ಹೆಚ್ಚಿನ ದರಕ್ಕೆ ಮಾರಾಟ, ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಉಡುಪಿ ಮಾ.26: ಜಿಲ್ಲೆಯಾದ್ಯಂತ ತರಕಾರಿ, ದಿನಸಿ, ಮೀನು, ಮಾಂಸ , ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು ಮುಂತಾದವುಗಳನ್ನು ಮಾರಾಟ ಮಾಡುವ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳ ಎದುರಿನಲ್ಲಿ ಕನಿಷ್ಠ 6 ಅಡಿಗಳ ಅಂತರದಲ್ಲಿ ಕಡ್ಡಾಯವಾಗಿ ಪೇಂಟ್ ಅಥವಾ ಇನ್ನಿತರ ಬಣ್ಣದ ವಸ್ತುಗಳಿಂದ ಗುರುತನ್ನು ಹಾಕುವುದು ಹಾಗೂ ಸಾರ್ವಜನಿಕರು/ಗ್ರಾಹಕರು ಗುರುತುಗಳ ಸರತಿ ಸಾಲಿನಲ್ಲಿ ನಿಂತು ವಸ್ತುಗಳನ್ನು ಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಈ ನಿರ್ದೇಶನಗಳನ್ನು ಪಾಲಿಸದ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅಲ್ಲದೇ […]
ಕೊರೋನಾ ಭೀತಿ ಹಿನ್ನೆಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಎಪ್ರಿಲ್ 20ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ ಮಾಡಿದೆ. ಇದೇ 27ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲು ರಾಜ್ಯ ಸರ್ಕಾರ ಮಾರ್ಚ್ 22ರಂದು ನಿರ್ಧರಿಸಿತ್ತು. ಇದೀಗ ಏ14 ರ ವರೆಗೆ ಭಾರತ ಲಾಕ್ ಡೌನ್ ಆದ ಹಿನ್ನಲೆ ಶಿಕ್ಷಣ ಇಲಾಖೆಯು ಎಪ್ರಿಲ್ 20ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೆ ಹಾಕಲಾಗಿದೆ ಎಂದು ತಿಳಿಸಿದೆ. 7ರಿಂದ 9ನೇ ತರಗತಿ ಪರೀಕ್ಷೆಗಳು ಹಾಗೂ 2020-21ಯ […]
ಕೊರೋನಾ ನಿಯಂತ್ರಣ: ಕಟ್ಟಡ ಕಾರ್ಮಿಕರಿಗೆ ಮಾಸ್ಕ್ ವಿತರಣೆ

ಉಡುಪಿ ಮಾ.26: ಕಾರ್ಮಿಕ ಇಲಾಖೆ ಉಡುಪಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಘಟಕದ ವತಿಯಿಂದ , ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರಿಗೆ , ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಮತ್ತು ಸೋಪುಗಳನ್ನು ಬುಧವಾರ ವಿತರಿಸಲಾಯಿತು. ಪ್ರಥಮ ಹಂತದಲ್ಲಿ ಉಡುಪಿಯ ಬೀಡಿನಗುಡ್ಡೆಯ ಲೇಬರ್ ಕಾಲೋನಿ ಹಾಗೂ ಸುತ್ತಮುತ್ತಲಿದ್ದ 500 ಮಂದಿ ಕಾರ್ಮಿಕರಿಗೆ ಪ್ರತಿ ಮನೆಗೆ 1 ಮಾಸ್ಕ್ ಮತ್ತು 2 ಸೋಪುಗಳನ್ನು ಹಾಗೂ ಕೊರೋನಾ ನಿಯಂತ್ರಣ ಕುರಿತ ಮುನ್ನೆಚ್ಚರಿಕಾ ಕ್ರಮಗಳ ಕುರಿತ ಕರಪತ್ರಗಳನ್ನು ವಿತರಿಸಲಾಗಿದ್ದು, ಜಿಲ್ಲೆಯಲ್ಲಿನ ಎಲ್ಲಾ ಕಟ್ಟಡ […]
ಕೊರೋನಾ ಎಫೆಕ್ಟ್: 1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕರೋನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿರುವ ಡಾಕ್ಟರ್ಸ್, ಆಶಾ ಕಾರ್ಯಕರ್ತೆಯರು, ನರ್ಸ್ಗಳು ಎಲ್ಲರಿಗೂ ಪ್ರತಿಯೊಬ್ಬರಿಗೂ ತಲಾ 50 ಲಕ್ಷರೂಪಾಯಿ ಮೌಲ್ಯದ ಮೆಡಿಕಲ್ ಇನ್ಶೂರೆನ್ಸ್ ಒದಗಿಸುತ್ತಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಕೊರೋನಾ ಭೀತಿಯಿಂದ ದೇಶ ತತ್ತರಿಸಿ ಹೋಗಿದೆ.ಬಡವರು, ವಲಸಿಗರು, ಮಹಿಳೆಯರು ಮತ್ತು ಇತರೆ ಶ್ರಮಿಕ ವರ್ಗದವರನ್ನು, ಸೋಂಕು ನಿವಾರಣೆಗಾಗಿ ಹೋರಾಡುತ್ತಿರುವ ಕರೊನಾ ವಾರಿಯರ್ಸ್ ಅವರನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಿಸಿದೆ. ವಿಶೇಷ ಪ್ಯಾಕೇಜ್ ಬಿಡುಗಡೆ: ಬಡವರಿಗೆ […]
ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ- ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

ಉಡುಪಿ: ವಿದೇಶದಿಂದ ಉಡುಪಿ ಜಿಲ್ಲೆಗೆ ಸುಮಾರು 1000 ಜನರು ಆಗಮಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಜಿಲ್ಲಾಡಳಿತದ, ಆರೋಗ್ಯ ಇಲಾಖೆ ಮತ್ತು ಇತರ ಅಧಿಕಾರಿಗಳು ಸುತ್ತಮುತ್ತಲಿನ ಮನೆಗಳಿಗೆ ನೋಟೀಸ್ ನೀಡುವ ಮೂಲಕ ಮಾಹಿತಿ ನೀಡಿದ್ದಾರೆ. ಅದಲ್ಲದೇ ಅಂತವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಮನೆಯಿಂದ ಹೊರಗೆ ಬಾರದಂತೆ ವಿನಂತಿಸಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಇಂದು ತಿಳಿಸಿದರು. ಹೋಮ್ ಕ್ವಾರಂಟೈನ್ ಅವಧಿ ಮುಗಿಯುವ ತನಕ ಕಟ್ಟುನಿಟ್ಟಾಗಿ ಹೊರಗಡೆ ಬರುವಂತಿಲ್ಲ. ಇದನ್ನು ಉಲ್ಲಂಘಿಸಿ ಅಂತಹ ವ್ಯಕ್ತಿಗಳು […]