ಉಡುಪಿ ಜಿಲ್ಲೆಯಲ್ಲಿ ಸದ್ದಿಲ್ಲದೇ ಹಬ್ಬುತ್ತಿದೆ ಕೊರೋನಾ: ಹೆಚ್ಚುತ್ತಿದೆ ಪಾಸಿಟಿವ್ ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ವೈರಸ್ ತನ್ನ ಕಬಂದಬಾಹುವನ್ನು ನಿಧಾನವಾಗಿ ಚಾಚುತ್ತಿದ್ದು, ಇದು ಮತ್ತಷ್ಟು ವ್ಯಾಪಿಸುವ ಮುನ್ಸೂಚನೆ ನೀಡುತ್ತಿದೆ. ಇದೀಗ ಜಿಲ್ಲೆಯಲ್ಲಿ ಮತ್ತೆರಡು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದೇ ಇದಕ್ಕೆ ಸ್ಪಷ್ಟ ನಿದರ್ಶನ. ಮಾರ್ಚ್ 17ರಂದು ದುಬೈನಿಂದ ಮರಳಿದ್ದ ಜಿಲ್ಲೆಯ 35 ವರ್ಷದ ವ್ಯಕ್ತಿ ಹಾಗೂ ತ್ರಿವೇಂಡ್ರಮ್ ಬಂದಿದ್ದ 29 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಖಚಿತಗೊಂಡಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಮಾರ್ಚ್ 17 ರಂದು ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೊನಾ […]
ಉಡುಪಿಯಲ್ಲಿ ಕೊರೋನಾ ಭೀತಿ: ಪ್ರಕರಣಗಳ ಒಟ್ಟು ವಿವರ ಇಲ್ಲಿದೆ.
ಉಡುಪಿ:ಜಿಲ್ಲೆಯಲ್ಲಿ ಇದೀಗ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಳ್ಳುವ ಮೂಲಕ ಮತ್ತೆ ಜಿಲ್ಲೆಯನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯ ಒಟ್ಟು ವಿವರ ಇಲ್ಲಿದೆ: ಈ ತನಕದ ಒಟ್ಟು ನಿಗಾ/ತಪಾಸಣೆ: 1,992 ಶನಿವಾರ ಮನೆ ನಿಗಾಕ್ಕೆ ನೋಂದಣಿ: 106 14 ದಿನಗಳ ಮನೆ ನಿಗಾ ಪೂರೈಸಿದವರು: 842 28ದಿನಗಳ ಮನೆ ನಿಗಾ ಪೂರೈಸಿದವರು: 95 ಆಸ್ಪತ್ರೆಗೆ ಕ್ವಾರಂಟೈನಿಗೆ ದಾಖಲು: 30 ಈ ತನಕ ತಪಾಸಣೆಗೆ ಮಾದರಿ ರವಾನೆ: 128 ಈ ತನಕ ತಪಾಸಣೆ ವರದಿ ಸ್ವೀಕಾರ: 122(ನೆಗೆಟಿವ್) ಈ ತನಕ […]
ಉಡುಪಿಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್: ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
ಉಡುಪಿ: ಜಿಲ್ಲೆಯಲ್ಲಿ ಮತ್ತೆರಡು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಅವರು ಮಾಹಿತಿ ನೀಡಿದ್ದು, ವಿದೇಶದಿಂದ ಬಂದ 35 ವರ್ಷದ ವ್ಯಕ್ತಿ ಹಾಗೂ 29 ವರ್ಷದ ಇನ್ನೋರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇದೀಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್‌ನಿಂದ ಸಂಕಷ್ಟಗೊಂಡವರಿಗೆ 500 ಕೋಟಿ: ಟಾಟಾ ಟ್ರಸ್ಟ್
ಮುಂಬೈ: ದೇಶದಲ್ಲಿ ಹರಡುತ್ತಿರುವ ಕೊರೋನಾ ವೈರಸ್ ತಡೆಗೆ ಹಾಗೂ ಪರಿಹಾರ ಚಟುವಟಿಕೆಗಳಿಗಾಗಿ 500 ಕೋಟಿ ರೂ. ನೀಡುವುದಾಗಿ ಟಾಟಾ ಟ್ರಸ್ಟ್ ಘೋಷಿಸಿದೆ. ಭಾರತದಲ್ಲಿ ಕೊರೊನಾ ಹೊಡೆತದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ತತ್‌ಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳುವುದು ಅಗತ್ಯವಿದೆ. ಕೊರೋನಾ ವಿರುದ್ಧದ ಹೋರಾಟಕ್ಕೆ ನೆರವಾಗುವುದು ಅನಿವಾರ್ಯವಾಗಿದೆ ಎಂದು ಟಾಟಾ ಟ್ರಸ್ಟ್ ಮುಖ್ಯಸ್ಥ ರತನ್ ಟಾಟಾ ಪ್ರತಿಪಾದಿಸಿದ್ದಾರೆ. ಕೊರೋನಾ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು ಹಾಗೂ ಇತರ ಸಿಬ್ಬಂದಿಯ ಸುರಕ್ಷತೆಗಾಗಿ ಅಗತ್ಯವಿರುವ ಪರಿಕರಗಳು, ಕೊರೋನಾ ಪೀಡಿತರಿಗೆ ಗುಣಪಡಿಸಲು ಬೇಕಾಗಿರುವ […]
ಕೊರೋನಾದಿಂದ ತಪ್ಪಿಸಿಕೊಳ್ಳಲು ಲಾಕ್‌ಡೌನ್ ಅನಿವಾರ್ಯವಾಗಿತ್ತು ದಯವಿಟ್ಟು ಸಹಕರಿಸಿ : ಪ್ರಧಾನಿ ಮೋದಿ
ನವದೆಹಲಿ: ದೇಶದಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಲಾಕ್‌ಡೌನ್ ಅನಿವಾರ್ಯ. ಲಾಕ್‌ಡೌನ್ ನಿರ್ಧಾರ ಬಿಟ್ಟು ಬೇರೆ ದಾರಿ ಇರಲಿಲ್ಲ, ಇದರಿಂದ ತುಂಬಾ ಜನರಿಗೆ ತೊಂಧರೆಯಾಗಿದೆ. ಅದಕ್ಕೆ ಕ್ಷಮೆ ಇರಲಿ ಎಂದು ಪ್ರಧಾನಿ ಮೋದಿ ದೇಶದ ಜನರಲ್ಲಿ ಮನವಿ ಮಾಡಿಕೊಂಡರು. ಭಾನುವಾರ ಬೆಳಗ್ಗೆ ತಮ್ಮ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಮಾತನಾಡಿದರು. ಇದೇ ಕೋವಿಡ್-19 ಪ್ರಕರಣಗಳ ಪರೀಕ್ಷೆ ನಡೆಸುತ್ತಿರುವ ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ರೋಗಿಗಳನ್ನು ಗುಣಪಡಿಸಲು ಶ್ರಮಿಸುತ್ತಿರುವ ವೈದ್ಯರು ಸದಾ ಎಚ್ಚರಿಕೆಯಿಂದ ಇರಬೇಕು ಎಂದರು. […]