ಕುಂದಾಪುರ: ಪೊಲೀಸರ ಬಸ್ಕಿ ಅಸ್ತ್ರ ಪಾಸ್: ಅನಗತ್ಯ ಓಡಾಟಕ್ಕೆ ಬಿತ್ತು ಕಡಿವಾಣ
ಕುಂದಾಪುರ: ಕಳೆದೆರಡು ದಿನಗಳಿಂದ ನಗರದಲ್ಲಿ ಅಗತ್ಯ ಕೆಲಸದ ಹೊರತು ಅನಗತ್ಯ ಓಡಾಟ ನಡೆಸುತ್ತಿರುವ ಸಾರ್ವಜನಿಕರಿಗೆ ಪೊಲೀಸರು ಬಸ್ಕಿ ಅಸ್ತೃ ಪ್ರಯೋಗಿಸಿದ ಬೆನ್ನಲ್ಲೇ ಇದೀಗ ನಗರದಲ್ಲಿ ಅನಗತ್ಯ ಓಡಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ಶುಕ್ರವಾರ ಬೆಳಗ್ಗಿನಿಂದಲೇ ಹಾಲು, ತರಕಾರಿ, ದಿನಸಿ ವಸ್ತುಗಳನ್ನು ಖರೀದಿಸುವವರು ಒಬ್ಬೊಬ್ಬರಾಗಿಯೇ ಬರುತ್ತಿದ್ದರಿಂದ ವಾಹನಗಳ ಅನಗತ್ಯ ಓಡಾಟಕ್ಕೆ ಕಡಿವಾಣ ಬಿದ್ದಂತಾಗಿದೆ. ಎಂದಿನಂತೆ ಅಂಗಡಿಗಳು ಬಂದ್ ಆಗಿದ್ದು, ನಗರ ಪ್ರವೇಶದಲ್ಲಿ ಹಾಕಲಾದ ಎರಡೂ ಚೆಕ್ಪೋಸ್ಟ್ಗಳಲ್ಲಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಅಗತ್ಯವಿರುವವರು ಸರಿಯಾದ ಕಾರಣ ಹೇಳಿ ಚೆಕ್ಪೋಸ್ಟ್ನಿಂದ ಮುಂದಕ್ಕೆ […]
ಮಾಸ್ಕ್ ಧರಿಸದವರಿಗೆ ಹೊಡೆಯಬೇಡಿ: ಎಸ್ಪಿಯವರಿಗೆ ಜಿಲ್ಲಾಧಿಕಾರಿ ಸೂಚನೆ
ಕುಂದಾಪುರ: ಎಲ್ಲಾ ಕಡೆಯೂ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನರಿರುವ ಕಡೆ ಮಾಸ್ಕ್ ಅಗತ್ಯ ಇದೆ. ನಮ್ಮಲ್ಲಿ ಮಾಸ್ಕ್ ಅಭಾವವಿದೆ. ಮಾಸ್ಕ್ ಧರಿಸದವರಿಗೆ ಹೊಡೆಯಬೇಡಿ ಎಂದು ಈಗಾಗಲೇ ಎಸ್ಪಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಸಾರ್ವಜನಿಕರು ಈ ಬಗ್ಗೆ ತಲೆ ಕೆಡಿಸಿಕೂಳ್ಳುವುದು ಬೇಡ. ಸ್ಯಾನಿಟೈಸರ್ ಪೂರೈಕೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಲಾಕ್ಡೌನ್ ಹಿನ್ನೆಲೆ ಶುಕ್ರವಾರ ಕುಂದಾಪುರಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ […]
ಉಡುಪಿಯಲ್ಲಿ ಹೊಸದಾಗಿ 21 ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು
ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ 21 ಮಂದಿ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 124 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಎಲ್ಲರ ರಕ್ತದ ಮಾದರಿ ಹಾಗೂ ಗಂಟಲಿನ ದ್ರವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 92 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಓರ್ವನಿಗೆ ಕೊರೊನಾ ಪಾಸಿಟಿವ್ ಹಾಗೂ ಉಳಿದೆಲ್ಲರಿಗೆ ನೆಗೆಟಿವ್ ವರದಿ ಬಂದಿದೆ. ಇಂದು ದಾಖಲಾದ ಶಂಕಿತರು ಸೇರಿದಂತೆ ಒಟ್ಟು 32 […]
ಲೋಕಲ್ಯಾಣಾರ್ಥವಾಗಿ ಕೃಷ್ಣಮಠದಲ್ಲಿ ವಾಯುಸ್ತುತಿ ಪುನಶ್ಚರಣ ಹೋಮ, ಧನ್ವಂತರಿ ಯಾಗ
ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಅದಮಾರು ಮಠದ ಆಶ್ರಯದಲ್ಲಿ ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹಾಗೂ ಪರ್ಯಾಯ ಈಶಪ್ರೀಯ ಸ್ವಾಮೀಜಿಯ ಉಪಸ್ಥಿತಿಯಲ್ಲಿ ವಾಯುಸ್ತುತಿ ಪುನಶ್ಚರಣ ಹೋಮ ಹಾಗೂ ಧನ್ವಂತರಿ ಯಾಗ ನೆರವೇರಿಸಲಾಯಿತು.
ಮಂಗಳೂರಿನಲ್ಲಿ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಈ ಮಗುವನ್ನು ಮಾ. 23 ರಂದು ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 24 ರಂದು ಮಗುವಿನ ಗಂಟಲಿನ ಸ್ರಾವವನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಮಗುವಿನ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕವನ್ನು ಕಲೆಹಾಕಲಾಗುತ್ತಿದೆ […]