ಕೊರೋನಾ ವೈರಸ್: ರಾಜ್ಯದಲ್ಲಿ ಒಂದೇ ದಿನ 7 ಪ್ರಕರಣಗಳು ಪತ್ತೆ
ಬೆಂಗಳೂರು ಮಾ.23: ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಒಂದೇ ದಿನ 7 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದ್ದು, ನಿನ್ನೆ 6 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವತ್ತು ಒಟ್ಟು 7 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಈ ಮೂಲಕ ಮಹಾರಾಷ್ಟ್ರ (71) ಮೊದಲ ಸ್ಥಾನದಲ್ಲಿದ್ದು, ಕೇರಳ (60) 2ನೇ ಸ್ಥಾನದಲ್ಲಿದೆ ಹಾಗೂ ಕರ್ನಾಟಕ (33) 3ನೇ ಸ್ಥಾನಕ್ಕೇರಿದೆ.
ಕರ್ನಾಟಕ ಲಾಕ್ ಡೌನ್: ಸಿಎಂ ಯಡಿಯೂರಪ್ಪ ಮಹತ್ವದ ಆದೇಶ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಸೋಂಕನ್ನು ಸಿಯಂತ್ರಿಸವ ಸಲುವಾಗಿ ಒಂಬತ್ತು ಜಿಲ್ಲೆಗಳಿಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದಂತ್ಯ ವಿಸ್ತರಿಸುವಂತೆ ಸಿಎಂ ಯಡಿಯೂರಪ್ಪ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಉಡುಪಿ ಕೊರೊನಾ ಸೋಂಕು ಹಿನ್ನೆಲೆ- ಮಸೀದಿಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ
ಉಡುಪಿ : ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಎಲ್ಲಾ ಮಸೀದಿಗಳಲ್ಲಿ ದೈನಂದಿನ ಪ್ರಾರ್ಥನೆಗಳನ್ನು (ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ) ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಾ. 23 ರಿಂದ ಮಾ. 31 ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕಾಪು: ಸುಗ್ಗಿ ಮಾರಿಪೂಜೆ ಜಾತ್ರೆ ರದ್ದು
ಕಾಪು: ಉಡುಪಿ ಜಿಲ್ಲೆಯಲ್ಲಿ ಕೊರೊನಾ (ಕೋವಿಡ್-19) ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮದ ಬಗ್ಗೆ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಜಿ.ಜಗದೀಶ್ ಸಿ.ಆರ್. ಪಿ.ಸಿ 144(3) ಸೆಕ್ಷನ್ ಜಾರಿಗೊಳಿಸಿರುತ್ತಾರೆ.
ಕೊರೋನಾ ವೈರಸ್ ಹರಡುವಿಕೆ ಕುರಿತು ಸೈನಿಕರಿಗೆ ತರಬೇತಿ
ಉಡುಪಿ ಮಾ.23: ಕೊರೋನಾ ವೈರಾಣು ಹರಡುವಿಕೆ ಕುರಿತಾಗಿ ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಮೂಡಿಬರುವ ವದಂತಿಗಳನ್ನು ಪರಾಮರ್ಶಿಸಿ , ನೈಜ ಮಾಹಿತಿ ಕೂಡುವ ಬಗ್ಗೆ ಹಾಗೂ ಸ್ಥಳಿಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ಹಾಗೂ ಕಾರ್ಮಿಕ ತರಬೇತಿ ಸಂಸ್ಥೆ ಇವರ ಸಹಭಾಗಿತ್ವದಲ್ಲಿ , ಸ್ವಯಂ ಸೇವಕರಾಗಿ ನೊಂದಾಯಿಸಿರುವ ಕೊರೋನಾ ಸೈನಿಕರಿಗೆ ಉಡುಪಿಯ ವಾರ್ತಾ ಭವನದಲ್ಲಿ ಸೋಮವಾರ ಮಾಹಿತಿ ನೀಡಲಾಯಿತು. ಕೊರೊನಾ ಕುರಿತು […]