ವಿದೇಶದಿಂದ ಬಂದ ನಾಲ್ವರಲ್ಲಿ ಶಂಕಿತ ಕೊರೊನಾ ಲಕ್ಷಣ: ಆಸ್ಪತ್ರೆಗೆ ದಾಖಲು

ಉಡುಪಿ: ವಿದೇಶದಿಂದ ಉಡುಪಿಗೆ ಬಂದ ನಾಲ್ವರಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಹರೈನ್ ನಿಂದ ಬಂದ 48 ವರ್ಷದ ವ್ಯಕ್ತಿಗೆ ಹಾಗೂ ಸೌದಿಯಿಂದ ಮರಳಿದ 23 ವರ್ಷದ ಯುವತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ, ಸೌದಿಯಿಂದ ಮರಳಿದ 32 ವರ್ಷದ ವ್ಯಕ್ತಿಗೆ ಕುಂದಾಪುರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಆಸ್ಟ್ರೇಲಿಯಾದಿಂದ ಮರಳಿದ 66 ವರ್ಷದ ಮಹಿಳೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ರೋಗಿಗಳ ಗಂಟಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ […]

ಉಡುಪಿ: ಕೊರೋನಾ ಅಲರ್ಟ್: ಮಾ. 31 ರ ವರೆಗೆ ಗ್ರಂಥಾಲಯ ಸೇವೆ ಬಂದ್

ಉಡುಪಿ: ಕೊರೋನಾ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ಆದೇಶದಂತೆ ಹಾಗೂ ಇಲಾಖಾ ನಿರ್ದೇಶಕರ ಸೂಚನೆ ಮೇರೆಗೆ ನಗರ ಕೇಂದ್ರ ಗ್ರಂಥಾಲಯ, ಕೆ. ಎಂ. ಮಾರ್ಗ ಉಡುಪಿಯ ಮುಖ್ಯ ಶಾಖೆ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಶಾಖಾ ಗ್ರಂಥಾಲಯಗಳಲ್ಲಿ ಮಾ. 31 ರವರೆಗೆ ಸಾರ್ವಜನಿಕ ಓದುಗರಿಗೆ ತಾತ್ಕಾಲಿಕವಾಗಿ ಗ್ರಂಥಾಲಯದ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಪುಸ್ತಕ ಎರವಲು ಸೇವೆಯನ್ನು ಮಾತ್ರ ನೀಡಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ  ತಿಳಿಸಿದ್ದಾರೆ.

ಉಡುಪಿ: ಕೊರೊನಾ ವೈರಸ್ ಭೀತಿ ಹಿನ್ನೆಲೆ: ಸರಕಾರಿ ಸೇವೆ ಭಾಗಶಃ ಸ್ಥಗಿತ: ಜಿಲ್ಲಾಧಿಕಾರಿ

ಉಡುಪಿ : ಕೊರೊನಾ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ, ಕರ್ನಾಟಕ  ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ಸ್-2020 ರ ನಿಯಮ 12 ರಲ್ಲಿ ಹಾಗೂ Disaster Management Act 2005 ಕಲಂ 24 (ಎ), (ಬಿ), 30 (2) ರಡಿಯಲ್ಲಿ  ಈ ಕೆಳಕಂಡ ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಸ್ಥಗಿತಗೊಂಡ ಸೇವೆಗಳು: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಆಧಾರ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ […]

ಕಾರ್ಕಳ: ಕೊರೊನಾ ಕಾಯಿಲೆ ಆರೋಗ್ಯ ಜಾಗೃತಿ ರಥಕ್ಕೆ ಚಾಲನೆ

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ರೋಟರಿ ಕ್ಲಬ್, ಕಾರ್ಕಳ ರಾಕ್ ಸಿಟಿ ಇವರ ಸಂಯುಕ್ತ ಆಶ್ರಯದಲ್ಲಿ, ಶುಕ್ರವಾರ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕೋವಿಡ್ -19 ಕುರಿತು ಮಾಹಿತಿ ನೀಡುವ ಆರೋಗ್ಯ ಜಾಗೃತಿ ರಥಕ್ಕೆ ಕಾರ್ಕಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಕಾರ್ಕಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮೇಜರ್ ಡಾ. ಹರ್ಷ ಕೆ.ಬಿ ಜಂಟಿಯಾಗಿ ಚಾಲನೆ ನೀಡಿದರು. ತಹಶೀಲ್ದಾರ್ ಪುರಂಧರ ಹೆಗ್ಡೆ ಕಾರ್ಯಕ್ರಮದ ಕುರಿತು […]

ಸಲೂನ್, ಬಟ್ಟೆ ಅಂಗಡಿಗಳಲ್ಲಿ ಜನ ಸೇರಿಸದಂತೆ ಉಡುಪಿ ಡಿಹೆಚ್‍ಓ ಎಚ್ಚರಿಕೆ:

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಹೇರ್ ಕಟ್ಟಿಂಗ್ ಶಾಪ್‍ಗಳು, ಬ್ಯೂಟಿಪಾರ್ಲರ್‍ಗಳು, ಸಾರಿ ಸೆಂಟರ್ಸ್ ಮತ್ತು ಇತರೆ ಹೆಚ್ಚು ಜನಸಂದಣಿ ಸೇರುವ ಅಂಗಡಿ ಮುಂಗಟ್ಟುಗಳು, ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತವಾಗಿ ಜಿಲ್ಲಾಡಳಿತ ಸೂಚಿಸಿರುವ ಈ ಕೆಳಕಂಡ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಹೇರ್ ಕಟ್ಟಿಂಗ್ ಶಾಪ್‍ಗಳು ಮತ್ತು ಬ್ಯೂಟಿ ಪಾರ್ಲರ್‍ಗಳಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರತಿಯೊಬ್ಬ ಗ್ರಾಹಕರಿಗೂ ಪ್ರತ್ಯೇಕವಾಗಿ ಬಟ್ಟೆಗಳನ್ನು ಉಪಯೋಗಿಸಬೇಕು. ತಮ್ಮಲ್ಲಿರುವ ಪೀಠೋಪಕರಣಗಳನ್ನು ಆಗಾಗ ಸ್ವಚ್ಛಗೊಳಿಸುತ್ತಿರಬೇಕು. ವೈಯಕ್ತಿಕ […]