ಕೊರೋನಾ ನಿಯಂತ್ರಣ: ಲಾಡ್ಜ್‍ಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯ: ಜಿಲ್ಲಾಧಿಕಾರಿ

ಉಡುಪಿ ಮಾ.17: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಲಾಡ್ಜ್‍ಗಳಲ್ಲಿರುವ ಪ್ರವಾಸಿಗರ ವಿವರಗಳನ್ನು ಪಡೆಯುವಂತೆ ಮತ್ತು ಪ್ಲಾಟ್‍ಗಳಿಗೆ ಹೊಸದಾಗಿ ಬರುವವರ ಮಾಹಿತಿ ಪಡೆದು ಅವರ ಸ್ವ-ಹೇಳಿಕೆ ಪಡೆಯುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೊರೋನ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಾಸ್ಕ್‍ಗಳ ಕೊರತೆ ಸೃಷ್ಠಿಸುವುದು ಮತ್ತು ಅವುಗಳನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ […]