿಯ 76 ವರ್ಷದ ವೃದ್ಧ ಮೊದಲು ಕೊರೋನಾಗೆ ಬಲಿಯಾಗಿದ್ದು, ನಂತರ ದೆಹಲಿಯಲ್ಲಿ ಮಹಿಳೆಯೊಬ್ಬರು ಈ ಮಾರಕ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದರು. ಇದೀಗ ಮಹಾರಾಷ್ಟ್ರದಲ್ಲೂ ವೃದ್ಧನೊಬ್ಬ ಕೊರೋನಾ ಸೋಂಕಿಗೆ ಬಲಿಯಾಗುವ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3ಕ್ಕೇರಿದೆ. ಈ ಸೋಂಕಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು […]

ಕೋಳಿ ಶೀತ ಜ್ಚರ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಮಾ.17: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋಳಿ ಶೀತ ಜ್ವರದ ಕಣ್ಗಾವಲಿನ ಕ್ರಮ ಕೈಗೊಳ್ಳುವ ಸರ್ವೇಕ್ಷಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಳಿಶೀತ ಜ್ವರವು ಈಗಾಗಲೇ ಮೈಸೂರು ಮತ್ತು ದಾವಣಗೆರೆಯಲ್ಲಿ ಕಂಡು ಬಂದಿದ್ದು,    ಜಿಲ್ಲೆಯ ಕೋಳಿ ಮಾರಾಟಗಾರರು, ಈ ಜಿಲ್ಲೆಗಳಿಂದ ಕೋಳಿಗಳನ್ನು ತರಿಸದಂತೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋಳಿ […]

ಕೊರೋನಾ  ನಿಯಂತ್ರಣ: ಅಧಿಕಾರಿಗಳಿಗೆ ರಜೆ ಇಲ್ಲ: ಜಿಲ್ಲಾಧಿಕಾರಿ

ಉಡುಪಿ ಮಾ.17: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಈ ಅವಧಿಯಲ್ಲಿ ರಜೆ ಮಂಜೂರು ಮಾಡದಂತೆ ಮತ್ತು ಜಿಲ್ಲಾಧಿಕಾರಿ, ಎಸ್.ಪಿ.ಸಿಇಓ ಇವರ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಹಾಗೂ ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.