ವಿದೇಶದಿಂದ ಬಂದ ಐದು ಮಂದಿಯಲ್ಲಿ ಕೊರೊನಾ ಶಂಕೆ: ಆಸ್ಪತ್ರೆಗೆ ದಾಖಲು

ಉಡುಪಿ: ವಿದೇಶದಿಂದ ಐದು ಮಂದಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದ್ದು, ಮೂವರಿಗೆ ಜಿಲ್ಲಾಸ್ಪತ್ರೆ, ಒಬ್ಬನಿಗೆ ಮಣಿಪಾಲದ ಕೆಎಂಸಿ ಹಾಗೂ ಇನ್ನೊಬ್ಬನಿಗೆ ಕುಂದಾಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈಚೆಗೆ ದುಬೈನಿಂದ ಬಂದಿದ್ದ ಇಬ್ಬರಲ್ಲಿ ಜ್ವರ, ಶೀತ, ಕೆಮ್ಮು, ಕತಾರ್ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ತೀವ್ರ ತಲೆನೋವು, ಜ್ವರ ಕಾಣಿಸಿಕೊಂಡಿದ್ದು, ಮತ್ತಿಬ್ಬರು ಅಬುದಾಬಿ ಹಾಗೂ ಬ್ರೈಹಿರಿನ್ ನಿಂದ ಮರಳಿದ್ದು, ಅವರಲ್ಲಿ ಜ್ವರ, ಗಂಟಲು ನೋವಿನ ಲಕ್ಷಣ ಕಾಣಿಸಿಕೊಂಡಿದೆ. ಮೂರು ಮಂದಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಮತ್ತು ಒಬ್ಬನಿಗೆ […]
ಕೊರೊನಾ ಸೋಂಕಿನ ಹರಡುವಿಕೆ ತಡೆಗೆ ಕೆಎಂಸಿ ಆಸ್ಪತ್ರೆಯಿಂದ ಮುನ್ನೆಚ್ಚರಿಕೆ ಕ್ರಮ: ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1ರ ವರೆಗೆ ಮಾತ್ರ ಹೊರರೋಗಿಗಳ ವಿಭಾಗ ಒಪನ್

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಅನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ತತ್ಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಹೊರರೋಗಿ ವಿಭಾಗಗಳನ್ನು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರ ನಡುವೆ ಮಾತ್ರ ಕಾರ್ಯನಿರ್ವಹಿಸಲು ನಿರ್ಧರಿಸಿದೆ. ವೈದ್ಯಕೀಯ ತುರ್ತು / ಎಮರ್ಜೆನ್ಸಿ ಸೇವೆಗಳಿಗಾಗಿ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಈ ಮೂಲಕ ಸೂಚಿಸಲಾಗಿದೆ. ಎಲ್ಲಾ ಪೂರ್ವ ನಿಯೋಜಿತ ಭೇಟಿಗಳನ್ನು ಮುಂದೂಡಬೇಕು ಎಂದೂ ಈ ಮೂಲಕ ಸೂಚಿಸಲಾಗಿದೆ. ಒಳ ರೋಗಿಗಳೊಂದಿಗೆ ಒಬ್ಬರಿಗೆ ಮಾತ್ರ […]
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿಗೊಳಿಸಿದ ಡಿಸಿ ಜಿ. ಜಗದೀಶ್

ಉಡುಪಿ: ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಇಂದಿನಿಂದ ಅನಿರ್ದಿಷ್ಟಾವಧಿವರೆಗೆ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಹಿಂದೆ, ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ, ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜಾತ್ರೆ, ಧಾರ್ಮಿಕ ಉತ್ಸವಗಳಲ್ಲಿ ಜನರು ಭಾಗವಹಿಸುವಂತಿಲ್ಲ. ಸಂತೆ, ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಬೀಚ್ […]
ಕೊರೊನಾ ವೈರಸ್ : ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಗೆ ಹೆಚ್ಚಿನ ದರ ನಿಗಧಿಪಡಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಉಡುಪಿ ಮಾ.18: ಜಿಲ್ಲೆಯಲ್ಲಿನ ಸಾರ್ವಜನಿಕರು (ಕೋವಿಡ್-19) ಕೊರೊನಾ ವೈರಸ್ ಭೀತಿಯಲ್ಲಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಲವಾರು ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ನಂತಹ ಉಪಯುಕ್ತ ವಸ್ತುಗಳನ್ನು ಬಳಸಲಾಗುತ್ತಿದೆ. ಆದರೆ ಈ ಸಂದರ್ಭವನ್ನು ಔಷಧಿ ಅಂಗಡಿ ಮಾಲಕರು ದುರುಪಯೋಗ ಪಡಿಸಿಕೊಂಡು ಹೆಚ್ಚಿನ ದರಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಈ ವಸ್ತುಗಳನ್ನು ನಿಯಮಬಾಹಿರವಾಗಿ ದಾಸ್ತಾನು ಇರಿಸಿ ಕೃತಕ ಅಭಾವವನ್ನು ಸೃಷ್ಟಿಸಿ ಈ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಲಾಭ ಪಡೆಯಲು ಹವಣಿಸುತ್ತಿರುವುದು ಗಮನಕ್ಕೆ ಬಂದಿದೆ. […]
ಜೀರ್ಣೋದ್ಧಾರಕ್ಕೆ ಅಣಿಯಾದ 800 ವರ್ಷಗಳಷ್ಟು ಪುರಾತನದ ಎಡ ಕೈಯಲ್ಲಿ ಆಶೀರ್ವಾದ ನೀಡುವ ಬೈಂದೂರಿನ ಯತ್ತಾಬೇರು ದುರ್ಗಾಪರಮೇಶ್ವರಿ ಅಮ್ಮನವರ ದೇಗುಲ.

ಪ್ರಾಚೀನ ದೇಗುಲವನ್ನು ಜೀರ್ಣೋದ್ಧಾರ ಮಾಡುವುದು ಅತ್ಯಂತ ಪುಣ್ಯದ ಮತ್ತು ಅತೀ ಶ್ರೇಷ್ಠ ಕೆಲಸ ಎಂದು ಶಾಸ್ತ್ರಗಳಲ್ಲಿ ಮತ್ತು ಬಲ್ಲವರು ಹೇಳುತ್ತಾರೆ. ಆ ನಿಟ್ಟಿನಲ್ಲಿ 800 ವರ್ಷಗಳಿಗೂ ಅಧಿಕ ಇತಿಹಾಸವನ್ನು ಹೊಂದಿರುವ ಬೈಂದೂರಿನ ತಗ್ಗರ್ಸೆ ಗ್ರಾಮದ ಯತ್ತಾಬೇರುನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಜೈನರ ಕಾಲದಲ್ಲಿ ಪ್ರತಿಷ್ಟಾಪನೆಗೊಂಡಿತ್ತು. ಇದಕ್ಕೆ ಸಾಕ್ಷಿಯಾಗಿ ಈ ಅಮ್ಮನವರನ್ನು ಬಹಳ ಹಿಂದೆ ಜೈನರ ಆರಾಧ್ಯ ದೇವಿಯಾದ ಪದ್ಮಾವತಿ ಅಮ್ಮನವರು ಎಂದು ಕರೆಯುತ್ತಿದ್ದರಂತೆ ಮತ್ತು ಇಲ್ಲಿ ಪರಿವಾರ ದೈವಗಳಾಗಿ ಜೈನ ಜಟ್ಟಿಗೇಶ್ವರ […]