ವಾಣಿಜ್ಯ ಮಳಿಗೆಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಉಡುಪಿ ಮಾ.21: ಕೋವಿಡ್ -19 ಕುರಿತಂತೆ ತಾತ್ಕಾಲಿಕ ನಿಯಮಾವಳಿಗಳನ್ನು ಹೊರಡಿಸಿ ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕಾಯಿಲೆಯ ಸ್ಪೋಟ ಮತ್ತು ಹರಡುವುದನ್ನು ತಡೆಗಟ್ಟಲು ಸಿನಿಮಾ ಮಂದಿರಗಳು, ಮಾಲ್‍ಗಳು, ನಾಟಕಗಳು, ರಂಗಮಂದಿರಗಳು, ಪಬ್‍ಗಳು, ಕ್ಲಬ್‍ಗಳು ಹಾಗೂ ನೈಟ್‍ಕ್ಲಬ್‍ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ನಿರ್ದೇಶಿಸಲಾಗಿದ್ದು, ಮುಂದುವರೆದು ಇನ್ನೂ ಅನೇಕ ಜನಸಂದಣಿ ಇರುವ ಸ್ಥಳಗಳಲ್ಲಿ, ಹೆಚ್ಚು ಗ್ರಾಹಕರು ಸೇರುವಂತಹ ವಾಣಿಜ್ಯ ಮಳಿಗೆಗಳಲ್ಲಿ ಜನ ಸಂದಣಿಯನ್ನು ನಿಯಂತ್ರಿಸುವ ಅತೀವ ಅವಶ್ಯಕತೆ ಕಂಡು ಬರುತ್ತಿದೆ. ವೈರಾಣುಗಳು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕೆಲವೊಂದು ಕಠಿಣ ಕ್ರಮಗಳನ್ನು […]

ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆ: ಮೆಕ್ಕಾದಿಂದ ಮರಳಿದ್ದ ಗೌರಿಬಿದನೂರಿನ ವ್ಯಕ್ತಿಗೆ ಕೊರೊನಾ

ಉಡುಪಿ: ರಾಜ್ಯದಲ್ಲಿ ಮೊತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈಚೆಗೆ ಮೆಕ್ಕಾ ಯಾತ್ರೆ ಮುಗಿಸಿ ಮರಳಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಗೌರಿಬಿದನೂರಿನ ರಾಜೀವ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಈ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.