ಜಿಲ್ಲಾ ಮಲೆಕುಡಿಯ ಸಂಘ: ವಾರ್ಷಿಕೋತ್ಸವ ಕಾರ್ಯಕ್ರಮ ಮುಂದೂಡಿಕೆ

ಉಡುಪಿ: ಜಿಲ್ಲಾ ಮಲೆಕುಡಿಯ ಸಂಘ(ರಿ.),ಉಡುಪಿ ಇದರ 8ನೇ ವರ್ಷದ ವಾರ್ಷಿಕೋತ್ಸವವು  ಮಾ.29 ಆದಿತ್ಯವಾರದಂದು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ನ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು 21 ದಿನಗಳ ಕಾಲ ಲಾಕ್ ಡೌನ್ ಘೋಷಣೆಯ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಮಂಗಳೂರು: ನಾಳೆಯಿಂದ ದ.ಕ. ಜಿಲ್ಲೆ ಸಂಪೂರ್ಣ ಬಂದ್ 

ಮಂಗಳೂರು: ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂದಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಿವೆ. ಜನರ […]

ಬೆಳ್ತಂಗಡಿ ತಾಲೂಕಿನ ಕರಾಯದ ವ್ಯಕ್ತಿಗೆ ಕೊರೊನ ದೃಢ: ದ.ಕ.‌ಜಿಲ್ಲೆಯಲ್ಲಿ‌ ಮತ್ತೊಂದು ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ವ್ಯಕ್ತಿ‌ ಮಾ. 21ರಂದು ದುಬೈಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು, ಬೆಂಗಳೂರಿನಿಂದ KSRTC ಬಸ್ ಮೂಲಕ ಸ್ವಗ್ರಾಮ ತಲುಪಿದ್ದರು. ಅನಾರೋಗ್ಯ ಕಾರಣದಿಂದ 24ರಂದು ಪುತ್ತೂರಿನ ಆಸ್ಪತ್ರೆ ದಾಖಲಾಗಿದ್ದು, ಗಂಟಲು ಸ್ರಾವ ತಪಾಸಣೆಗೆ ರವಾನೆ ಮಾಡಲಾಗಿತ್ತು. ಇಂದು ವರದಿಯಂತೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಕೊರೊನಾ ಪೀಡಿತನಿಗೆ ತೀವ್ರ […]

ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಮನೆ ಮನೆಗೆ ಆಹಾರ ವಸ್ತುಗಳ ಪೂರೈಕೆ: ಶಾಸಕ ಕಾಮತ್

ಮಂಗಳೂರು: ದೇಶಾದ್ಯಂತ ಜಾರಿಗೊಂಡಿರುವ ಲಾಕ್ ಡೌನ್ ಸಂಧರ್ಭದಲ್ಲಿ ತುರ್ತು ಆಹಾರ ವಸ್ತುಗಳ ಪೂರೈಕೆಯ ವಿಚಾರವಾಗಿ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಆಹಾರ ಪೂರೈಕೆ ಸಂಸ್ಥೆಗಳಾದ ಝೋಮೆಟೋ, ಊಬರ್ ಈಟ್ಸ್, ಮತ್ತಿತರ ಸಂಸ್ಥೆಗಳೊಂದಿಗೆ ಸಭೆ ನಡೆಸಿದರು. ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಕೊರೆನೋ ಭೀತಿಯು ಮುಂದಿನ ಕಠಿಣ ದಿನಗಳಿಗೆ ಸಾಕ್ಷಿಯಾಗಿದೆ. ಸದ್ಯ ದೇಶದಲ್ಲಿ ಆಹಾರ ಸಾಮಾಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸಗಳು ಆಗಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಸಂಪೂರ್ಣ ಲಾಕ್ ಡೌನ್ ಆಗುವ ಸಂಧರ್ಭದಲ್ಲಿ ಮನೆ ಮನೆಗೆ […]

ಉಡುಪಿ:ಏಕಕಾಲಕ್ಕೆ ಎಪ್ರಿಲ್-ಮೇ ಪಡಿತರ, ಒಟಿಪಿ ತೋರಿಸಿ ಪಡಿತರ ಪಡೆಯಬಹುದು

ಉಡುಪಿ:ಕೋವಿಡ್- 19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಏಕಕಾಲದಲ್ಲಿ ನೀಡಲು ಅವಕಾಶ ಕಲ್ಪಿಸಲಾಗುವುದರಿಂದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬರುವ ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿ ಇರುವ ಯಾವುದೇ ಓರ್ವ ಸದಸ್ಯರ ಆಧಾರ್ ನಂಬರ್ ಗೆ ನೋಂದಾಯಿತವಾಗಿರುವ ಮೊಬೈಲ್ ಗೆ ಬರುವ ಒಟಿಪಿ ಮೂಲಕ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಪಡಿತರ ಚೀಟಿದಾರರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ಆದಾರ್ ನೋಂದಾಯಿತವಾಗಿರುವ ಮೊಬೈಲ್ ನ್ನು ತಂದು […]